Home 2024 December (Page 3)

ಅಧ್ಯಯ‌ನ ನಡೆಸಲು ಶಾಸಕ ಗುರುರಾಜ್ ಗಂಟಿಹೊಳೆ ಆಗ್ರಹ. ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ಚಲುವರಾಯ ಸ್ವಾಮಿ

*ಭತ್ತದ ಕೃಷಿ ಉತ್ತೇಜ‌ನಕ್ಕೆ ಸಮಗ್ರ ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ ಕಳವಳ ವ್ಯಕ್ತಪಡಿಸಿ,

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ

ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ

ಬೈಂದೂರು : ಸದನದಲ್ಲಿ ಕಾರ್ಮಿಕರ ಪರ ಧ್ವನಿ ಎತ್ತಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್‌.ಎಸ್‌.

ಬೆಳ್ಳಾರೆ: ಜೇಸಿಐ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಸಮುದಾಯ ಅಭಿವೃದ್ಧಿಯ ಗುರಿಯೊಂದಿಗೆ ಯುವಕರಲ್ಲಿ ನಾಯಕತ್ವ ಗುಣ ತುಂಬಿಸಿ ಜೇಸಿ ಸಂಸ್ಥೆಯು ಸಮಾಜಮುಖಿ ಚಿಂತನೆ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಜೇಸಿಐ ವಲಯ 15ರ ಪೂರ್ವ ವಲಯಾಧ್ಯಕ್ಷ ಚಂದ್ರಹಾಸ ರೈ ಹೇಳಿದರು.ಅವರು ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಜೇಸಿಐ ಬೆಳ್ಳಾರೆ ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ

ಪತ್ರಕರ್ತನಿಗೆ ದೂರವಾಣಿ ಮೂಲಕ ಬೆದರಿಕೆ- ಸುಳ್ಯ ಪ್ರೆಸ್ ಕ್ಲಬ್ ಖಂಡನೆ: ಪತ್ರಕರ್ತನಿಂದ ಪೊಲೀಸ್‌ ದೂರು

ಸುಳ್ಯ :ಸುಳ್ಯದ ಸ್ಥಳೀಯ ಅಮರಸುದ್ದಿ ಪತ್ರಿಕೆಯ ವರದಿಗಾರ ಮಿಥುನ್ ಕರ್ಲಪ್ಪಾಡಿಯವರಿಗೆ ವಿಕಾಸ್ ಮೀನಗದ್ದೆ ಎಂಬವರು ದೂರವಾಣಿಯಲ್ಲಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆಯನ್ನು ಸುಳ್ಯ ಪ್ರೆಸ್ ಕ್ಲಬ್ ಖಂಡಿಸಿದೆ.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಘಟನೆಯನ್ನು ಖಂಡಿಸಲಾಯಿತು ಮತ್ತು ಪೋಲೀಸರು ತಕ್ಷಣ

ಸುಳ್ಯ : ಪ್ರತಿಷ್ಠಿತ “ಚೈತನ್ಯ ಶ್ರೀ-2024” ಮಹಿಳಾ ಸಾಧಕಿ ಪ್ರಶಸ್ತಿಗೆ ಬಹುಮುಖ ಸಾಧಕಿ ಡಾ.ಅನುರಾಧಾ ಕುರುಂಜಿ ಆಯ್ಕೆ

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ವತಿಯಿಂದ ನೀಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ದ.ಕ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು

ದುಬೈ : “ಮಿಡ್ಲ್ ಕ್ಲಾಸ್ ಫ್ಯಾಮಿಲಿ ” ತುಳು ಚಿತ್ರದ ಪ್ರೀಮಿಯರ್ ಟಿಕೆಟ್ ಬಿಡುಗಡೆ ಕಾರ್ಯಕ್ರಮ

ದುಬೈ : ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಜರುಗಿತು. ಡಿಸೆಂಬರ್ .8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್