Home 2024 (Page 71)

ನೈಋತ್ಯ ಶಿಕ್ಷಕರ ಕ್ಷೇತ್ರದ ಮತದಾನ : ದ.ಕ. ಉಡುಪಿ, ಚಿಕ್ಕಮಗಳೂರಿನಲ್ಲಿ ಯಶಸ್ವೀ ಕ್ಯಾಂಪೇನ್

ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ

ಫೇಮಸ್  ಯೂತ್ ಕ್ಲಬ್ ಮಹಿಳಾ ಮಂಡಲ ಹತ್ತನೇ ತೋಕರು ಇದರ ನೂತನ ಅಧ್ಯಕ್ಷರಾಗಿ ಪ್ರೇಮಲತಾ ಯೋಗೀಶ್ ಅವಿರೋಧ ಆಯ್ಕೆ

ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ  ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ,

ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್: ಫೈನಲ್‌ನಲ್ಲಿ ತಮಿಳುನಾಡು ಸರ್ಫರ್‌ಗಳ ಹಣಾಹಣಿ

ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದ್ದು, ಇಂದು ಫೈನಲ್‌ನಲ್ಲಿ ಸ್ಪರ್ಧಿಗಳು ಸೆಣೆಸಾಡಲಿದ್ದಾರೆ. ನಗರದ ಮಂತ್ರ ಸರ್ಫ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಸಹಯೋಗದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿರುವ ಚಾಂಪಿಯನ್‌ಷಿಪ್‌ನ ಎರಡನೇ ದಿನವೂ ತಮಿಳುನಾಡು ಸರ್ಫರ್‌ಗಳು ಪಾರಮ್ಯ ಮೆರೆದರು.

ಜೂ. 3 ವಿಧಾನಪರಿಷತ್ ಚುನಾವಣೆ ಹಿನ್ನೆಲೆ: ಸೋಮವಾರದ ಸಂತೆ ರದ್ದುಮಾಡಿದ ಅಧಿಕಾರಿಗಳು: ಸಂತೆ ರದ್ದು ಇಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ಜೂ. 3 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ರದ್ದು ಮಾಡಿ ಅಧಿಕಾರಿಗಳು ಆದೇಶ ಮಾಡಿದ್ದು ಈ ಆದೇಶವನ್ನು ರದ್ದು ಮಾಡಿ ಸಂತೆ ಎಂದಿನಂತೆ ಅದೇ ಜಾಗದಲ್ಲಿ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ತಾಪಂ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯ

ಕಾಪು: ದರೋಡೆಗೆ ಹೊಂಚು ಹಾಕುತ್ತಿದ್ದ ಆರು ಮಂದಿ ಪೊಲೀಸ್ ವಶಕ್ಕೆ

ದರೋಡೆಗೆ ಹೊಂಚು ಹಾಕಿ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ಕಾರ್ಫಿಯೋ ಕಾರಿನಲ್ಲಿ ಸಂಚರಿಸುತ್ತಿದ್ದ  ತಂಡವೊಂದನ್ನು  ಕಾಪು ಪೊಲೀಸರು ಶನಿವಾರ ರಾತ್ರಿ ಬಂದಿಸಿದ್ದಾರೆ. ರಾ.ಹೆ.66ರ ಕೋತಲಕಟ್ಟೆ ಬಳಿ ಸ್ಕಾರ್ಪಿಯೋ ಕಾರಿಗೆ ತಡೆಯೊಡ್ಡಿದ ಪೊಲೀಸರು ಆರೋಪಿಗಳಾದ ಅಮಿತ್ ರಾಜ್, ಪ್ರಕಾಶ್  ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್,

ಬ್ರಹ್ಮಾವರ: ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ

ಬ್ರಹ್ಮಾವರ: ಬ್ರಹ್ಮಾವರ ರೋಟರಿ ಕ್ಲಬ್, ಕೃಷಿ ವಿಜ್ಞಾನ ಕೇಂದ್ರ ಮತ್ತು ನಾನಾ ಸಂಘ ಸಂಸ್ಥೆಯವರ ಸಹಕಾರದಲ್ಲಿ ಎಸ್‌ಎಂಎಸ್ ಸಮುದಾಯ ಭವನದಲ್ಲಿ ಹಲಸು ಮತ್ತು ಹಣ್ಣು ಮೇಳಕ್ಕೆ ಚಾಲನೆ ನೀಡಲಾಯಿತು. ಹಲಸು ಮತ್ತು ಹಣ್ಣು ಮೇಳ 2024 ಕಾರ್ಯಕ್ರಮವನ್ನು ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಬಿ ಎಂ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿಸರ್ಗದತ್ತ

ಸುಳ್ಯ : ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಬೆಳ್ಳಾರೆ ವಲಯದ ಐವ೯ನಾಡು ಒಕ್ಕೂಟದ ಜ್ಞಾನಶ್ರೀ ಸ್ವಸಹಾಯ ಸಂಘದ ಸದಸ್ಯರಾದ ಶ್ರೀಮತಿ ಭವಾನಿ ರವರಿಗೆ ಕಣ್ಣಿನ ಚಿಕಿತ್ಸೆಗಾಗಿ ಸಂಪೂರ್ಣ ಸುರಕ್ಷಾ ಚೆಕ್ ಮಂಜುರಾಗಿದ್ದು ವಿತರಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಲಯ ಅಧ್ಯಕ್ಷರಾದ ಶ್ರೀಮತಿ ವೇದ ಎಚ್ ಶೆಟ್ಟಿ ನಿಕಟ ಪೂರ್ವ

ಸುಳ್ಯ : ಎಎನ್‌ಎಂಸಿ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಜವಾಬ್ದಾರಿ ವಹಿಸಿಕೊಂಡರು. ಇವರು ಈ ಹಿಂದೆ ನೆಹರೂ ಮೆಮೋರಿಯಲ್ ಪದವಿ

ಮೂಡುಬಿದಿರೆ: ದೈಹಿಕ ಶಿಕ್ಷಣ ವಿಶ್ರಾಂತ ಶಿಕ್ಷಕ ಕೃಷ್ಣರಾಜ ಶೆಟ್ಟಿ ನಿಧನ

ಮೂಡುಬಿದಿರೆ: ಇಲ್ಲಿನ ಜೈನ ಪ್ರೌಢ ಶಾಲೆಯ ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣರಾಜ ಶೆಟ್ಟಿ ( 62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಒಟ್ಟು 31 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅವರು ಜೈನ್ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಸಿದ್ದರು.ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಹಿತ ಹಲವೆಡೆ ಅವರು ಗೌರವಾದರಗಳಿಗೆ

ಹಳೆಯಂಗಡಿ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರ

ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಪ್ರಾಯೋಜಕತ್ವದಲ್ಲಿ, ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