Home 2024 (Page 85)

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ

ಬಂಟ್ವಾಳ: ರಸ್ತೆ ಬದಿಯೇ ಡಂಪಿಂಗ್ ಯಾರ್ಡ್: ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದು ಅನಾಗರಿಕ ಪ್ರವೃತ್ತಿ

ಬಂಟ್ವಾಳ ತಾಲೂಕಿನ ಬಹುತೇಕ ಭಾಗಗಳಲ್ಲಿ ರಸ್ತೆ ಇಕ್ಕೆಲಗಳು, ಇಳಿಜಾರು ಗುಂಡಿಗಳು ಕಸ ಎಸೆಯುವ ತಾಣಗಳಾಗುತ್ತಿದೆ. ಕೊಳೆಯುವ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಾಹನಗಳಲ್ಲಿ ಬಂದು ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗುವ ಅನಾಗರಿಕ ಪ್ರವೃತ್ತಿ ಹೆಚ್ಚಾಗುತ್ತಿದೆ. ಮನೆ, ಅಂಗಡಿಗಳ ತ್ಯಾಜ್ಯಗಳು ರಸ್ತೆ ಬದಿಗಳಲ್ಲಿ ಎಸೆಯುತ್ತಿರುವ ಪರಿಣಾಮ ಸುತ್ತಮುತ್ತಲ

ಬಂಟ್ವಾಳ: ಕಾಮಾಜೆ ಸರ್ಕಾರಿ ಕಾಲೇಜಿನತ್ತ ವಿದ್ಯಾರ್ಥಿಗಳನ್ನು ಸೆಳೆಯಲು ಕಾರಿನಲ್ಲಿ ಸ್ಟಿಕ್ಕರ್ ಬರಹ

ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ

ಥಾಲೆಸೇಮಿಯಾ ಜಾಗ್ರತಿ ದಿನ…ಮೇ 8

ಥಾಲೆಸೇಮಿಯಾ ಜಾಗ್ರತಿ ದಿನ…ಮೇ ೮ ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್‍ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು

ವಿಶ್ವ ಲೂಪಸ್ (ಚರ್ಮ ಕ್ಷಯ) ದಿನ ಮೇ 10

ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್ ಎಂಬ ಹೆಸರಿನಿಂದ ಕರೆಯಲ್ಪಡುವ ‘ಲೂಪಸ್ ರೋಗ’ ಒಂದು ರೀತಿಯಲ್ಲಿ ವಿಶಿಷ್ಟ ರೋಗವಾಗಿದ್ದು ಹಲವಾರು ಅಂಗಾಂಗಗಳನ್ನು ಸದ್ದಿಲ್ಲದೆ ಕಾಡುತ್ತದೆ. ಇದೊಂದು ಸಾಂಕ್ರಾಮಿಕವಲ್ಲದ, ದೀರ್ಘಕಾಲಿಕ ಕಾಯಿಲೆಯಾಗಿದ್ದು, ಚರ್ಮ, ಕೀಲುಗಳು, ಮೂತ್ರಪಿಂಡಗಳು, ಹೃದಯ, ಶ್ವಾಸಕೋಶಗಳು, ರಕ್ತನಾಳಗಳು ಮತ್ತು ಮೆದುಳು ಸೇರಿದಂತೆ ದೇಹದ ಹಲವಾರು ಭಾಗಗಳ

ವಿಶ್ವ ರೆಡ್ ಕ್ರಾಸ್ ದಿನ – ಮೇ 8

ಜಗತ್ತಿನಾದ್ಯಂತ ಮೇ 8 ರಂದು “ವಿಶ್ವ ರೆಡ್ ಕ್ರಾಸ್ ದಿನ” ಎಂದು ಆಚರಿಸಲಾಗುತ್ತದೆ. ಮಾನವೀಯತೆಯಿಂದ ಶಾಂತಿಯ ಕಡೆಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುವ ವಿಶ್ವ ರೆಡ್ ಕ್ರಾಸ್ ಸಂಸ್ಥೆಯನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ ಶ್ರೀ ಹೆನ್ರಿ ಡ್ಯೂನಾಂಟ್ ಇವರು ಹುಟ್ಟಿದ ದಿನ ಮೇ 8. 1859 ರ ಜೂನ್ 24 ರಂದು ‘ಸಲ್ಫರಿನೋ’ ಕದನ ದ ಗಾಯಳುಗಳ ಮನ ಕಲುಕುವ

ಯಾರ ಆಡಳಿತದಲ್ಲಿ ಕಾಶ್ಮೀರ ಪಂಡಿತರ ಕೊಲೆ ಆಯಿತು?

