ಬೈಂದೂರು: ಕೊಡೇರಿ ಕಿರು ಬಂದರು ಸಮಗ್ರ ಅಭಿವೃದ್ಧಿ, ಸ್ಥಳೀಯ ಮೀನುಗಾರರ ಸಮಸ್ಯೆ, ಜಟ್ಟಿ ಹಾಗೂ ಬ್ರೇಕ್ ವಾಟರ್ ವಿಸ್ತರಣೆ, ಡ್ರೆಜ್ಜಿಂಗ್ ಸಹಿತ ಹಲವು ಸಮಸ್ಯೆಗಳು ಮತ್ತು ಅಹವಾಲು ಆಲಿಸುವ ಸಂಬಂಧ ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಬುಧವಾರ ಕೊಡೇರಿಯ ಬಂದರು ಪ್ರದೇಶದಲ್ಲಿ ಮೀನುಗಾರರು ಮತ್ತು ಅಧಿಕಾರಿಗಳ ಸಭೆ ನಡೆಸಿದರು. ಕೊಡೇರಿ ಕಿರು ಬಂದರು ತಾಲೂಕಿನ ಪ್ರಮುಖ
Year: 2024
ಬಡಾ ಎರ್ಮಾಳು ಅಪೂರ್ವ ಲಾಡ್ಜ್ ಮುಂಭಾಗ ಕಾರೊಂದು ಚಾಲಕನ ನಿದ್ದೆಯ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಮೋರಿಯೊಂದರ ದಂಡೆಗೆ ಡಿಕ್ಕಿಯಾಗಿ ಮುಗುಚಿ ಬಿದ್ದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರನ್ನು ಬಿಟ್ಟು ಮರಳಿ ಉಡುಪಿಗೆ ಹಿಂದಿರುಗಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ಸುರತ್ಕಲ್: ಇಡ್ಯಾ ಗೋವಿಂದ ದಾಸ್ ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರು ಕೃಷಿಕರಾಗಿದ್ದು, ವೈದ್ಯಕೀಯ ಸೇವೆ, ರಾಜಕೀಯ ಸೇವೆ ಮತ್ತು ಇನ್ನಿತರ ಸೇವಾ ಸಂಸ್ಥೆಗಳಲ್ಲಿ ಕರ್ತವ್ಯ
37ನೇ ವರ್ಷದ ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಸರ್ವಾನುಮತಮತದಿಂದ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಆರ್ಚಕರಾಗಿ ವೇ. ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ಎರ್ಮಾಳು ರೋಹಿತ್ ಹೆಗ್ಡೆ,
ಬೈಂದೂರು:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮಂಜುನಾಥ ಶೇಟ್ ಅವರು
ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರಿದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ” ವಿದ್ವತ್ ಸ್ಫೂರ್ತಿ ಸಂಚಿಕೆಯ ಮೊದಲನೇ ಭಾಗವಾದ ಈ ಕಾರ್ಯಕ್ರಮವನ್ನ ವಿದ್ವತ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ
ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ವತಿಯಿಂದ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಸೇವೆಯಲ್ಲಿ ಜನಮನ್ನಣೆ ಗಳಿಸುವುದು ಕಷ್ಟ ಸಾಧ್ಯ.
ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು
ಬ್ರಹ್ಮಾವರ: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವುದಿನದಿಂದ ಸುರಿಯುವ ಬಾರೀ ಮಳೆಯಿಂದ ಪ್ರವಾಹದಿಂದ ತುಂಬಿಹರಿಯುವ ನದಿಯಲ್ಲಿ ಬಾರಕೂರು ಬಳಿಯ ಸೀತಾನದಿಯ ನೀಲಾವರ ಕಿಂಡಿ ಅಣೆಕಟ್ಟಿನಲ್ಲಿ ಲೋಡುಗಟ್ಟಲೆ ತ್ಯಾಜ್ಯಗಳು ಸಿಲಿಕಿಕೊಂಡು ನದಿ ತೀರದಲ್ಲಿ ಕೃತಕ ನೆರೆ ಉಂಟಾಗಿದೆ. ಪೂರ್ವ ಭಾಗವಾದ ಕೊಕ್ಕರ್ಣೆ ,ಎಳ್ಳಂಪಳ್ಳಿ, ಕರ್ದಾಡಿ, ಕೂರಾಡಿ ಭಾಗದಲ್ಲಿ ಸೇತುವೆಯಿಂದ ನದಿಗೆ




























