Home 2024 (Page 44)

ಬಂಟ್ವಾಳ : ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಉತ್ತಮ ಯುವಕನಾಗಿ

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ. ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು

ಆಷಾಢಮಾಸದಲ್ಲಿ ಮನೆ ಮನೆಗೆ ಭೇಟಿ ನೀಡುತ್ತಿರುವ ಆಟಿಕಳಂಜ

ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಅಷಾಢಮಾಸ ಬಂತೆಂದರೆ ಆಟಿಕಳಂಜ ಮನೆಮನೆ ಬಾಗಿಲಲ್ಲಿ ಪ್ರತ್ಯಕ್ಷನಾಗುತ್ತಾನೆ. ಆಟಿ ಕಳಂಜ ಮನೆ ಮನೆಗೆ ಬಂದು ಮಾರಿಯನ್ನು ನಿವಾರಿಸುತ್ತಾನೆ. ಮೂಡಣದ ಮಾರಿಯನ್ನು ಮೂಡಣದೂರಿಗೆ ಸಾಗಿಸುತ್ತಾನೆ. ಮನುಷ್ಯರಿಗಾಗಲಿ, ಪ್ರಾಣಿಗಳಿಗಾಗಲೀ ಬರುವ ಕಾಯಿಲೆಯನ್ನು ನಿವಾರಣೆ ಮಾಡುವ ಮಾಂತ್ರಿಕನಂತೆ ಕಳಂಜ ಎನ್ನುವುದು

ಮೂಡುಬಿದಿರೆ: ಕಟ್ಟಡ ಕಾರ್ಮಿಕರ ಸಮಾವೇಶ

ಮೂಡುಬಿದಿರೆ ತಾಲೂಕು ಕಟ್ಟಡ ಕಾರ್ಮಿಕರ ವಾರ್ಷಿಕ ಸಮಾವೇಶವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾವೇಶವನ್ನು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಉದ್ಘಾಟಿಸಿ ಮಾತನಾಡಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಥಿವೇತನ ನೀಡಬೇಕಾದ ಮಂಡಳಿಯು ಅದರ ಮೊತ್ತವನ್ನು ಕಡಿತ ಮಾಡಿದೆ. ಹೋರಾಟದ ಬಳಿಕ ಈಗ ಮತ್ತೆ

ಜು.26ರಂದು ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಉಡುಪಿ: ಉಡುಪಿ ಸಿ.ಎಸ್.ಐ ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಆಶ್ರಯದಲ್ಲಿ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಗಿರಿಜ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ಸ್, ಜಯಂಟ್ಸ್ ಬ್ರಹ್ಮಾವರ, ಉಡುಪಿ ವೈದ್ಯಕೀಯ ಪ್ರತಿನಿಧಿಗಳ ಸಂಘ, ಅಜ್ಜರಕಾಡು ಪ್ರಧಾನ ಮಂತ್ರಿ ಜನೌಷದ ಕೇಂದ್ರಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ

ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಗಾಳಿ ಮಳೆಯಿಂದ ಮನೆಗಳಿಗೆ ಹಾನಿ

ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ. ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿಯಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಶೆಟ್ಟಿ ಮತ್ತು

ಗಿರಿಯ ಬೋವಿ ನಿಧನ

ಮೂಡುಬಿದಿರೆ: ಇಲ್ಲಿನ ಬೋವಿ ಸಮಾಜದ ಹಿರಿಯರಾಗಿದ್ದ ಗಿರಿಯ ಬೋವಿ( 88ವ) ಅಲ್ಪ ಕಾಲದ ಅಸೌಖ್ಯದಿಂದ ಬೋವಿ ಕೇರಿಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಹಲವು ದಶಕಗಳಿಂದ ಪುರಾತನ ಆದಿಶಕ್ತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಅವರು ಪುರಾತನ ದೇವಾಲಯದ ಜೀರ್ಣೋದ್ದಾರ ಸಹಿತ ಬೋವಿಕೇರಿಯಲ್ಲಿನ ಸಮಾಜದ ನಾಗಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ನಿರಂತರವಾಗಿ

ಕಡಂದಲೆ ದೈವಸ್ಥಾನ ಹಾಗೂ ಮನೆ ಮೇಲೆ ಮರ ಬಿದ್ದು ಹಾನಿ

ಮೂಡುಬಿದಿರೆ : ಸೋಮವಾರ ಸುರಿದ ಭಾರೀ ಗಾಳಿ ಮಳೆಗೆ ಕಡಂದಲೆ ಗ್ರಾಮ ವ್ಯಾಪ್ತಿಯ ಕೆ.ಬಿ. ಕೃಷ್ಣ ಮೂರ್ತಿ ಭಟ್ ಎಂಬವರ ಜೋಡಿಕಟ್ಟೆ ಬಡಗಬೆಟ್ಟು ಎಂಬಲ್ಲಿ ದೈವಸ್ಥಾನದ ಮೇಲೆ ಮರ ಬಿದ್ದು ಹಾನಿ ಆಗಿದೆ. ಮರ ಬಿದ್ದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆ ಮೇಲೆ ಬಿದ್ದಿದೆ. ಜಾನ್ ಫೆರ್ನಾಂಡಿಸ್ ಜೋಡಿಕಟ್ಟೆ ಮುದಲಗಡಿ ಎಂಬವರ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್: ನಳಿನ್‌ಕುಮಾರ್ ಕಟೀಲ್

ರೈತರು, ಮಹಿಳೆಯರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪಕ್ಕೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭದ್ರ ತಳಪಾಯ ಹಾಕಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂ., ಶಿಕ್ಷಣ,ಉದ್ಯೋಗ ಮತ್ತು ಕೌಶಲಾಭಿವೃದ್ಧಿಗೆ 1.48

ಕುರ್ಚಿ ಉಳಿಸಿ ಬಜೆಟ್: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅನ್ನು ‘ಕುರ್ಚಿ ಉಳಿಸಿ ಬಜೆಟ್’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘ಈ ಬಜೆಟ್ ಇತರೆ ರಾಜ್ಯಗಳ ವೆಚ್ಚದಲ್ಲಿ ಬಿಜೆಪಿ ಮಿತ್ರಪಕ್ಷಗಳಿಗೆ ‘ಪೊಳ್ಳು ಭರವಸೆ’ಗಳನ್ನು ನೀಡಿದೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.