Yearly Archives: 2023

ಪ್ರತಿಭಾನ್ವಿತಾ ವಿದ್ಯಾರ್ಥಿನಿ ಕ್ಯಾನ್ಸರ್ ಗೆ ಬಲಿ.ದುಖಃ ಸಾಗರದಲ್ಲಿ ಕುಟುಂಬಸ್ಥರು.

ಶಿರ್ವ:ಹೂವಾಗಿ ಅರಳುವ ಮುನ್ನವೇ ವಿಧಿ ಮುಗ್ದ ಹೆಣ್ಣು ಮಗುವಿನ‌ ಬದುಕನ್ನೇ ಕಸಿದು ಬಿಟ್ಟಿದೆ.ನಗು ನಗುತ್ತಾ ಎಲ್ಲರೊಂದಿಗೂ ಬೆರೆತು ಸ್ನೇಹ ಜೀವಿಯಾಗಿದ್ದ ಮುಗ್ದ ಯುವತಿ ವಿಧಿಯಾಟಕ್ಕೆ ಬಲಿಯಾಗಿದ್ದಾಳೆ.ಕ್ಯಾನ್ಸರ್ ಎಂಬ ಮಹಾಮಾರಿ ಅಕೆಯನ್ನ ಬಲಿ ಪಡೆದುಕೊಂಡಿದೆ. ಉಡುಪಿಯ...

ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆ.2 ಮತ್ತು 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ

ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಮೇಳದ ಅಧ್ಯಕ್ಷ ಜಯರಾಮ್...

ಬೆಳ್ತಂಗಡಿ: ಸ್ವರಾಜ್ ಆತ್ಮಹತ್ಯೆಗೆ ಲೋನ್ ಆ್ಯಪ್ ಕಿರುಕುಳ ಕಾರಣವೇ?

ಬೆಳ್ತಂಗಡಿಯ ಪುದುವೆಟ್ಟುನಲ್ಲಿ ಗುರುವಾರ ಕಬಡ್ಡಿ ಆಟಗಾರ, 24ರ ಹರೆಯದ ಸ್ವರಾಜ್ ಆತ್ಮಹತ್ಯೆ ಮಾಡಿಕೊಳ್ಳಲು ಲೋನ್ ಆ್ಯಪ್ ಕಿರುಕುಳವೇ ಕಾರಣ ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲಾ ಮಟ್ಟದ ಕಬಡ್ಡಿ ಆಟಗಾರ, ಉಜಿರೆಯ ಖಾಸಗಿ...

ಸೆ.2-6 ಆಳ್ವಾಸ್ ನಲ್ಲಿ ನಾಯಿಮರಿ ನಾಟಕ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್...

ಬಿಲ್ಲವ ಸೇವಾ ಸಂಘ ಕಾಸರಗೋಡು ; ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಬಿಲ್ಲವ ಸೇವಾ ಸಂಘ(ರಿ ) ಕರಂದಕ್ಕಾಡ್ ಕಾಸರಗೋಡು, ಇದರ ಆಶ್ರಯದಲ್ಲಿ 169ನೇ ಶ್ರೀ ನಾರಾಯಣ ಗುರು ಜಯಂತಿಯನ್ನು ಶ್ರೀ ನಾರಾಯಣ ಗುರು ಸಭಾ ಮಂಟಪದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸಭೆಯಲ್ಲಿ ಶ್ರೀ ಕೇಶವ...

ಅವಧಿ ಪೂರ್ವದಲ್ಲೇ ತುಂಬೆ ವೆಂಟೆಡ್ ಡ್ಯಾಂನಲ್ಲಿ ಗೇಟ್‍ಗಳನ್ನು ಮುಚ್ಚಿ ನೀರು ಸಂಗ್ರಹಣೆ

ಇನ್ನೂ ಮಳೆಗಾಲ ಮುಗಿದಿಲ್ಲ. ಅದಾಗಲೇ ತುಂಬೆ ವೆಂಟೆಡ್ ಡ್ಯಾಂನಲ್ಲಿ ಗೇಟ್‍ಗಳನ್ನು ಮುಚ್ಚಿ ನೀರು ಸಂಗ್ರಹಣೆ ಆರಂಭಿಸಲಾಗಿದೆ. ಪ್ರತೀ ವರ್ಷ ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿ ಡ್ಯಾಂಲ್ಲಿ ನೀರು ಸಂಗ್ರಹಣ ಆರಂಭವಾಗುತ್ತಿದ್ದರೆ ಈ ಬಾರಿ ಅವಧಿಗಿಂತ...

ಉಡುಪಿ: ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ-ಗಾಯಾಳು ಅಸ್ಪತ್ರೆಗೆ ದಾಖಲು

ಉಡುಪಿಯ ಜಿಲ್ಲೆಯ ಮುದ್ದೂರು ಎಂಬಲ್ಲಿ ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ದ್ವೇಷದ...

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ...

ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸಾಮೂಹಿಕ ಸಮುದ್ರ ಪೂಜೆ

ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ...

ಸುಳ್ಯ: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ, ಮೂವರು ಮೃತ್ಯು

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಸುಳ್ಯದ ಅಡ್ಕಾರಿನಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರು...

Most Read