ಉಳ್ಳಾಲ: ಭ್ರಷ್ಟಾಚಾರ, ಕರ್ತವ್ಯಲೋಪ, ಕಡತ ವಿಲೇವಾರಿಯಲ್ಲಿ ಹಿನ್ನೆಡೆ ದೂರುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ನಾಟೆಕಲ್‌ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಇಬ್ಬರು ಸರ್ವೇಯರ್‌ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ತನಿಖೆಗೆ ಪಡೆದುಕೊಂಡಿದ್ದಾರೆ.
Year: 2024
ಮೂಡುಬಿದಿರೆ: ಕಳೆದ 23 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಚಾಲಕರಾಗಿದ್ದ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಅಮನಬೆಟ್ಟುವಿನ ನಿವಾಸಿ ಚಂದ್ರಶೇಖರ ಅವರು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿಯನ್ನು ಹೊಂದಿದ್ದಾರೆ. 2001ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಅವರು ಬೆಳ್ತಂಗಡಿ, ಮೂಡುಬಿದಿರೆ ಮತ್ತು ಕಾರ್ಕಳದಲ್ಲಿ
ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಆರೋಗ್ಯ
ಪುತ್ತೂರು;ಧರೆ ಕುಸಿದು ಮನೆಗೆ ಹಾನಿಯದ ಬನ್ನೂರು ಜೈನರ ಗುರಿಗೆ ಶಾಸಕರಾದ ಅಶೋಕ್ ರ‍್ಯಯವರು ಸನಿವಾರ ಭೇಟಿ ನೀಡಿ ಕುಟುಂಬದ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮನೆ ಮಾಲಿಕ ಅಬ್ದುಲ್ ಮಜೀದ್‌ರವರು ನಡೆದ ಘಟನೆಯ ಬಗ್ಗೆ ಶಾಸಕರಲ್ಲಿ ವಿವರಿಸಿದರು. ಮನೆಯ ಗೋಡೆಗೆ ಧರೆ ಜರಿದು ಬಿದ್ದು ಮಕ್ಕಳು ಮಣ್ಣಿನಡಿಯಲ್ಲಿ ಬಿದ್ದರೂ ಪವಾಡ ಸದೃಶಪಾರಾಗಿದ್ದು ಮನೆ ಗೋಡೆ
ವಿಟ್ಲ : ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು(67) ಅವರು ಜೂ.30ರಂದು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಚಿಲಿಂಬಿಯ ೩ನೇ ಕ್ರಾಸ್ ರಸ್ತೆಯಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಬೃಹತ್ತಾಕಾರದ ಮರಗಳು ಧರೆಗುರುಳು ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟವರು ಕೂಡಲೇ ಎಚ್ಚೆತ್ತು ಅಪಾಯ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.ಮಳೆಗಾಲದ ಈ ಸಂದರ್ಭದಲ್ಲಿ ಮಂಗಳೂರಿನ ವಿವಿಧೆಡೆಯ ಪ್ರದೇಶಗಳು ಅಪಾಯದ ಭೀತಿಯಲ್ಲಿದೆ. ನಗರದ ಚಿಲಿಂಬಿ
ಮಂಗಳೂರು : ತುಳು ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು.ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು
ಕೊಣಾಜೆ : ವಿದ್ಯಾರ್ಥಿಗಳು ಜೀವನದಲ್ಲಿ ಇತಿಹಾಸ ನಿರ್ಮಿಸುವಂತಹ ಮನೋಭಾವನೆ ಬೆಳೆಸಿಕೊಳ್ಳಿ ಎಂದು ಬಗರ್ ಹುಕುಂ ಸಮಿತಿ ಮಂಗಳೂರು ವಿಧಾನಾಭಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಕರ್ಕೇರ ಹೇಳಿದರು. ಉಳ್ಳಾಲ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಉಳ್ಳಾಲ ಇವರ ಸಂಯುಕ್ತ ಆಶ್ರಯದಲ್ಲಿ ಮುಡಿಪು ಗೋಪಾಲಕೃಷ್ಣ ಸಭಾಂಗಣದಲ್ಲಿ ಜರಗಿದ ನಾಡಪ್ರಭು ಕೆಂಪೇಗೌಡ
ಆರೋಗ್ಯ ಭದ್ರತೆಯಿಲ್ಲ, ಭವಿಷ್ಯನಿಧಿಯಿಲ್ಲ, ನಿವೃತ್ತಿಯ ನಂತರ ಆರ್ಥಿಕ ಭದ್ರತೆ ಸಹಿತ ಸರಕಾರದ ಹಲವಾರು ಸವಲತ್ತುಗಳಿಂದ ಗ್ರಾ.ಪಂಚಾಯತ್ ನೌಕರರು ವಂಚಿತರಾಗಿದ್ದು ಇವರ ಈ ಸಮಸ್ಯೆಗಳನ್ನು ಬಗೆ ಹರಿಸದೆ ಅಧಿಕಾರಿಗಳು ಮೌನ ವಹಿಸಿದ್ದಾರೆ. ತಮ್ಮ ಮನೆಗಳಿಗೆ ಆಧಾರ ಸ್ಥಂಭವಾಗಿರುವ ಗ್ರಾ.ಪಂ. ನೌಕರರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಇಎಸ್ ಐ
ಮಳೆಗಾಲದ ಸಮಯದಲ್ಲಿ ಎಲ್ಲೆಂದರಲ್ಲಿ ನೀರು ನಿಲ್ಲುವ ಕಾರಣದಿಂದ ಸೊಳ್ಳೆಗಳ ಉತ್ಪಾದನೆ ಜಾಸ್ತಿಯಾಗುತ್ತದೆ. ಮತ್ತು ಸೊಳ್ಳೆಗಳಿಂದ ಹರಡುವ ರೋಗಗಳು ಜಾಸ್ತಿ ಕಾಣಸಿಗುತ್ತದೆ. ಅದೇ ರೀತಿ ಮಳೆಗಾಲದ ಸಮಯದಲ್ಲಿ ಕಲುಷಿತಗೊಂಡ ನೀರಿನ ಸೇವನೆಯಿಂದಲೂ ಹಲವಾರು ರೋಗಗಳು ಬರುವ ಸಾಧ್ಯತೆ ಇದೆ. ಮಳೆಗಾಲದಲ್ಲಿ ಕಂಡು ಬರುವ ಅತೀ ಸಾಮಾನ್ಯ ರೋಗಗಳು ಯಾವುದೆಂದರೆ ಮಲೇರಿಯಾ,




























