Home 2024 October (Page 9)

ಕೊಲ್ಯ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಬಾವಿಯಲ್ಲಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತನ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ಎಂಬಲ್ಲಿ ಬೆಳಕಿಗೆ ಬಂದಿದೆ.ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತಪಟ್ಟವರು. ಅ.4ರಂದು ಮನೆಯಲ್ಲಿ ಮೊಬೈಲ್ ಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದರು. ಈ ಕುರಿತು

ಮಂಗಳೂರು: ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮುಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಮಹೇಶ್ ಎಂಬ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಈಜು ತಜ್ಞರಾದ ಈಶ್ವರ್ ಮಲ್ಪೆ, ಅಗ್ನಿಶಾಮಕ ದಳದವರು

ಪುತ್ತೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಪುತ್ತೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ಬಿಳಿ ಅಂಗಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಿಯಲ್ಲಿ ಈಗ ಬಿಳಿ ಎಲ್ಲಿದೆ ಎಂದು ಹುಡುಕಬೇಕಿದೆ. ಬರೀ ಕಪ್ಪು  ಚುಕ್ಕೆಗಳೇ ತುಂಬಿವೆ ಎಂದು ಸಂಸದ ಕ್ಯಾö. ಬ್ರಿಜೇಶ್ ಚೌಟ ಆಪಾದಿಸಿದರು. ಶನಿವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಮಾಧ್ಯಮ

ವಿಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ “ವಿಕೆ ಉತ್ಸವ 2024”

ಮಂಗಳೂರಿನ ಯೆಯ್ಯಾಡಿಯಲ್ಲಿರುವ ವಿ ಕೆ ಫರ್ನಿಚರ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯ  ಶೋರೂಮ್‌ನಲ್ಲಿ “ವಿ ಕೆ ಉತ್ಸವ 2024” ಅನ್ನು ಉದ್ಘಾಟನಾ ಕಾರ್ಯಕ್ರಮ ನಡೆಯಿತು.  ಮುಂದಿನ ಮೂರು ತಿಂಗಳುಗಳ ಕಾಲ ನಡೆಯಲಿರುವ ಈ ಉತ್ಸವವನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ವಿಟ್ಟಲ್ ಕುಲಾಲ್ ಮತ್ತು ಅವರ ಪತ್ನಿ ವಿನುತಾ ಕುಲಾಲ್, ಸಿಬ್ಬಂದಿ

ಶ್ರೀ ಮಹಿಷಮರ್ದಿನಿ ದೇವಸ್ಥಾನ ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು – ನವರಾತ್ರಿ ಉತ್ಸವ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ಷೇತ್ರ ಕಾನ್‍ಬೇರು ಹೊಸೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮ ಅಕ್ಟೋಬರ್ 3 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಯ ಸನ್ನಿಧಾನದಲ್ಲಿ ಪ್ರತಿ ದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆ ವರೆಗೆ

ಮಂಗಳೂರು: ವಿಸ್ಡಮ್ ಎಡ್‌ ನ ನೂತನ ಕಚೇರಿಯ ಉದ್ಘಾಟನೆ

ನವರಾತ್ರಿಯ ಶುಭ ಸಂದರ್ಭದಲ್ಲಿ ವಿಸ್ಡಮ್ ಎಡ್‌ನ ನೂತನ ಕಚೇರಿಯು ಬಳ್ಳಾಲ್ ಬಾಗ್‌ನ ತಕ್ಷಶಿಲಾ ಬಿಲ್ಡಿಂಗ್‌ನಲ್ಲಿ ಶುಭಾರಂಭಗೊಂಡಿತು. ವಿಸ್ಡಮ್ ಎಡ್ ಸಂಸ್ಥೆಯು ಉನ್ನತ ಶಿಕ್ಷಣ, ವಿದ್ಯಾರ್ಥಿವೇತ, ಜಾಗತಿಕ ವಿಶ್ವವಿದ್ಯಾಲಯದ ಪ್ರವೇಶಗಳು, ಶಿಕ್ಷಣ ಸಾಲ ಮಾರ್ಗದರ್ಶಿ, ಪರೀಕ್ಷಾ ತಯಾರಿ ತರಬೇತಿ ಸೇರಿದಂತೆ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಮಾರ್ಗದರ್ಶನವನ್ನು ನೀಡುವ

