Home 2024 (Page 55)

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ದಾಳಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಾಲೂಕು ಕಚೇರಿ ಅಧಿಕಾರಿಗಳು ಕಡತ ವಿಲೇವಾರಿ ಮಾಡಲು ಜನರನ್ನು ಸತಾಯಿಸುತ್ತಿದ್ದರು. ಆದ್ದರಿಂದ ಶಾಸಕರು ಕಚೇರಿ ದಿಢೀರ್ ಅಂತಾ ಭೇಟಿ ನೀಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ, ಜನರ ಸಮಸ್ಯೆ

ಗಾಯಕ, ಸಮಾಜ ಸೇವಕ ಯುವರಾಜ್ ದೇವಾಡಿಗ ಇನ್ನಿಲ್ಲ

ದುಬೈಯ ಯುವ ಗಾಯಕ, ಸಮಾಜ ಸೇವಕ ಯುವರಾಜ್ ಕೆ ದೇವಾಡಿಗ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಯುವರಾಜ್ ಕೆ ದೇವಾಡಿಗ ಅವರು ಮಂಗಳೂರಿನ ಮಂದಾರಬೈಲ್ ನ ನಿವಾಸಿಯಾಗಿದ್ದು ಶಾರ್ಜದ ಪ್ರತಿಷ್ಠಿತ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. 2 ವರ್ಷಗಳ ಹಿಂದೆ ಇವರ ವಿವಾಹವು ಬಿಜೈ ಕಾಪಿಕಾಡಿನ ಪ್ರತಿಮಾ ಎಂಬುವವರ ಜೊತೆ ನಡೆದಿತ್ತು. ಯೌಟ್ಯೂಬ್ ಮತ್ತು

ಅಕ್ರಮ ಗಣಿಗಾರಿಕೆಗೂ ನನಗೆ ಯಾವುದೇ ಸಂಬಂಧವಿಲ್ಲ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ್ ಶೆಟ್ಟಿ ಹೇಳಿಕೆ

ಬೆಳ್ತಂಗಡಿಯಲ್ಲಿ ನಡೆದ ಅಕ್ರಮ ಗಣಿಗಾರಿಕೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ ಶೆಟ್ಟಿ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ನಾನು ಆ ದಿನ ಕಲೆಂಜದಲ್ಲಿ ಇದ್ದು ನಮ್ಮ ಮನೆಗೆ ಪೊಲೀಸರು ಬಂದಾಗಲೇ ವಿಷಯ ತಿಳಿದಿದ್ದು ಕೂಡಲೇ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ವಿಷಯ ಮನದಟ್ಟು

ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ರಾಹುಲ್ ಗಾಂಧಿಯವರಿಂದ ಹಿಂದೂ ಸಮಾಜಕ್ಕೆ ಅಪಮಾನ

ಲೋಕ ಸಭೆಯಲ್ಲಿ ರಾಹುಲ್ ಗಾಂಧಿ ಏನು ಮಾತಾಡಬೇಕು ಅದನ್ನು ಮಾತನಾಡದೆ ಸಮಸ್ತ ಹಿಂದೂ ಸಮಾಜವನ್ನು ಅಪಮಾನ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ಬಗ್ಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ ಹಾಲಿನ ದರ

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನೇಮಕ

ಬಿಜೆಪಿ ರಾಜ್ಯ ಕಾರ್ಯಕಾರಣಿಗೆ ಸದಸ್ಯರಾಗಿ ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕರಾಗಿದ್ದ ಇವರು ಈ ಹಿಂದೆ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ

ಮಡಿಕೇರಿ: ಜುಲೈ 6ರಂದು ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ

ಮಡಿಕೇರಿ: ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಅವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭ ಜುಲೈ 6ರಂದು ಬೆಳಿಗ್ಗೆ 10.30ಕ್ಕೆ ಕೇರ್ಪಳ ಸುಳ್ಯದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಟಿ.ಎಂ.ಶಹೀದ್ ತೆಕ್ಕಿಲ್ ಅಭಿನಂದನಾ ಸಮಿತಿಯ ಅಧ್ಯಕ್ಷ ಸದಾನಂದ ಮಾವಜಿ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿಸೇಲ್ ಬೆಲೆ ಏರಿಕೆಯಿಂದ ಲಾರಿ ಉದ್ಯಮಕ್ಕೆ ಸಂಕಷ್ಟ

ಮಂಗಳೂರು : ರಾಜ್ಯ ಸರಕಾರ ಡಿಸೇಲ್ ಬೆಲೆ ಏರಿಸಿರುವುದರಿಂದ ಲಾರಿ ಉದ್ಯಮಕ್ಕೆ ಅತ್ಯಂತ ಹೆಚ್ಚು ನಷ್ಟವಾಗಲಿದ್ದು, ಮಾಲಕರು ಸಂಕಷ್ಟಕ್ಕೆ ಒಳಗಾಗುತ್ತಾರೆ’ ಎಂದು ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ ಹೇಳಿದ್ದಾರೆ. ಡಿಸೇಲ್ ಬೆಲೆ ಏರಿಕೆಯಾದರೂ ಲಾರಿ ಬಾಡಿಗೆ ದರ ಏರಿಸಲಾಗುತ್ತಿಲ್ಲ. ಸರಕಾರ ಸ್ವಾಮ್ಯದ ಬಂದರು, ಕಚ್ಚಾ ತೈಲ, ಆಹಾರ ಸಾಮಾಗ್ರಿ ಸರಕು

ಬೈಂದೂರು: ವಿಶೇಷ ಚೇತನ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು

ಬೈಂದೂರು: ತಂದೆ ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ತಕ್ಷಣವೇ ಇದು ಕ್ಷೇತ್ರವ್ಯಾಪ್ತಿಯ ಯಳಜಿತ್ ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಧಾವಿಸಿ, ಮಕ್ಕಳನ್ನು, ಅವರ ಪಾಲಕ ಪೋಷಕರನ್ನು ಭೇಟಿ ಮಾಡಿ ತುರ್ತು ಅಗತ್ಯಗಳಿಗೆ ಸ್ಪಂದಿಸಿ, ತಾತ್ಕಾಲಿಕ ವ್ಯವಸ್ಥೆ

ಮಂಜೇಶ್ವರದ ಹೆದ್ದಾರಿಯಲ್ಲಿ ವಿದ್ಯುತ್ ಕಂಬ ಅಳವಡಿಕೆ ಅವ್ಯವಹಾರ ಆರೋಪ

ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್‌ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು,