Home 2024

ಮಂಗಳೂರು : ಶ್ರೀ ಕೃಷ್ಣ ಭಜನಾ ಮಂದಿರ – ರಜತ ಮಹೋತ್ಸವ ಹಾಗೂ ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ, ಪುನಃ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಹಾಗೂ ಏಕಹಾ ಭಜನಾ ಮಹೋತ್ಸವವು ಇದೇ ಬರುವ ಮಾರ್ಚ್ 1 ರಿಂದ 4, 2025 ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯ ಕಾರ್ಯಕ್ರಮವು ಇತ್ತೀಚಿಗೆ ಭಜನಾ ಮಂದಿರದ ಆವರಣದಲ್ಲಿ ನಡೆಯಿತು. ಶ್ರೀ ಕೃಷ್ಣ ಭಜನಾ ಮಂದಿರದ ರಜತ ಮಹೋತ್ಸವ ಸಮಿತಿಯ

ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ವಿನೂತನ ಶಸ್ತ್ರಚಿಕಿತ್ಸೆಯ ಮೂಲಕ ಹೃದಯದ ರಂಧ್ರವನ್ನು ಮುಚ್ಚಲಾಗಿದೆ

ಹೃದಯದ ಜನ್ಮ ದೋಷವನ್ನು ಹೊಂದಿರುವ 35 ವರ್ಷ ವಯಸ್ಸಿನ ಮಹಿಳೆಗೆ KSHEMA ನಲ್ಲಿ ಸಣ್ಣ ಮುಂಭಾಗದ ಥೋರಾಕೋಟಮಿ ಮೂಲಕ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಯಿತು. ಬಲ ಮುಂಭಾಗದ ಎದೆಯ ಗೋಡೆಯಲ್ಲಿ 2 .5 ಇಂಚಿನ ಛೇದನವನ್ನು ಬಳಸುವುದು (ಸ್ಟರ್ನಲ್ ವಿಭಜನೆಯನ್ನು ತಪ್ಪಿಸುವುದು) ಮತ್ತು ತೊಡೆಸಂದು ಮತ್ತು ಕುತ್ತಿಗೆಯಲ್ಲಿನ ಕೊಳವೆಗಳ ಮೂಲಕ ರೋಗಿಯನ್ನು ಹೃದಯ ಶ್ವಾಸಕೋಶದ

ಮೂಡುಬಿದಿರೆ:ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ

ಮೂಡುಬಿದಿರೆ: ‘ಆಧುನಿಕ ಜಗತ್ತಿನಲ್ಲಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಅಗತ್ಯ’ ಎಂದು ಭಾರತ ಸರ್ಕಾರದ ಆಯುಷ್ ಸಚಿವಾಲಯದ ನಿರ್ದೇಶಕ ಡಾ. ರಾಘವೇಂದ್ರ ರಾವ್ ಹೇಳಿದರು.ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಕರಿಗಾಗಿ ನಡೆದ ಆರು ದಿನಗಳ ರಾಷ್ಟ್ರೀಯ ಮಟ್ಟದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ

ಮೂಡುಬಿದಿರೆ : ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ

ಮೂಡುಬಿದಿರೆ : ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು.ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು

ಮಂಜೇಶ್ವರ: ಪೆರಿಯ ಜೋಡಿ ಕೊಲೆ ಪ್ರಕರಣದಲ್ಲಿ ಸಿಪಿಐಎಂ ಮಾಜಿ ಶಾಸಕ ಕೆವಿ ಕುಂಞಿರಾಮನ್ ಸೇರಿದಂತೆ 14 ಆರೋಪಿಗಳು ತಪ್ಪಿತಸ್ಥರೆಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಮೊದಲನೇ ಆರೋಪಿಯಾಗಿ ಸಿಪಿಎಂ ನೇತಾರರಾದ ಎ. ಪೀತಾಂಬರನ್, ಎರಡನೇ ಆರೋಪಿಯಾಗಿ ಸಜಿ ಸಿ ಜಾರ್ಜ್ ಎಂಬ ಸಜಿ, ಮೂರನೇ ಆರೋಪಿಯಾಗಿ ಕೆ.ಎಂ. ಸುರೆಶ್, ನಾಲ್ಕನೇ ಆರೋಪಿಯಾಗಿ ಕೆ ಅನಿಲ್ ಕುಮಾರ್ ಎಂಬ

ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ

ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ

ಸುಳ್ಯ: ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕೇಂದ್ರದ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಮಟ್ಟದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಿಚಾರ ಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಂಜ ವಲಯದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಸಲಾಯಿತು. ಸದ್ರಿ ಕಾರ್ಯಕ್ರಮವನ್ನು ಡಾ|| ದೇವಿಪ್ರಸಾದ್ ಕಾನತ್ತೂರು, ಅಧ್ಯಕ್ಷರು,

ಪಣಂಬೂರು ಬೀಚ್‌ನಲ್ಲಿ ಮರಳಿನಲ್ಲಿ ಸಾಂತಾಕ್ಲಾಸ್ ರಚನೆ

ಕ್ರಿಸ್ಮಸ್ ಆಚರಣೆಯ ಪ್ರಯುಕ್ತ ಮರಳು ಶಿಲ್ಪಕಲಾವಿದರು ಪಣಂಬೂರು ಬೀಚ್‌ನಲ್ಲಿ ಮರಳಿನಲ್ಲಿ ಸಾಂತಾಕ್ಲಾಸ್ ರಚಿಸಿ ಗಮನ ಸೆಳೆದಿದ್ದಾರೆ. ಮರಳು ಶಿಲ್ಪ ಕಲಾವಿದರಾದ ಪ್ರಸಾದ್ ಮಲ್ಯ ಸುರತ್ಕಲ್, ಪ್ರಣಮ್ ದೇವಾಡಿಗ ಉಡುಪಿ ಅವರು ಮರಳಿನಲ್ಲಿ ಸಾಂತಾಕ್ಲಾಸ್ ರಚಿಸಿ ಪ್ರವಾಸಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಂಗಳೂರು : ರಾಜ್ಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಎಸ್.ಜೆ.ಇ.ಸಿ ಮಹಿಳಾ ಥ್ರೋ ಬಾಲ್ ತಂಡವು ರನ್ನರ್ಸ್ ಅಪ್

ವಿಟಿಯು ರಾಜ್ಯ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಎಸ್.ಜೆ.ಇ.ಸಿ ಮಹಿಳಾ ಥ್ರೋ ಬಾಲ್ ತಂಡವು ರನ್ನರ್ಸ್ ಅಪ್ ಆಗಿ ಹೊರಹೊಮ್ಮಿತು. ಮಂಗಳೂರಿನ ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾ ತಂಡವು ಇತ್ತೀಚೆಗೆ ನಡೆದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಪ್ರಶಸ್ತಿಗಳನ್ನು ಗೆದ್ದುಕೊಂಡಿತು. ಕೆಎಲ್‌ಇಸಿಇಟಿ