Home 2024 (Page 36)

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ – ತುರ್ತು ಓಡಾಟ ಅನುಮತಿಗೆ ಶಾಸಕರು ,ಸಂಸದರ ಸಲಹೆ

ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ,

ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕಾಂತಾರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ

ಪಡುಪಣಂಬೂರು : ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ ವತಿಯಿಂದ ಸ್ವಾತಂತ್ರೋತ್ಸವ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ

ಮಂಗಳೂರು : ಡಾ. ಮುರಲೀಮೋಹನ್ ಚೂಂತಾರುರವರಿಗೆ ರಾಷ್ಟ್ರಪತಿ ಪದಕ

ಕಳೆದ ಒಂಬತ್ತೂವರೆ ವರುಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ

ಬಿಎಂಆರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.14ರಂದು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ

ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ

ಅಧಿಕಾರ ಚ್ಯುತಿ ಆರೋಪ: ತಹಶೀಲ್ದಾರ್ ಕಚೇರಿಯದುರು ಧರಣಿ ಕೂರಲ್ಲಿರುವ ಶಾಸಕರಾದ ಗುರುರಾಜ್ ಗಂಟಿಹೊಳೆ

ಬೈಂದೂರು: ಶಾಸಕರು ಅಧಿಕಾರಿಗಳ ಸಭೆ ಕರೆಯುವ ಅಧಿಕಾರಕ್ಕೆ ಚ್ಯುತಿ ಬಂದಿರುವ ಹಿನ್ನೆಲೆಯಲ್ಲಿ ದಿಢೀರ್ ಧರಣಿ ಕೂರಲು ಮುಂದಾದ ಶಾಸಕ ಗುರುರಾಜ್ ಗಂಟಿಹೊಳೆ. ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಾರ್ಯಕರ್ತದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಿಗದಿಯಾಗಿತ್ತು. ಈ ಸಭೆಗೆ ಅಧಿಕಾರಿಗಳು ಹೋಗದಂತೆ ಮೇಲಾಧಿಕಾರಿಗಳಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾರದೆ

ನೇತ್ರ ಜ್ಯೋತಿ ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ

ಉಡುಪಿ: ನಗರದ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ಡ್ರಗ್ಸ್ ನಿಯಂತ್ರಣ ಇಲಾಖೆಯ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿಯ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ಔಷಧ ನಿಯಂತ್ರಕರಾದ ಶಂಕರ್ ನಾಯಕರವರು ಮಾತನಾಡಿ ವಿದ್ಯಾರ್ಥಿಗಳು ದೇಶದ ಆಸ್ತಿ ಯಾವುದೇ ಕಾರಣಕ್ಕೂ ಡ್ರಗ್ಸ್ನ

ಹಾಲು ಮಾರುವ ಅಂಗಡಿಗೆ ನುಗ್ಗಿ ಕಳವು : ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ಸೆರೆ

ಹಾಲು ಮಾರುವ ಅಂಗಡಿಗೆ ನುಗ್ಗಿದ ಕಳ್ಳನ ಕರಾಮತ್ತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಉಡುಪಿ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿದ್ದಾನೆ. ಈತನ ಈ ಕುಕೃತ್ಯದ ದೃಶ್ಯಾವಳಿ ಸಿಸಿ ಕೆಮರಾದಲ್ಲಿ ಸ್ಪಷ್ಟವಾಗಿ ಕಂಡುಬರುತ್ತಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