Monthly Archives: September, 2024

ಉಡುಪಿ: ಕಾಣೆಯಾಗಿದ್ದ ಇಬ್ಬರು ಹೈಸ್ಕೂಲ್ ವಿದ್ಯಾರ್ಥಿಗಳು ಶವವಾಗಿ ಪತ್ತೆ

ಶಿರೂರು : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನ್ ಮುಹಮ್ಮದ್ ಶಫಾನ್ (13)...

ಪಡುಬಿದ್ರಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68), ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು,...

ಅಂತರ್ ಶಾಲಾ ಪುಟ್ಬಾಲ್ ಪಂದ್ಯಾಟ ಗೊನ್ಝಾಗ ಶಾಲೆಗೆ ಪ್ರಥಮ ಸ್ಥಾನ

ಮಂಗಳೂರಿನ ಎಸ್.ಡಿ.ಎಂ ಶಾಲೆಯ ಆಶ್ರಯದಲ್ಲಿ ನಡೆದ ಐಕ್ಸ್ ಅಂತರ್ ಶಾಲಾ ಫುಟ್ಬಾಲ್ ಪಂದ್ಯಾಟದಲ್ಲಿಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಜೂನಿಯರ್ ಫುಟ್ಬಾಲ್ ತಂಡವು ಪ್ರಥಮ ಸ್ಥಾನ ಗಳಿಸಿದೆ .ಆಗಸ್ಟ್ 30 ಮತ್ತು 31ರಂದು ನಡೆದ...

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ:ಸಂಸದ ಕ್ಯಾ. ಚೌಟ

ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಹೈಕೋರ್ಟ್‌ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ನಿರಂತರ ಪ್ರತಿಭಟನೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆಗೆ ಸಂದಿರುವ ದೊಡ್ಡ ಗೆಲುವು ಎಂದು ಹೇಳಿದ್ದಾರೆ. ತಮ್ಮ ರಾಜಕೀಯ ಬದುಕು ಯಾವುದೇ ಕಪ್ಪು-ಚುಕ್ಕೆಗಳಿಲ್ಲದ ತೆರೆದ ಪುಸ್ತಕ ಎಂಬುದಾಗಿ ಇಷ್ಟುದಿನ ಹೇಳಿಕೊಂಡು ತಿರುಗಾಡುತ್ತಿದ್ದ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಇಂದಿನ ಈ ಕೋರ್ಟ್‌ ತೀರ್ಪಿನಿಂದ ಬಯಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಅಕ್ರಮ ಎಸಗಿರುವುದಕ್ಕೆ ಹೈಕೋಟ್‌ ನೀಡಿರುವ ಈ ತೀರ್ಪಿಗಿಂತ ದೊಡ್ಡ ಸಾಕ್ಷ್ಯ ಬೇರೆ ಬೇಕಿಲ್ಲ. ಹೀಗಾಗಿ, ಸಿಎಂ ಸ್ಥಾನದಲ್ಲಿ ಮುಂದವರಿಯುವುದಕ್ಕೆ ಸಿದ್ದರಾಮಯ್ಯನವರಿಗೆ ಇನ್ನು ಯಾವುದೇ ನೈತಿಕತೆಯಿಲ್ಲ. ತತ್‌ಕ್ಷಣವೇ ಕರ್ನಾಟಕದ ಜನತೆ ಹಾಗೂ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನದಿಂದ ನಿರ್ಗಮಿಸಬೇಕೆಂದು ಕ್ಯಾ. ಚೌಟ ಆಗ್ರಹಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರು ಹಾಗೂ ಅವರ ಬೆಂಬಲಿಗ ಕಾಂಗ್ರೆಸ್‌ ನಾಯಕರು ಭ್ರಷ್ಟಾಚಾರ ಎಸಗಿದ್ದಾರೆ ಎಂಬುದನ್ನು ಬಿಜೆಪಿ ಪಕ್ಷ ಹಾಗೂ ಸಾಮಾಜಿಕ ಹೋರಾಟಗಾರರು ಆರಂಭದಿಂದಲೂ ಹೇಳಿಕೊಂಡು ಬಂದಿದ್ದಾರೆ. ಅದನ್ನೇ ರಾಜ್ಯಪಾಲರು ಕೂಡ ಈ ಬಗ್ಗೆ ದೂರು ಬಂದಾಗ ಕಾನೂನು ತಜ್ಞರ ಸಲಹೆ ಪಡೆದು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರು. ಆಗಲೇ ಅವರು ರಾಜೀನಾಮೆ ಕೊಡಬೇಕಿತ್ತು. ಆದರೆ, ಗಂಭೀರ ತಪ್ಪು ನಡೆಸಿದ ಬಳಿಕವೂ ಅಧಿಕಾರದ ಆಸೆಗೆ ಸಿಎಂ ಖುರ್ಚಿಗೆ ಅಂಟಿಕೊಂಡಿದ್ದಾರೆ. ಆಡಳಿತದಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನವರ ಭ್ರಷ್ಟಾಚಾರಕ್ಕೆ ಈಗ ಕಾನೂನೇ ತಕ್ಕ ಉತ್ತರ ಕೊಟ್ಟಿದೆ. ಇಷ್ಟಾಗಿಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಯಾವ ನೈತಿಕತೆಯು ಸಿದ್ದರಾಮಯ್ಯನವರಿಗೆ ಇಲ್ಲ ಎಂದು ಕ್ಯಾ. ಚೌಟ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ 105ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ...

