Home 2023 November (Page 8)

ಉಡುಪಿ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು

ಅಮೆರಿಕ ; ನಿಯಂತ್ರಣ ತಪ್ಪಿ ಸಮುದ್ರಕ್ಕೆ ಬಿದ್ದ ವಿಮಾನ

ಅಮೆರಿಕ ನೌಕಾಪಡೆಯ ಬೃಹತ್ ಕಣ್ಗಾವಲು ವಿಮಾನವೊಂದು ರನ್‍ವೇಯಲ್ಲಿ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ 9 ಜನರಿದ್ದು, ಎಲ್ಲರೂ ಈಜಿ ದಡ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಸಮುದ್ರದಲ್ಲಿ ತೇಲುತ್ತಿದ್ದ ದೃಶ್ಯ ದೊರೆತಿದೆ. ಹವಾಯಿ ಮೆರೈನ್ ಕಾರ್ಪ್ಸ್ ಬೇಸ್‍ನಲ್ಲಿ ಈ ಘಟನೆ ನಡೆದಿದೆ. ಈ

ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಸುರಕ್ಷತೆಗಾಗಿ ಪ್ರಾರ್ಥನೆ

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.`ಕಾರ್ಮಿಕರು ಆದಷ್ಟು ಬೇಗ ಸುರಕ್ಷಿತವಾಗಿ ಹೊರಬರಲು ನಾವು ಜಗನ್ನಾಥನನ್ನು ಪ್ರಾರ್ಥಿಸುತ್ತಿದ್ದೇವೆ. ಸಿಕ್ಕಿಬಿದ್ದಿರುವ 41

ಸುರತ್ಕಲ್‍ ; ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಯುವಕ – ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ

ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ

ಮಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿ.ವೈ.ವಿಜಯೇಂದ್ರ

ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ

ಬ್ರಹ್ಮಾವರ: ಕೃಷಿ ಗದ್ದೆಯಲ್ಲಿ ಭತ್ತದ ಕಟಾವು ಯಂತ್ರಗಳದ್ದೇ ಸದ್ದು..!

ಬ್ರಹ್ಮಾವರ : ಕರಾವಳಿಯಲ್ಲಿ ಈ ಬಾರಿ ಭತ್ತದ ಬೇಸಾಯ ಮಾಡಿದ ರೈತರಲ್ಲಿ ಕೆಲವು ಭಾಗದಲ್ಲಿ ಉತ್ತಮ ಇಳುವರಿ ಬಂದರೂ ಗದ್ದೆಯಿಂದ ಮನೆಗೆ ತರಲು ಅಕಾಲಿಕ ಮಳೆರಾಯ ತೊಂದರೆ ಕೊಟ್ಟರೂ, ದೀಪಾವಳಿಯ ಬಳಿಕ ಕಟಾವಿಗೆ ವೇಗ ಹೆಚ್ಚಿದೆ. ಬಹತೇಕ ಕೃಷಿಕರು ಕೂಲಿ ಆಳುಗಳ ಕೊರತೆಯಿಂದ ಯಾಂತ್ರಿಕೃತ ಕಟಾವಿಗೆ ಹೊಂದಿಕೊಂಡ ಕಾರಣ, ನದಿ ತೀರದ ತಗ್ಗು ಪ್ರದೇಶದ ಗದ್ದೆಯಲ್ಲಿ ನೀರು

ಬೆಂಗಳೂರು: ಕಂಬಳ, ಆಹ್ವಾನ ಪತ್ರಿಕೆಯಿಂದ ಬ್ರಿಜ್ ಭೂಷಣ್‍ನ್ನು ಕೈಬಿಟ್ಟ ಸಂಘಟಕರು

`ಬೆಂಗಳೂರು ಕಂಬಳ’ದಲ್ಲಿ ಭಾರತ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ ಭಾಗವಹಿಸುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಘಟಕರು ಅವರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈಬಿಟ್ಟಿದ್ದಾರೆ. ನ.25 ಮತ್ತು 26ರಂದು ಕಂಬಳ ನಡೆಯಲಿದ್ದು, 25ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕುಸ್ತಿಪಟುಗಳನ್ನು

ಬೆಳ್ತಂಗಡಿ : ಡಿ.17 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ತಯಾರಿ ಸಭೆಯು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಡಿ. ಯದುಪತಿ ಗೌಡರ ಅಧ್ಯಕ್ಷತೆಯಲ್ಲಿ ವಾಣಿ ಕಾಲೇಜಿನಲ್ಲಿ ಜರಗಿತು. ಸಭೆಯ ತೀರ್ಮಾನದಂತೆ ದಶಂಬರ 17 ಆದಿತ್ಯವಾರದಂದು ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಮ್ಮೇಳನ ಜರಗಲಿದೆ. ಸುವರ್ಣ ಕರ್ನಾಟಕ ವರ್ಷವಾದದ್ದರಿಂದ

ಪಡುಬಿದ್ರಿ: ಎರ್ಮಾಳಿನ ಕೋಳಿಯಂಕಕ್ಕೆ ದಾಳಿ ಮೂವರು ವಶಕ್ಕೆ

ತೆಂಕ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಅಕ್ರಮವಾಗಿ ನಡೆಸುತ್ತಿದ್ದ ಕೋಳಿಯಂಕಕ್ಕೆ ದಾಳಿ ಮಾಡಿದ ಪೊಲೀಸರು ಮೂವರು ಸಹಿತ ಏಳು ಕೋಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಪಣಿಯೂರು ನಿವಾಸಿಗಳಾದ ಸುರೇಶ್, ಸುಕೇಶ್ ಹಾಗೂ ಕಾಪು ನಿವಾಸಿ ನಾಗೇಶ್ ಬಂಧಿತರು. ಬಹಳಷ್ಟು ಮಂದಿ ಪೊಲೀಸ್ ದಾಳಿಯ ವಿಷಯ ತಿಳಿದು ಪಲಾಯನ ಮಾಡಿದ್ದು ಅವರ ಗುರುತು ಪತ್ತೆಯಾಗಿದೆ. ಅವರನ್ನು ಶೀಘ್ರವಾಗಿ

ಬಹರೈನ್: ಡಿ.29ರಂದು “ಮಿಸ್ಟರ್ ಮದಿಮಯೆ” ತುಳು ಸಿನಿಮಾದ ಪ್ರೀಮಿಯರ್ ಪ್ರದರ್ಶನ

ಬಹರೈನ್ ; ಎಂ.ಎಂ.ಎಂ ಗ್ರೂಫ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡು ಮೊದಲ ಬಾರಿಗೆ ನಟ ಸಾಯಿಕೃಷ್ಣರವರು ಪೂರ್ಣಪ್ರಮಾಣದ ನಾಯಕ ನಟನಾಗಿ ಅಭಿನಯಿಸಿರುವ “ಮಿಸ್ಟರ್ ಮದಿಮಯೆ ” ಚಿತ್ರದ ಪೆÇೀಸ್ಟರ್ ಹಾಗು ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಸಮಾರಂಭವು ಕನ್ನಡ ಭವನದ ಸಭಾಂಗಣದಲ್ಲಿ ಜರುಗಿತು. ದ್ವೀಪದ ಕನ್ನಡಿಗ ಉದ್ಯಮಿ ರೊಯ್ಸ್ಟಾನ್ ಫೆರ್ನಾಂಡಿಸ್