ಮೂಡುಬಿದಿರೆ: ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ, ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು “ಬಿ” ಗ್ರೇಡ್ ಮಾನ್ಯತೆ
Month: July 2024
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ (ಅಕ್ಕರ) ಅವರು ತಿಳಿಸಿರುತ್ತಾರೆ. ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ
ವಿದ್ಯುತ್ ಪ್ರವಹಿಸುತ್ತಿದ್ದ ವಿದ್ಯುತ್ ಕಂಬಕೇರಿದ ಗುತ್ತಿಗೆ ಕಾರ್ಮಿಕನೋರ್ವ ವಿದ್ಯುತ್ ಶ್ವಾಕ್ ನಿಂದ ಕಂಬದಿಂದ ಕೆಳಗೆಬಿದ್ದು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿಯ ನಡಿಪಟ್ಣ ಎಂಬಲ್ಲಿ ನಡೆದಿದೆ. ಕಡಲು ಕೊರೆತ ಹಿನ್ನಲೆಯಲ್ಲಿ ಕಂಬ ಬದಲಿಸುವ ಗುತ್ತಿಗೆಯನ್ನು ಕಾರ್ಕಳ ಮೂಲದ ಅಕ್ಷತ್ ಕುಮಾರ್ ಎಂಬವರಿಗೆ ನೀಡಿದ್ದು, ಅವರ ಸೂಚನೆಯಂತೆ ಕಾರ್ಕಳ ಮೂಲದ ರಕ್ಷಿತ್(27)
ಪ್ರವಾಸಿಗರನ್ನು ತನ್ನತ್ತ ಸೆಳೆಯುವ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಪ್ಲ್ಯಾಗ್ ಬೀಚ್ ಸಂಪರ್ಕ ರಸ್ತೆ ಕಡಿತಗೊಳ್ಳುವ ಆತಂಕದಲ್ಲಿ ಬ್ಲೂ ಪ್ಲ್ಯಾಗ್ ಬೀಚ್ ಮುಚ್ಚುಗಡೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಪಡುಬಿದ್ರಿ ಬ್ಲೂ ಪ್ಲ್ಯಾಗ್ ಬೀಚ್ ನ ಪ್ರಬಂಧಕ ವಿಜಯ ಶೆಟ್ಟಿ, ಕಡಲಿನ ಅಬ್ಬರಕ್ಕೆ ಬ್ಲೂ ಪ್ಲ್ಯಾಗ್ ಬೀಚ್ ನ ಸಂಪರ್ಕ ಕೊಂಡಿ ಕಾಂಕ್ರೀಟ್
ಬಂಟ್ವಾಳ: ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದ್ದ 1923ರ ಮಾರಿಬೊಳ್ಳ (ಭೀಕರ ಪ್ರವಾಹ)ಕ್ಕೆ ಕಳೆದ ವರ್ಷ ನೂರು ವರ್ಷ ತುಂಬಿತ್ತು. ಇದೀಗ 1974ರಲ್ಲಿ ಕಾಣಿಸಿಕೊಂಡಿದ್ದ ಭೀಕರ ಪ್ರವಾಹಕ್ಕೆ ಈ ವರ್ಷ 50 ತುಂಬುತ್ತಿದೆ. ಅಂದು ಜುಲೈ 26ರಂದು ಶುಕ್ರವಾರ ಪ್ರವಾಹ ಕಾಣಿಸಿಕೊಂಡಿತ್ತು, ಇದೀಗ ಮತ್ತೆ ಜುಲೈ 26 ಕೂಡ ಶುಕ್ರವಾರವೇ ಬರುತ್ತಿರುವುದು ವಿಶೇಷ. 1923ರ ಪ್ರವಾಹದ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಇನ್ಸಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾಮೆಡಿಕಲ್ ಸೈನ್ಸಸ್ ಕಾಲೇಜಿನಲ್ಲಿ ರಾಷ್ಟ್ರೀಯ ಅಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ದಿನವನ್ನು ಆಚರಿಸಲಾಯಿತು. ಈ ದಿನದ ಅಂಗವಾಗಿ ಕಾಲೇಜಿನ ಒಟಿ ಎಟಿ ವಿಭಾಗದ ವತಿಯಿಂದ ಆಯೋಜಿಸಿದ “ಸಂಗಮ 2024” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿಯ ಸಿಟಿ
ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುವ ಮೂಡುಬಿದಿರೆ ಪುರಸಭೆಯ ಕ್ರಮವನ್ನು ಪ್ರಶ್ನಿಸಿ ಜೈಸನ್ ಮಾರ್ಷಲ್ ಸುವಾರಿಸ್ ಹಾಗೂ ಇತರರು ಸಲ್ಲಿಸಿರುವ
ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ
ಮಂಗಳೂರು: ಮಂಗಳೂರು ನಗರದಲ್ಲಿರುವ ಜೈಲಿಗೆ ಗುರುವಾರ ಬೆಳ್ಳಂಬೆಳಗ್ಗೆ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಮಾಡಿದ ದಾಳಿ ನಡೆಸಿ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿಗೆ ಸುಮಾರು 150 ಸಿಬಂದಿಗಳ ಜೊತೆ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ ವೇಳೆ ಖೈದಿಗಳಿಂದ 25 ಮೊಬೈಲ್ ಫೋನ್‌ಗಳು, 1 ಬ್ಲೂಟೂತ್ ಸಾಧನ, 5 ಇಯರ್‌ಫೋನ್‌ಗಳು, 1 ಪೆನ್
ಕುಂದಾಪುರ: ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಯಿಂದಾಗಿ ಹೆಮ್ಮಾಡಿ ಸಮೀಪದ ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕೆಲಹೊತ್ತು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಹೆಮ್ಮಾಡಿ ಸಮೀಪದ ಕಟ್ ಬೇಲ್ತೂರಿ ಗ್ರಾಮಪಂಚಾಯತ್ ವ್ಯಾಪ್ತಿಯ ಸುಳ್ಸೆ ತಿರುವಿನಲ್ಲಿ ಎರಡು ಬೃಹತ್ ಗಾತ್ರದ ಮರ ಹೆಮ್ಮಾಡಿ-ಕೊಲ್ಲೂರು ಮುಖ್ಯ ರಸ್ತೆಗೆ ಅಡ್ಡಲಾಗಿ ಉರಳಿ



























