Home 2024 January

ಕುಂದಾಪುರ: ಸಮಾನ ಮನಸ್ಕ ಸಂಘಟನೆಗಳಿಂದ ಮಾನವ ಸರಪಳಿ ಸಮಾರೋಪ

ಕುಂದಾಪುರ: ಎಲ್ಲಿಯವರೆಗೆ ಬ್ರಿಟನ್ ದೇಶದ ಪಾರ್ಲಿಮೆಂಟ್ ಕಟ್ಟಡದ ಮಧ್ಯೆ ಗಾಂಧಿ ಪ್ರತಿಮೆ ಇರುತ್ತದೆಯೋ ಅಲ್ಲಿಯ ತನಕ ಗಾಂಧೀಜಿಯವರ ಚಿಂತನೆಗಳಿಗೆ ಸೋಲಿಲ್ಲ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಮಹಾತ್ಮ ಗಾಂಧಿಜೀಯವರ ಹುತಾತ್ಮ ದಿನದ ಅಂಗವಾಗಿ ಸಮಾನ ಮನಸ್ಕ ಸಂಘಟನೆಗಳಿಂದ, ರಾಷ್ಟ್ರೀಯ ಹೆದ್ದಾರಿ-66

ಸೌತಡ್ಕ : ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ’

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ ನಡೆಯಿತು.ರಾಜ್ಯ

ಕಲ್ಲಡ್ಕ : ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ

ಕಲ್ಲಡ್ಕ ಶ್ರೀ ರಾಮ ಮಂದಿರದಲ್ಲಿ ವಿದ್ಯಾಗಣಪತಿ ದೇವರ ಪ್ರತಿಷ್ಠೆಯ ಅಂಗವಾಗಿ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಅವಧೂತ ವಿನಯ ಗುರೂಜಿ, ಕಲ್ಲಡ್ಕ ಪ್ರಭಾಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಬೈಲೂರು : ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ

ಕಾರ್ಕಳ ತಾಲೂಕಿನ ಬೈಲೂರು ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅಧ್ಯಕ್ಷರಾದ ಸುರೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ತುಳು ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರ್,ಮಹಾಮಂಡಲದ ಕೋಶಾಧಿಕಾರಿ ಗಣೇಶ್ ಪೂಜಾರಿ,ಸತೀಶ್ ಪೂಜಾರಿ ಹಾಗೂ

ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ

ಮೂಡುಬಿದಿರೆ: ಆಳ್ವಾಸ್ ವಿದ್ಯಾರ್ಥಿಯ ಸಂಶೋಧನಾ ಯೋಜನೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸೆಂಟ್ರಲ್ ಸ್ಕೂಲ್‌ನ 9ನೇ ತರಗತಿಯ ವಿದ್ಯಾರ್ಥಿ ಅಮೋಘ್ ಎ.ಹೆಬ್ಬಾರ್ ಮಾರ್ಚ್ ತಿಂಗಳಲ್ಲಿ ಉತ್ತರ ಆಫ್ರಿಕಾದ ಟ್ಯುನೀಶಿಯಾದಲ್ಲಿ ನಡೆಯುವ ಅಂತರರಾಷ್ಟ್ರೀಯ ವಾರ್ಷಿಕ ಮೆಗಾ ಸೈನ್ಸ್ ಫೆಸ್ಟಿವಲ್, `ಕೀಟ ಮತ್ತು ಕಳೆಗಳನ್ನು ನಿಯಂತ್ರಿಸಲು ನೈಸರ್ಗಿಕ ವಿಧಾನ’ ಶೀರ್ಷಿಕೆಯ ಸಂಶೋಧನಾ ಯೋಜನೆಯನ್ನು ಪ್ರಸ್ತುತಪಡಿಸಲು ಅರ್ಹತೆ

ಉಳ್ಳಾಲ : ಪಿಕಪ್- ಗೂಡ್ಸ್ ಲಾರಿ ನಡುವೆ ಅಪ್ಪಚ್ಚಿಯಾದ ಕಾರು

ಉಳ್ಳಾಲ : ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ ಮೂವರು ಯುವತಿಯರಿದ್ದ ಕಾರು ತೆರಳುವಾಗ ,

ಫೆ.2ರಂದು ಕರಾವಳಿಯಲ್ಲಿ ಕ್ಲಾಂತ ಸಿನಿಮಾ ಬಿಡುಗಡೆ

ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಬೇಸ್ಡ್ ಸಿನಿಮಾ `ಕ್ಲಾಂತ ಕರಾವಳಿಯ ಸಿನಿಮಾ ಮಂದಿರದಲ್ಲಿ ಫೆ.2ರಂದು ಬಿಡುಗಡೆ ಕಾಣಲಿದೆ. ಚಿತ್ರದ ಬಹುತೇಕ ಭಾಗ ಕರಾವಳಿಯಲ್ಲಿಯೇ ಚಿತ್ರೀಸಲಾಗಿದೆ ಎಂದು ಚಿತ್ರದ ನಿರ್ದೇಶಕ ವೈಭವ್ ಪ್ರಶಾಂತ್ ಹೇಳಿದರು.ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಮಣ್ಣಿನ ಮಹಿಮೆ, ಆಚಾರ ವಿಚಾರ,

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಗುಣಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಜನವರಿ 22ರಂದು ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ

ಮೂಡುಬಿದಿರೆ: ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ : ಎಡಪದವು ವಿವೇಕಾನಂದ ಪ.ಪೂ ಕಾಲೇಜಿನ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡುಬಿದಿರೆ: ಇಂಟರ್‌ನ್ಯಾಷನಲ್ ಫ್ಲೋರ್ ಬಾಲ್ ಫೆಡರೇಶನ್ ಹಾಗೂ ಫ್ಲೋರ್ ಬಾಲ್ ಅಸೋಸಿಯೇಷನ್ ತಮಿಳುನಾಡು ಮತ್ತು ಫಿಟ್ ಇಂಡಿಯಾ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಜ.25-28 ವರೆಗೆ ನಡೆದ 17ನೇ ರಾಷ್ಟ್ರೀಯ ಫ್ಲೋರ್ ಬಾಲ್ ಚಾಂಪಿಯನ್ ಶಿಫ್ 2023-24ರಲ್ಲಿ ಕರ್ನಾಟಕ ತಂಡವು ಜಯಗಳಿಸಿದ್ದು, ಈ ತಂಡದಲ್ಲಿ ಎಡಪದವು ಸ್ವಾಮಿ ವಿವೇಕಾನಂದ ಪ.ಪೂ ಕಾಲೇಜಿನ ನಾಲ್ವರು