ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ ದೂರು ನೀಡಿದ್ದಾರೆ. ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು
Month: October 2023
ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್‌ಲಿಫ್ಟಿಂಗ್ ಚಾಂಪಿಯಶಿಪ್‌ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿ ಪಡೆದಿದೆ. ಪುರುಷರ ವಿಭಾಗದಲ್ಲಿ ಒಟ್ಟು 6 ಚಿನ್ನ 3 ಬೆಳ್ಳಿ, ಒಂದು ಕಂಚಿನ ಪದಕ ಪಡೆದರೆ, ಮಹಿಳಾ ವಿಭಾಗದಲ್ಲಿ ಒಟ್ಟು 5 ಚಿನ್ನ, 5 ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ
ರಜಾ ಹಿನ್ನೆಲೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್‌ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ(15) ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ಮೂಲದವರಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಳು. ವಿಟ್ಲ ಮೂಲದ ದಿಗಂತ (15)
ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು
ಯಕ್ಷಗಾನ ಪರಂಪರೆಯ ವಾಲಿ-ಸುಗ್ರೀವರ ಒಡ್ಡೋಲಗ ದಾಖಲೀಕರಣದ ವಿಡಿಯೋ ಮಧುಸೂಧನ ಅಲೆವೂರಾಯ ಅವರ ಪ್ರಸಿದ್ಧ ಯೂಟ್ಯೂಬ್ ಚಾನೆಲ್‍ನಲ್ಲಿ ಬಿಡುಗಡೆಗೊಂಡಿತು. ಮಂಗಳೂರಿನ ಪತ್ರಿಕಾಭವನದಲ್ಲಿ ವಾಲಿ ಸುಗ್ರೀವರ ಒಡ್ಡೋಲಗ ವಿಡಿಯೋ ಲೋಕಾರ್ಪಣೆಗೊಂಡಿತು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್‍ನ ಮಾಜಿ ರಾಜ್ಯಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರು
ಮಧ್ಯವಯಸ್ಕ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದಿರುವ ಘಟನೆ ನಡೆದಿದ್ದು, ಬೆಂಗಳೂರಿನ ಲಕ್ಷ್ಮಿ (43), ಬೋರಲಿಂಗಯ್ಯ (50) ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ಇವರಿಬ್ಬರು ಮನೆಯಲ್ಲಿ ಹೇಳದೇ ಬೆಂಗಳೂರಿನಿಂದ ತೆರಳಿರುವುದಾಗಿ ಪೆÇಲೀಸರಿಗೆ ಪ್ರಾಥಮಿಕ ಮಾಹಿತಿ ದೊರಕಿದೆ. ಇವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಬಹರೈನ್ ದ್ವೀಪರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿರುವ ಕಿರುಚಲನ ಚಿತ್ರ “ಎಲ್ಲಾದರೂ ಇರು ಎಂತಾದರೂ ಇರು” ಇದೀಗ ತೆರೆಗೆ ಬರಲು ಸಿದ್ಧವಾಗಿ ನಿಂತಿದೆ. ಕನ್ನಡಿಗ ಚರಣ್ ಅಕ್ಷಯ್ ರವರು ಇಂತಹ ಒಂದು ಸಾಹಸಕ್ಕೆ ಕೈ ಹಾಕಿದ್ದು, ಈ ಚಿತ್ರವು ಅಕ್ಟೋಬರ್ 27ರಂದು ಮನಾಮದಲ್ಲಿರುವ ಅಲ್ ಹಮ್ರಾ ಚಿತ್ರ ಮಂದಿರದಲ್ಲಿ ಪ್ರೀಮಿಯರ್ ಪ್ರದರ್ಶನ ಕಾಣಲಿದೆ. ಸ್ನೇಹಿತರ ಗಾಢ
ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್
ಅಕ್ರಮವಾಗಿ ಪಿಡಬ್ಲ್ಯೂಡಿ ರಸ್ತೆಯಂಚಿನಲ್ಲಿ ನಿರ್ಮಾಣ ನಡೆಸುತ್ತಿದ್ದ ನಾಲ್ಕು ಕಟ್ಟಡ ಪ್ರದೇಶಕ್ಕೆ ಸ್ವತಃ ಪಿಡಬ್ಲ್ಯೂಡಿ ಅಧಿಕಾರಿಗಳೇ ಸ್ಥಳಕ್ಕೆ ಬಂದು ಪರಿಶೀಲಿಸಿ ಕಾಮಗಾರಿ ನಡೆಸದಂತೆ ಕಟ್ಟಡ ಕಾಮಗಾರಿ ತಡೆಯೊಡ್ಡಿದ ಘಟನೆ ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಈ ಅಕ್ರಮಕ್ಕೆ ಸ್ವತಃ ಗ್ರಾ.ಪಂ. ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂಬುದಾಗಿ
ಫುಟ್ ಪಾತ್‍ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐದು ಮಂದಿಗೆ ಕಾರು ಢಿಕ್ಕಿಯಾಗಿ ಓರ್ವ ಯುವತಿ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನ ಲೇಡಿಹಿಲ್ ಬಳಿ ನಡೆದಿದೆ. ಅಪಘಾತದಲ್ಲಿ ರೂಪಶ್ರೀ (23) ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸುರತ್ಕಲ್‍ನ ಕಾನ, ಬಾಳದ ಗಂಗಾಧರ್ ಅವರ ಪುತ್ರಿಯಾದ ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ




























