Home 2024 (Page 12)

ಮೂಡುಬಿದಿರೆ : 15 ನೇ ವರ್ಷದ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಅದ್ದೂರಿಯ ಚಾಲನೆ

ಮೂಡುಬಿದಿರೆ ತಾಲೂಕಿನ ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳಕ್ಕೆ ಪಣಪಿಲ ಅರಮನೆಯ ವಿಮಲ್ ಕುಮಾರ್ ಶೆಟ್ಟಿ ಶನಿವಾರ ಚಾಲನೆ ನೀಡಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಶಾಸಕ ಉಮಾನಾಥ್ ಎ. ಕೋಟ್ಯಾನ್ ಬಿಜೆಪಿ ದಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಅಧ್ಯಕ್ಷ ಸುದರ್ಶನ್ ಎಂ. ನಂದೊಟ್ಟು

ಬಿ.ಸಿ.ರೋಡಿನಲ್ಲಿ ಕನ್ನಡ ರಥಕ್ಕೆ ಸಂಭ್ರಮದ ಸ್ವಾಗತ

ಕನ್ನಡ ಭಾಷೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಈ ಕುರಿತು ಎಲ್ಲರೂ ಪಾಲ್ಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಕನ್ನಡ ಜ್ಯೋತಿ ರಥ ನಾಡಿನಾದ್ಯಂತ ಸಂಚರಿಸುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹೇಳಿದರು. ಬಿ.ಸಿ.ರೋಡಿನ ಮೇಲ್ಸೇತುವೆ ಬಳಿ ಕನ್ನಡ ಜ್ಯೋತಿ

ಉಡುಪಿ : ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೇಳೆ ತಲೆಕೆಳಗಾಗಿ ಬಿದ್ದ ಕ್ರೈನ್

ನಾಲ್ಕಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ಗೊಂದಲದ ಗೂಡಾಗಿದೆ. ಇಲ್ಲಿನ ಏಕಮುಖ ಸಂಚಾರದಿಂದ ಜನರು ರೋಸಿ ಹೋಗಿದ್ದಾರೆ. ಸಾಕಷ್ಟು ಹೋರಾಟಗಳ ಬಳಿಕ ಇದೀಗ ಸೇತುವೆ ಕಾಮಗಾರಿ ಆಮೆ ಗತಿಯಲ್ಲಿ ಶುರುವಾಗಿದೆ. ಕಾಮಗಾರಿ ನಡೆಯುತ್ತಿರುವ ವೇಳೆ ಕ್ರೈನ್ ವೊಂದು ತಲೆಕೆಳಗಾಗಿ ಬಿದ್ದ ಘಟನೆ ನಡೆದಿದೆ. ಎಡಮಗ್ಗಲಿನ ಎತ್ತರದ

ಪುತ್ತೂರು : ಬಿಂದು ಪ್ಯಾಕ್ಟರಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ

ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಜಾಗತಿಕ ಮಟ್ಟದಲ್ಲಿ ಬಿಜೆಪಿ ಅತೀ ದೊಡ್ಡ ರಾಜಕೀಯ ಪಕ್ಷವಾಗಿದೆ.

ಮಂಗಳೂರು :ಮನಪಾ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆ

ಮಂಗಳೂರು ಮಹಾನಗರ ಪಾಲಿಕೆ ನಾಲ್ಕು ಸ್ಥಾಯೀ ಸಮಿತಿಗಳ ಅಧ್ಯಕ್ಷರ ಚುನಾವಣೆವು ನಗರದ ಪಾಲಿಕೆ ಕಚೇರಿಯಲ್ಲಿ ನಡೆಯಿತು. ಪಟ್ಟಣ ಯೋಜನೆ ಹಾಗೂಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀಣಾ ಮಂಗಳ, ತೆರಿಗೆ ನಿರ್ಧರಣೆ , ಹಣಕಾಸು ಹಾಗೂ ಅಪೀಲು ಸ್ಥಾಯಿ‌ ಸಮಿತಿ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಕದ್ರಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ

ಮಂಗಳೂರು: ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಮಂಗಳೂರು: “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ ವರ್ಷ ಪೂರೈಸಿರುವ

ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಕಾರ್ಯಾಚರಣೆಗೆ ಸೂಚನೆ

ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿದಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್

ಮೂಡುಬಿದಿರೆ : ನ.9ರಂದು ಪಣಪಿಲ ‘ಜಯ-ವಿಜಯ’ ಜೋಡುಕರೆ ಕಂಬಳ

ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

ಮಂಗಳೂರು: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು

ಮಂಗಳೂರು: ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು.ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು