Home 2024 October (Page 6)

ಸುಳ್ಯ ದಸರಾ ಪ್ರಯುಕ್ತ ಮಕ್ಕಳ ದಸರಾ-2024 ಉದ್ಘಾಟನೆ

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ

ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತ್ಯು

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಡಾ. ಅನುರಾಧಾ ಕುರುಂಜಿ ಅಧಿಕಾರ ಸ್ವೀಕಾರ

        ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ

ಮಂಗಳೂರು: ಲೋಟಸ್ ಬಿಲ್ಡರ್ಸ್‌ನ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಇಬ್ಬರ ಸೆರೆ

ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ

ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಸಂಭ್ರಮ

ಬೈಂದೂರು: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ,ಮಹಾ ಮಂಗಳಾರತಿ, ಹಣ್ಣುಕಾಯಿ ಸೇವೆ, ಚಂಡಿಕಾ ಹೋಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸೇವೆಯನ್ನು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಲ್ಲಿಸಲಾಯಿತು. ಅಕ್ಟೋಬರ್ 3 ರಿಂದ ಆರಂಭಗೊಂಡಿರುವ ನವರಾತ್ರಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ

ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!

ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್‌‌ ಎಂಬವರ ಮನೆಯಿಂದ ಸುಮಾರು 15 ಪವನ್‌ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್‌‌ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ನವರಾತ್ರಿಯ ದಿನವಾಗಿದ್ದರಿಂದ ಇಂದು ಅಳಕೆಮಜಲು ಭಜನಾ

ಮೂಡುಬಿದಿರೆ: ಆಳ್ವಾಸ್ ಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