Home 2024 June (Page 3)

ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶ ಜಲಾವೃತ

ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯ ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಜಿಲ್ಲೆಯಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ

ಉಳ್ಳಾಲದ ಮದನಿ ನಗರದಲ್ಲಿ ನಡೆದ ದುರಂತ ಹಿನ್ನೆಲೆ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಭೇಟಿ

ಉಳ್ಳಾಲದ ಮದನಿ ನಗರದಲ್ಲಿ ಕಂಪೌoಡ್ ಕುಸಿದು ನಾಲ್ವರು ಮೃತಪಟ್ಟ ಸ್ಥಳಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಜೊತೆಗೆ ಸ್ಪೀಕರ್ ಖಾದರ್ ಅವರ ಜೊತೆಗಿದ್ದರು.ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, ಗ್ರಾ.ಪಂ ಅಧಿಕಾರಿಗಳ ಮೂಲಕ ಅಪಾಯಕಾರಿ ಪಾಯಿಂಟ್‌ಗಳನ್ನು ಸರ್ವೇ ನಡೆಸಲು ಸೂಚಿಸಲಾಗಿದೆ.

ಮಂಗಳೂರು : ಹೀರೋ ಮೋಟೋಕಾರ್ಪ್‌ನ ಎಕ್ಸ್‌ಕ್ಲೂಸಿವ್ ಎಲೆಕ್ಟ್ರಿಕ್ ಹೀರೋ ವಿಡಾ ಹಬ್ ಶೋರೂಂ ಮಂಗಳೂರಿನಲ್ಲಿ ಲೋಕಾರ್ಪಣೆ…

ಭಾರತೀಯ ಗ್ರಾಹಕರ ವಿವಿಧ ಬೇಡಿಕೆಗಳಿಗೆ ಅನುಗುಣವಾಗಿ ದ್ವಿಚಕ್ರವಾಹನಗಳ ಮಾರಾಟ ಮತ್ತು ಸೇವೆಯಲ್ಲಿ ಮುಂಚೂಣಿಯಲ್ಲಿರುವ ಹೀರೋ ಮೋಟೋಕಾರ್ಪ್‌ನ ವಿಡಾ ಹಬ್ ಎಕ್ಸ್‌ಕ್ಲೂಸಿವ್ ನೂತನ ಎಲೆಕ್ಟ್ರಿಕ್ ಶೋರೂಂ ಮಂಗಳೂರಿನ ವೆಲೆನ್ಸಿಯಾದಲ್ಲಿ ಲೋಕಾರ್ಪಣೆಗೊಂಡಿತು. ದೇಶದ ಅತ್ಯುನ್ನತ ದ್ವಿಚಕ್ರವಾಹನಗಳ ಉತ್ಪಾದನಾ ಕ್ಷೇತ್ರದಲ್ಲಿ ಮೈಲಿಗಲ್ಲು ಸಾಧಿಸಿರುವ ಹೀರೋ ಮೋಟೋಕಾರ್ಪ್

ಈ ವಿಶ್ವದಲ್ಲಿ ನೀನೊಂದು ಬೊಟ್ಟು ಕೂಡ ಅಲ್ಲ

ನಮ್ಮೂರಿನ ಇಲ್ಲವೇ ಯಾವುದೇ ಒಂದು ಊರಿನ ಚಿತ್ರ ಅಲ್ಲವೇ ನೆಲಪಟ ಬಿಡಿಸಿದರೆ ಅದರಲ್ಲಿ ನೀವು ಇಲ್ಲವೇ ನಾವೊಂದು ಬೊಟ್ಟು.ಕರ್ನಾಟಕದ ಅಥವಾ ಭಾರತದ ಭೂಪಟ ಬರೆದರೆ ಪೇರೂರು ಇಲ್ಲವೇ ನಿಮ್ಮೂರು ಒಂದು ಬೊಟ್ಟು. ನಮ್ಮ ಲೋಕ ಭೂಪಟದಲ್ಲಿ ಕರ್ನಾಟಕ ಒಂದು ಬೊಟ್ಟು. ನೇಸರ ಸಂಸಾರದ ಚಿತ್ರದಲ್ಲಿ ಭೂಮಿಯೇ ಒಂದು ಬೊಟ್ಟು. ನಮ್ಮ ಬೆಂಗದಿರ ಕುಟುಂಬದಲ್ಲಿ ಎಂಟು ಗ್ರಹಗಳಿರುವುದು

ಬನ್ನೂರು : ಧರೆ ಕುಸಿತ ಮನೆಗೆ ಹಾನಿ

ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಭಾರೀ ಮಳೆಗೆ ಧರೆ ಕುಸಿತಗೊಂಡು ಮನೆ ಹಾನಿಗೊಳಗಾಗಿದ್ದು ,ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಶಾಸಕರು ಮನೆಯ ಮಾಲಿಕ ಮಜೀದ್ ರವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಶಾಸಕರು ಬೆಂಗಳೂರಿನಲ್ಲಿದ್ದು ಘಟನಾ ಸ್ಥಳಕೆ ಶಾಸಕರ ಕಚೇರಿ ಸಿಬಂದಿಗಳು ಭೇಟಿ ನೀಡಿದ್ದು ಕುಟುಂಬಕ್ಕೆ ಕರೆಮಾಡಿದ ಶಾಸಕರು

ಕಡಂದಲೆ : ಮನೆಯ ಮೇಲೆ ಮರ ಬಿದ್ದು ಹಾನಿ

ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ. ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಸ್ಥಳಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿನೇಶ್

ಮಂಗಳೂರು: ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ಮೃತ್ಯು

ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ. ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ

ಜೂನ್ 25 ವಿಶ್ವ ತೊನ್ನು ಜಾಗೃತಿ ದಿನ

ತೊನ್ನು ಏನಿದರ ಮರ್ಮ? ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು

ಎಲ್ಲಾ ಓಕೆ ಗಾಂಜಾ ಯಾಕೆ?

ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ.

ಉಡುಪಿ : ತಂತಿಬೇಲಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಉಡುಪಿ : ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯೊಂದು ಸಿಲುಕಿಕೊಂಡಿತ್ತು. ತಂತಿಯು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿದ್ದ ಕಾರಣ ಚಿರತೆ