Home 2024 April (Page 2)

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ

ಸುಳ್ಯ:  ಭಕ್ತಿ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸುಳ್ಯ:  ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ…ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು… ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ

ಮಂಡೆಕೋಲು: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

ಸುಳ್ಯ: ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನಲ್ಲದೆ ದುಃಖಿತ ಮನಸ್ಸಿಗೆ ನೆಮ್ಮದಿಯ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.  ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು 2023ರ ಸೆ. 13ರಂದೇ ಘೋಷಿಸಲಾಗಿದೆ. ಈಗ ಏಳು ತಿಂಗಳುಗಳಾಗುತ್ತಾ ಬಂತು. 48 ಲಕ್ಷ ಹೆಕ್ಟೇರ್ ನಲ್ಲಿ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಅಪ್ಪಳಿಸಿದ ಸುಂಟರಗಾಳಿ: ಐವರ ಸಾವು: 33ಮಂದಿಗೆ ಗಾಯ

ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ನಗರದ ಬೈಯುನ್ ಜಿಲ್ಲೆಯಲ್ಲಿ ಪ್ರಬಲವಾದ ಸುಂಟರಗಾಳಿ ಬೀಸಿದೆ. ಪರಿಣಾಮ 141 ಕಾರ್ಖಾನೆ ಕಟ್ಟಡಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೈಯುನ್ ಜಿಲ್ಲೆಯ ಲಿಯಾಂಗ್ಟಿಯಾನ್ ಹಳ್ಳಿಯಲ್ಲಿರುವ ಹವಾಮಾನ

ಕೆ.ಎಸ್. ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್: ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ: ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿಕೆ

ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ

ಪುತ್ತೂರು: ಮುಖ್ಯ ರಸ್ತೆಗೆ ಬಿದ್ದ ಮಾವಿನ ಮರ: ಸಾರ್ವಜನಿಕರು, ವಾಹನ ಚಾಲಕರು ಪಾರು

ಪುತ್ತೂರು: ಬೊಳುವಾರಿನಲ್ಲಿ ಮಾವಿನ ಮರವೊಂದು ರಸ್ತೆಗೆ ಬಿದ್ದು  ಸಾರ್ವಜನಿಕರು, ವಾಹನ ಚಾಲಕರು ಅಪಾಯದಿಂದ ಪಾರಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಮೆ ಶಾಸಕರುಭೇಟಿ ನೀಡಿ ಪರಿಶೀಲನೆ ನಡೆಸಿದು, ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಧ್ಯಮ ಗಾತ್ರದ ಮಾವಿನ ಮರ ರಸ್ತೆಗೆ ಮುರಿದು ಬಿದ್ದಿತ್ತು. ಸಾರ್ವಜನಿಕರು, ವಾಹನಗಳು ರಸ್ತೆಯಲ್ಲಿ

ಚುನಾವಣಾ ಆಯೋಗದ ನಿಯಮ ಮೀರಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ : ಜುಬಿನ್

ಪುತ್ತೂರು: ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟೆಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆ ಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು.

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಮುಂಜಾಜೆ ಬೆಂಗಳೂರಿನ ಅವರ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46

ಉಡುಪಿ ಚಿಕ್ಕಮಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ : ಕಾರ್ಕಳದಲ್ಲಿ ಸಿದ್ಧತೆ

ಕಾರ್ಕಳ: ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಕಳದಲ್ಲಿ ಒಟ್ಟು 209 ಮತಗಟ್ಟೆಗಳಿದ್ದು, 1000 ಚುನಾವಣಾ ಅಧಿಕಾರಿಗಳು ನಿಯುಕ್ತಿಗೊಂಡಿದ್ದಾರೆ. 587 ಸಹಾಯಕರಿದ್ದು 57 ಬಸ್‌ಗಳು 21 ಸೆಕ್ಟರ್ ಅಧಿಕಾರಿಗಳಿದ್ದು ಕಾರ್ಕಳ ಎಂಪಿಎಂ ಕಾಲೇಜಿನಲ್ಲಿ ಸಿದ್ಧತೆಗಳು ನಡೆದು ಪೂರ್ಣಗೊಂಡಿದೆ ಎಂದು