Home 2024 (Page 19)

ಶ್ರೀ ಬಪ್ಪನಾಡು ದುರ್ಗೆಯ ಮಹಿಮೆ ” ಕನ್ನಡ ವೀಡಿಯೋ ಅಲ್ಬಮ್ ಸಾಂಗ್ ಬಿಡುಗಡೆ

ಪಡುಬಿದ್ರಿ : ಪುರಾತನ ದೇವಸ್ಥಾನದ ಹಿನ್ನೆಲೆಯನ್ನು ಇಂದಿನ ಜನತೆಗೆ ತಿಳಿಯ ಪಡಿಸುವ ಕಾರ್ಯಗಳು ನಡೆಯಬೇಕಾಗಿದೆ. ಇಂದಿನ ಯುವ ಜನತೆ ನಮ್ಮ ಸಂಸ್ಕೃತಿ, ಸಂಪ್ರದಾಯದ ಊಳಿಸುವ ಕಾರ್ಯ ಮಾಡಬೇಕಾಗಿದೆ….ಇಂತಹ ಅಲ್ಬಮ್ ಸಾಂಗ್ ನ ಜೊತೆ ಚಲನಚಿತ್ರ ಕೂಡಾ ನಿರ್ಮಾಣವಾಗಲಿ ” ಎಂದು‌ ಮಾಜಿ.ತಾ.ಪಂ‌.ಸದಸ್ಯ ನವೀನಚಂದ್ರ ಶೆಟ್ಟಿ ‌ ಹೇಳಿದರು. ಅವರು ಪಡುಬಿದ್ರಿ ಭಾರತ್

ಬೈಂದೂರು : ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ – ರಂಗಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮ

ಸರಕಾರಿ ಪದವಿ ಪೂರ್ವ ಕಾಲೇಜು ಕಂಬದಕೋಣೆ 60ರ ಸಂಭ್ರಮದ ರಂಗಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಅದ್ದೂರಿಯಿಂದ ಜರಗಿತು. ಕೊಡುಗೆ ದಾನಿ ಯಶಸ್ವಿ ಉದ್ಯಮಿ ಹೇರಂಜಾಲು ಜಯಶೀಲ ಶೆಟ್ಟಿ ಅವರು ರಂಗಮಂದಿರಕ್ಕೆ ಅಡಿಗಲ್ಲು ಹಾಕುವುದರ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆಯನ್ನು ನೀಡಿ ಮಾತನಾಡಿ, ಸರಕಾರಿ ಶಾಲೆಗಳ ಉಳಿವಿಕೆಗೆ ಹಳೆ ವಿದ್ಯಾರ್ಥಿಗಳ ಸಹಭಾಗಿತ್ವವು

ಬೆಳ್ತಂಗಡಿ : ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಬೆಳ್ತಂಗಡಿ ತಾಲೂಕಿನಲ್ಲಿ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ನೆರಿಯ ಗ್ರಾಮದ ಮುನ್ನೂರು ಎಕ್ರೆ ಎಂಬಲ್ಲಿ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಈಜು ಬಾರದೆಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಬಂದಿದೆ ಇವರು ಮೂಲತಃ ಮೂಡಿಗೆರೆ ನಿವಾಸಿಯಾಗಿದ್ದು ಮದುವೆಯಾಗಿ ನೆರಿಯದಲ್ಲಿ ಹಲವಾರು

ಮೂಡುಬಿದಿರೆ: ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ

ಮೂಡುಬಿದಿರೆಯಲ್ಲಿ ಜೈನ ಬಾಂಧವರ ಹೊಸ ತೆನೆ ಹಬ್ಬ

ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ

ಸುಳ್ಯ : ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆ ಯತ್ನ- ಮಹಿಳೆ ಸ್ಥಿತಿ ಗಂಭೀರ

ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು

ಉಡುಪಿ: ಉಚ್ಚಿಲ ದಸರಾಗೆ ವೈಭವದ ತೆರೆ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 10 ದಿನಗಳಿಂದ ನಡೆದ ದಸರಾ ಉತ್ಸವ ನವದುರ್ಗೆಯೆ ಸಹಿತ ಶಾರದಾ ಮಾತೆ ವಿಗ್ರಹ ಜಲಸ್ತಂಭನದೊಂದಿಗೆ ಸಮಾಪನಗೊಂಡಿತು. ಉಡುಪಿ ಉಚ್ಚಿಲ ದಸರಾ ಉತ್ಸವ 2024ರ ವೈಭವದ ವಿಸರ್ಜನಾ ಶೋಭಾಯಾತ್ರೆಗೆ ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಡೋಜ

ಜೆ.ಎಫ್. ಅಸೋಸಿಯೇಷನ್ ಬಜಾಲ್ ವತಿಯಿಂದ ಸ್ವಚ್ಛತಾ ಆಂದೋಲನ

ಮಂಗಳೂರು: ಜೆ.ಎಫ್. ಅಸೋಸಿಯೇಷನ್ ಬಜಾಲ್ ನಂತೂರು ಮಂಗಳೂರು ವತಿಯಿಂದ ಸ್ವಚ್ಛತಾ ಆಂದೋಲನ*ಜೆ.ಎಫ್. ಅಸೋಸಿಯೇಷನ್ ಅಧ್ಯಕ್ಷರಾದ ಅಹಮದ್ ಕುರೈಶ್ ರವರ ಮಾರ್ಗದರ್ಶನದಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು. ರಸ್ತೆ ಗುಡಿಸುವ ಮೂಲಕ ಉದ್ಘಾಟಿಸಿದ ಮ ನ ಪಾ ಸದಸ್ಯರು ಹಾಗೂ ಬದ್ರಿಯಾ ಜುಮ್ಮಾ ಮಸೀದಿ, ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಮಾತನಾಡಿ,

ಸುಳ್ಯ ದಸರಾ ಪ್ರಯುಕ್ತ ಮಕ್ಕಳ ದಸರಾ-2024 ಉದ್ಘಾಟನೆ

ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ

ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತ್ಯು

ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್‌ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್‌ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.