ಕುಟುಂಬ ಸಮೇತರಾಗಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಮಂಗಳೂರು : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ...

ಮೂಡುಬಿದಿರೆ: ಮಾಜಿ ಸೈನಿಕ ನಿಧನ

ಮೂಡುಬಿದಿರೆ: ಮಾಜಿ ಸೈನಿಕ ಹೆನ್ರಿ ಲೋಬೋ (80) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಿಗ್ಗೆ ಮಾಸ್ತಿಕಟ್ಟೆಯಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು.15 ವರ್ಷಗಳ ಸೈನಿಕನಾಗಿ ಸೇವೆ ಸಲ್ಲಿಸಿದ ಅವರು ನಂತರ 23 ವರ್ಷಗಳ ಕಾಲ...

ಮೂಡುಬಿದಿರೆ : ಉದ್ಯಮಿ ಸುರೇಶ್ ಶೆಟ್ಟಿ ನಿಧನ

ಮೂಡುಬಿದಿರೆ : ಹೊಟೇಲ್ ಉದ್ಯಮಿ, ಕಡಲಕೆರೆ ಸೃಷ್ಟಿ ಮಲ್ಟಿ ಪರ್ಪಸ್ ಹಾಲ್ ನ ಮಾಲಕ ಸುರೇಶ್ ಶೆಟ್ಟಿ ಅವರು ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅಲಂಗಾರು ಬಂಗೇರಬೆಟ್ಟು ನಿವಾಸಿಯಾಗಿರುವ ಸುರೇಶ್ ಶೆಟ್ಟಿ ಅವರು...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ಶಾಲೆಗಳಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ105 ಶಾಲೆಗಳಿಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ...

ಬ್ರಹ್ಮಾವರದ ವಿದ್ಯಾಲಕ್ಷ್ಮೀ ಶಿಕ್ಷಣ ಸಂಸ್ಥೆಯಲ್ಲಿ “ಸ್ಪರ್ಶ 2024” ಫ್ರೆಷರ್ಸ್ ಡೇ ಆಚರಣೆ

ಬ್ರಹ್ಮಾವರ: ನೂತನ ವಿದ್ಯಾರ್ಥಿಗಳನ್ನು ಗುರುತಿಸಿ ಸ್ವಾಗತಿಸುವ " ಸ್ಪರ್ಶ 2024" ಕಾರ್ಯಕ್ರಮವನ್ನು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಟಿ, ಗಾಯಕಿ, ರೂಪದರ್ಶಿಯಾಗಿರುವ ಮಹಿಮಾ...

Most Read