ಮೂಡುಬಿದಿರೆ : ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

ಮೂಡುಬಿದಿರೆ: ಕನ್ನಡ ನಾಡು, ನುಡಿ, ಸಾಹಿತ್ಯ, ಸಂಸ್ಕೃತಿಯ ಜೊತೆಗೆ ನೆಲ, ಜಲವನ್ನು ಉಳಿಸಿಕೊಂಡು ಬರಬೇಕಾದ ಹೊಣೆಗಾರಿಕೆ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಸರಕಾರದ ಆಶಯದಂತೆ ನಾವೆಲ್ಲರೂ ನಾಡುನುಡಿ ಪ್ರೀತಿಯ ಜೊತೆ ಕನ್ನಡ ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸುವಲ್ಲಿ ಶ್ರಮಿಸಬೇಕಾಗಿದೆ ಎಂಬುದಾಗಿ ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನುಡಿದರು.

ಬಂಟ್ವಾಳ : ಕ್ಷಯ ರೋಗಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಕ್ಷಯ ರೋಗಿಗಳಿಗೆ ಧವಸ ಧಾನ್ಯಗಳನ್ನೊಳಗೊಂಡ ಆಹಾರ ಸಾಮಾಗ್ರಿಗಳ ಕಿಟ್ ವಿತರಣಾ ಸಮಾರಂಭ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು. ಆಹಾರ ಕಿಟ್ ವಿತರಿಸಿದ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸಂಜಿತ್ ಎಸ್.ಶೆಟ್ಟಿ ಮಾತನಾಡಿ, ಸೇವಾ ಕಾರ್ಯಗಳಿಗೆ ಮನಸ್ಸು ಅತಿ

ಮಂಜೇಶ್ವರ : ತೋಡಿಗೆ ಮಗುಚಿದ ಶಾಲಾ ವಾಹನ – ಹಲವರಿಗೆ ಗಾಯ

ಮಂಜೇಶ್ವರ : ಶಾಲಾ ವಿದ್ಯಾರ್ಥಿ ಹಾಗೂ ಅದ್ಯಾಪಿಕೆಯರನ್ನು ಹೇರಿ ಕೊಂಡು ಹೋಗುತ್ತಿದ್ದ ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಮಗುಚಿ ಬಿದ್ದು 6 ವಿದ್ಯಾರ್ಥಿಗಳು ಹಾಗೂ ಒಬ್ಬಳು ಅಧ್ಯಾಪಿಕೆ ಗಾಯಗೊಂಡಿದ್ದಾರೆ. ಮಂಜೇಶ್ವರ ಪಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ವಾಹನ ಶಾಲಾ ವಿದ್ಯಾರ್ಥಿಗಳನ್ನು ಮರಳಿ ಮನೆಗೆ

ಕನಸಿನ ಟ್ರಾವೆಲಿಂಗ್ ಆರಂಭಿಸಿದ ಶಟರ್‌ಬಾಕ್ಸ್ ಫಿಲಮ್ಸ್ ತಂಡ: 60 ದಿನಗಳ ಡಿಸ್ಕವರಿ ನೋರ್ತ್ ಈಸ್ಟ್ ಟ್ರಾವೆಲಿಂಗ್

ಶಟರ್‌ಬಾಕ್ಸ್ ಫಿಲಮ್ಸ್‌ನ ಸಚಿನ್ ಶೆಟ್ಟಿ ಮತ್ತು ಅಭಿ ಶೆಟ್ಟಿ ಅವರು ತಮ್ಮ ಕನಸಿನ ಟ್ರಿಪ್ ಮೂಲಕ ದೇಶ ವಿದೇಶದ ಕಲೆ, ಕರಾವಳಿಯ ಸಂಸ್ಕೃತಿಯನ್ನು ಪಸರಿಸಲು ಮುಂದಾಗಿದ್ದು, ಈ ಬಾರಿ, ನೋರ್ತ್ ಈಸ್ಟ್ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಬಾರಿ ಚೈನಾ, ಮಯನ್ಮಾರ್ ಮತ್ತು ಬಾಂಗ್ಲಾದೇಶದ ಗಡಿಪ್ರದೇಶಕ್ಕೆ ಜಿಮ್ಮಿ ವಾಹನದ ಮೂಲಕ ತೆರಳಲಿದ್ದು, ಅಲ್ಲಿನ ಕಲೆ, ಸಂಸ್ಕೃತಿ,