Home 2025 May (Page 6)

ಸಕಲೇಶಪುರ: ಚಿನ್ನದ ಸರ ಕಳವು ಪ್ರಕರಣ ; ಗದಗ ಮೂಲದ ಸೈಯದ್ ಅಲಿ ಬಂಧನ

ಸಕಲೇಶಪುರ: ತಾಲೂಕಿನ ಮಠಸಾಗರ ಗ್ರಾಮದಲ್ಲಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯೊಬ್ಬರಿಂದ 25 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾದ ಆರೋಪಿ ಸೈಯದ್ ಅಲಿ ನಡಾಫ್ ಬಿನ್ ಬಾಳಾಸಾಬ್ (27), ಗದಗ ಜಿಲ್ಲೆಯ ಹುಲ್ಲೂರು ಗ್ರಾಮದವನು, ಸಕಲೇಶಪುರ ನಗರ ಪೊಲೀಸರು ಸೆರೆಹಿಡಿದಿದ್ದಾರೆ. ಮಾರ್ಚ್ 25 ರಂದು ನಡೆದ ಈ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು,

ಎಡಕ್ಕಾನ ರಾಜಾರಾಂ ಭಟ್ ಹೃದಯಾಘಾತದಿಂದ ನಿಧನ

ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾ‌ರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ. ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್

ಕಡಬ:ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ತೆಂಗಿನಕಾಯಿ ಕೀಳಲು ತೆಂಗಿನ ಮರಕ್ಕೆ ಹತ್ತಿದ್ದ ವ್ಯಕ್ತಿಯೊಬ್ಬರು ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ನಡೆದಿದೆ.ಮೃತಪಟ್ಟವರನ್ನು ಕಡಬ ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕ ನಿವಾಸಿ ದಿ|ಐತ್ತಪ್ಪ ಪೂಜಾರಿ ಅವರ ಪುತ್ರ ಉಮೇಶ್ (46) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯ ತೋಟದಲ್ಲಿ ತೆಂಗಿನ ಮರಕ್ಕೆ ಹತ್ತಿದ್ದರು. ಕೆಳಕ್ಕೆ ಬಿದ್ದು

ಡಾl ರವಿ ಕಕ್ಕೆಪದವು ರಾಜ್ಯ ಮಟ್ಟದ ಕಾಯಕ ಯೋಗಿ ಪ್ರಶಸ್ತಿ ಗೆ ಆಯ್ಕೆ

ಮೇ.1 ರಂದು ಕಾರ್ಮಿಕ ದಿನಾಚರಣೆಯ ಸಂದರ್ಭ ನಡೆಯುವ ರಾಜ್ಯ ಮಟ್ಟದ ಸಮಾರಂಭದಲ್ಲಿ ರವಿ ಕಕ್ಕೆಪದವು ಅವರು ಕಾಯಕಯೋಗಿ ಪ್ರಶಸ್ತಿ ಪಡೆಯಲಿದ್ದಾರೆ.ಸಮಾಜಸೇವಕರ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಲ್ಲಿ ಈ ಪ್ರಶಸ್ತಿಗೆ ಇವರೊಬ್ಬರೇ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಬಾಗಲಕೋಟೆಯಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ವಾಗಲಿದೆ .

ಶಯದೇವಿಸುತೆ ಮರವಂತೆಯವರ ಮುಡಿಗೇರಿದ ಅಂತರಾಷ್ಟ್ರೀಯ ಗೌರವ ಡಾಕ್ಟರೇಟ್ ಪದವಿ

ವಿವಿಧ ಹಲವಾರು ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ವಿಶೇಷ ಮಾನದಂಡದ ಆಧಾರದ ಮೇಲೆ ಪರಿಗಣಿಸಿ ಶಯದೇವಿಸುತೆ ಮರವಂತೆ(ಜ್ಯೋತಿ ಜೀವನ್‌ಸ್ವರೂಪ್) ಅವರಿಗೆ ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಕೇಂಬ್ರಿಡ್ಜ್ ವಿಶ್ವವಿದ್ಯಾಲಯವು ಮಹೋನ್ನತ ಗೌರವ ಡಾಕ್ಟರೇಟ್ ಪದವಿಯನ್ನು ಇತ್ತೀಚೆಗಷ್ಟೇ ಮಾರ್ಚ್-01ರಂದು

