Home 2024 (Page 102)

ಪದ್ಮನಾಭ ಸಾವಂತ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಕಾಂಗ್ರೆಸ್ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ

ಮೂಡುಬಿದಿರೆ: ಎ.2ರಿಂದ 5ರವರೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಶ್ರೀ ಕ್ಷೇತ್ರ ಬನ್ನಡ್ಕ

ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ

ಕಾಂಗ್ರೆಸ್ ನ ಪದ್ಮರಾಜ್ ಗೆ ಮತ ಹಾಕಿ ಬಿಜೆಪಿಯನ್ನು ಸೋಲಿಸಿ: ಸಿಪಿಐಎಂನ ಯಾದವ ಶೆಟ್ಟಿ ಕರೆ

ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ

ಪುತ್ತೂರಿನ ಹರ್ಷ ಶೋರೂಂನ ಗೋದಾಮಿನಲ್ಲಿ ಅಗ್ನಿ ಅವಘಡ

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.

ಆಟಿಸಂ ಜಾಗೃತಿ ದಿನ- ಏಪ್ರಿಲ್ 2

ಪ್ರತಿ ವರ್ಷ ಏಪ್ರಿಲ್ ಎರಡರಂದು ವಿಶ್ವದಾದ್ಯಂತ ವಿಶ್ವ ಆಟಿಸಂ ದಿನ ಆಚರಿಸಲಾಗುತ್ತದೆ. ಆಟಿಸಂ ರೋಗದ ಬಗ್ಗೆ ಇರುವ ತಪ್ಪು ಕಲ್ಪನೆಗಳು ಮತ್ತು ಮೂಢನಂಬಿಕೆಗಳನ್ನು ತೊಡೆದು ಹಾಕಿ ಜನರಲ್ಲಿ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು 2007ರಲ್ಲಿ ಯುನೈಟೆಡ್ ಜನರಲ್ ಅಸೆಂಬ್ಲಿ ಜಾರಿಗೆ ತಂದಿತು. ಕಳೆದ ೧೬ ವರ್ಷಗಳಲ್ಲಿ ಸಾವಿರಾರು ಇಂತಹ ಜಾಗೃತಿ

ದಂತಾಘಾತವಾದಾಗ ಏನು ಮಾಡಬೇಕು?

ಹಲ್ಲು ನಮ್ಮ ದೇಹದ ಅತ್ಯಂತ ಪ್ರಾಮುಖ್ಯವಾದ ಅಂಗ. ಸುಂದರ ದಂತ ಪಂಕ್ತಿಗಳಿಂದ ಕೂಡಿದ ನಗು ಎಂತವರನ್ನು ಮಂತ್ರ ಮುಗ್ಧವಾಗಿಸುತ್ತದೆ. ಹಲ್ಲು ನಮ್ಮ ದೇಹದ ಮುಂಭಾಗದಲ್ಲಿ ಇರುವ ಕಾರಣದಿಂದಲೇ ಯಾವುದೇ ಆಟೋಟಗಳಲ್ಲಿ, ಹೊಡೆದಾಟದಲ್ಲಿ, ಅಪಘಾತದಲ್ಲಿ ಬಿದ್ದು ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾಮಾನ್ಯವಾಗಿ ಮಕ್ಕಳಲ್ಲಿ ಇದು ಸರ್ವೆ ಸಾಮಾನ್ಯವಾಗಿರುತ್ತದೆ. ಹೀಗೆ

ರಾಜಕೀಯ ಬಿಟ್ಟು ಸಮುದಾಯದ ಗೆಲುವಿಗೆ ಆದ್ಯತೆ : ಸತ್ಯಜಿತ್ ಸುರತ್ಕಲ್

ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು

ಪದ್ಮರಾಜ್ ಅವರು ಕಾಂಗ್ರೆಸ್ ಪಕ್ಷದ ಎಲ್ಲರ ಒಮ್ಮತದ ಅಭ್ಯರ್ಥಿ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ

ಬೈಂದೂರು: ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟ ಈಶ್ವರಪ್ಪ

ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ. ಹಿಂದುತ್ವ ದೇಶ ಅಭಿವೃದ್ಧಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕುರಿತು ಜನ ಸ್ಪಷ್ಟ ಫಲಿತಾಂಶ ನೀಡಲಿದ್ದಾರೆ.ಯಾವ ಒತ್ತಡಗಳಿಗೂ ಮಣಿಯಲಾರೆ.ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದರು. ಅವರು

ಗೋಳಿತ್ತೊಟ್ಟು: ದ್ವಿಚಕ್ರ ವಾಹನಗಳ ಅಪಘಾತದ ಗಾಯಾಳು ನಿಧನ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಸಮೀಪ ಮಾ.30ರಂದು ರಾತ್ರಿ ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸಾವರ, ಗೋಳಿತ್ತೊಟ್ಟು ಗ್ರಾಮದ ಸಣ್ಣಂಪಾಡಿ ನಿವಾಸಿ ವಿನಯ್(26ವ.)ಅವರು ಚಿಕಿತ್ಸೆಗೆ ಸ್ಪಂದಿಸದೆ ಮಾ.31ರ ಮಧ್ಯಾಹ್ನದ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡಿದ್ದ