ಪ್ರಧಾನಿ ಮೋದಿಯವರದು ಮಾತು ಮಾತ್ರ ಎಂದು ತಿಳಿದ ಬಳಿಕ ಕಳೆದ ತಿಂಗಳು ಕಾಶ್ಮೀರದ ಪಂಡಿತರ ಸಂಘಟನೆಯವರು ಕಾಂಗ್ರೆಸ್ಸಿಗೆ ಸೇರಿದರು. ಮಾಹಿತಿ ಹಕ್ಕಿನಡಿ ಶ್ರೀನಗರದ ಎಸ್‍ಪಿ ಕಚೇರಿ ನೀಡಿರುವ ಲೆಕ್ಕದಂತೆ ಕೊಲೆಯಾದ ಪಂಡಿತರ ಸಂಖ್ಯೆ 89 ಹಾಗೂ ಕೊಲೆಯಾದ ಇತರರ ಸಂಖ್ಯೆ 1,635. ಕಾಶ್ಮೀರಿ ಪಂಡಿತರ ಕೊಲೆ ನಡೆದುದು 1990ರ ಜನವರಿ ಫೆಬ್ರವರಿಯಲ್ಲಿ. ಆಗ ರಾಷ್ಟ್ರಪತಿ ಆಡಳಿತ

ಶತಮಾನದ ಬಳಿಕ ಪ್ಯಾರಿಸ್ ಒಲಿಂಪಿಕ್ಸ್ || Olympic Games Paris 2024

ಒಲಿಂಪಿಕ್ಸ್ ಬೆಳಕಿನ ಪಂಜು ಗ್ರೀಸಿನ ಅಥೆನ್ಸ್‍ನಿಂz 12 ದಿನಗಳ ಸಾಗರ ಪಯಣದ ಬಳಿಕ ಫ್ರಾನ್ಸಿನ ಮಾರ್ಸೆಲ್ ಬಂದರು ತಲುಪಿದೆ. ಸಾವಿರ ದೋಣಿಗಳು ಕವಾಯತಿನ ನಡುವೆ ಒಲಿಂಪಿಕ್ಸ್ ದೊಂದಿ ತಂದ 1896ರ ಬೆಲೆಮ್ ವ್ಯಾಪಾರಿ ಹಡಗನ್ನು ಮಾರ್ಸೆಲ್‍ನಲ್ಲಿ ಸ್ವಾಗತಿಸಲಾಯಿತು. ಕಳೆದ ಮೂರು ಒಲಿಂಪಿಕ್ಸ್‍ಗಳಲ್ಲಿ ಮಾರ್ಸೆಲ್‍ನವರೇ ಇದ್ದ ಫ್ರಾನ್ಸಿನ ಹುಟ್ಟು ಹಾಕು ತಂಡವು ಚಿನ್ನ

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಾಪ

ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಂಬನಿ ಮಿಡಿದಿದ್ದಾರೆ.ಜನನಿಷ್ಠ ರಾಜಕಾರಣಿ, ಸ್ನೇಹ ಜೀವಿ, ಸಮರ್ಥ ಕೆಲಸಗಾರ, ಹೋರಾಟಗಾರ,

ಬೆಳ್ತಂಗಡಿ: ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ಸಂತಾಪ

ಬೆಳ್ತಂಗಡಿ: ಹಿರಿಯ ರಾಜಕಾರಣಿ ಮಾಜಿ ಶಾಸಕ ಶ್ರೀ ಕೆ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದು, ಪಕ್ಷಾತೀತವಾಗಿ ಜನತೆ ಅವರನ್ನು ಬೆಂಬಲಿಸಿದುದರ ನಿದರ್ಶನವಾಗಿದೆ.