ವಿದ್ಯಾಮಾತಾ ಅಕಾಡೆಮಿಯಲ್ಲಿ UGC-NET / K-SET ಪರೀಕ್ಷೆಗಳ ತರಬೇತಿ ಮೇ 07ರಿಂದ ಪ್ರಾರಂಭ

ಕಳೆದ ಐದು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ 2025ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET ಮತ್ತು K SET) ಪೂರ್ವ ತಯಾರಿ ತರಬೇತಿ ಆರಂಭಗೊಳ್ಳಲಿದೆ. ರಾಷ್ಟ್ರೀಯ

ಅತ್ಯಾಧುನಿಕ ರೊಬೋಟಿಕ್ ತಂತ್ರಜ್ಞಾನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ: ಎ.ಜೆ. ಆಸ್ಪತ್ರೆ ಯಲ್ಲಿ ಆರೋಗ್ಯ ಕ್ಷೇತ್ರದ ಹೊಸ ಮುನ್ನಡೆ

ಮಂಗಳೂರು: ಕಾರವಾರ ಮೂಲಕ ಮಹಿಳೆಯೊಬ್ಬರ ಮೂತ್ರಪಿಂಡದಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿತ್ತು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ರೊಬೋಟಿಕ್ ತಂತ್ರಜ್ಞಾನವನ್ನು ಬಳಸಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದು ವೈದ್ಯರ ವಿಶೇಷ ಸಾಧನೆ ಆಗಿದೆ. ಕಾರವಾರದ 48 ವರ್ಷದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಎರಡು ತಿಂಗಳಿನಿಂದ ತೀವ್ರವಾದ ಎಡ ಹೊಟ್ಟೆ ನೋವಿನಿಂದ

ಎಸ್ ಎಸ್ ಎಲ್ಸಿ ಪರೀಕ್ಷೆ : ಕಲ್ಲಬೆಟ್ಟು ಮೊರಾಜಿ೯ ದೇಸಾಯಿಗೆ ಶೇ 100 ಫಲಿತಾಂಶ

ಮೂಡುಬಿದಿರೆ : ದ. ಕ. ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿಶಾಲೆಯ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಒಟ್ಟು 43 ವಿದ್ಯಾರ್ಥಿಗಳು ಹಾಜರಾಗಿದ್ದು, ಹಾಜರಾದ ಎಲ್ಲಾ ವಿಧ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸತತವಾಗಿ ಶಾಲೆಗೆ ಶೇ. 100 ಫಲಿತಾಂಶವನ್ನು ನೀಡಿರುತ್ತಾರೆ. 43 ವಿದ್ಯಾರ್ಥಿಗಳಲ್ಲಿ 25ವಿದ್ಯಾರ್ಥಿಗಳು

ಕೆವಿಜಿ ಪಾಲಿಟೆಕ್ನಿಕ್ : ನಿವೃತ್ತರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ ವಹಿಸಿ ನಿವ್ರತ್ತರನ್ನು ಸನ್ಮಾನಿಸಿದರು. ಅಧೀಕ್ಷಕ ಧನಂಜಯ ಕಲ್ಲುಗದ್ದೆ

ಪದ್ಮಶ್ರೀ ಪುರಸ್ಕೃತ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ನಿಧನ

ಪದ್ಮಶ್ರೀ ಪುರಸ್ಕೃತ 128 ವರ್ಷದ ಯೋಗ ಗುರು ಸ್ವಾಮಿ ಶಿವಾನಂದ ಬಾಬಾ ಅವರು ನಿಧನರಾದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ವಾರಾಣಸಿಯ ಬಿಎಚ್‌ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ರಾತ್ರಿ ಅವರು ಮೃತರಾಗಿದ್ದು, ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಯೋಗಕ್ಕಾಗಿಯೇ ಜೀವನವನ್ನು ಮುಡಿಪಾಗಿಟ್ಟಿದ್ದ ಶಿವಾನಂದ ಅವರಿಗೆ