Home 2025 June (Page 2)

ಕೆವಿಜಿ ಪಾಲಿಟೆಕ್ನಿಕ್ : ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

ಕುರಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ 2025- 26 ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಭಿವಿನ್ಯಾಸ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎ.ಓ.ಎಲ್‌.ಇ ಕಮಿಟಿ ‘ಬಿ” ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಪೋಷಕರು

ಸರ್ಕಾರಿ ಬಸ್ ಗಳ ನಡುವೆ ಅಪಘಾತ: ಓರ್ವ ಮಹಿಳೆ ಮೃತ್ಯು: 15ಕ್ಕೂ ಹೆಚ್ಚು ಮಂದಿಗೆ ಗಾಯ

ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅರಂತೋಡಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕುಶಾಲನಗರ ಮೂಲದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು

ಮಂಗಳೂರು : ತುಳು ನಾಟಕ ಕಾರ್ಯಾಗಾರ ಉದ್ಘಾಟನೆ

ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ:ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆ

ಸುರತ್ಕಲ್: ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ ಆಯ್ಕೆಯಾಗಿದ್ದಾರೆ.ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ

ವಿದ್ಯಾಮಾತಾ ದಲ್ಲಿ SSC GD ಮತ್ತು ಅಗ್ನಿಪಥ್ ಗೆ ದೈಹಿಕ ಸದೃಢತೆಯ ಉಚಿತ ತರಬೇತಿ ಪ್ರಾರಂಭ

ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ

ಸುಳ್ಯ : ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ

ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್

ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್‌ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ. ಜಾಗತಿಕ ಆರೋಗ್ಯ ಸೇವೆ, ವ್ಯೆದ್ಯಕೀಯ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಉದ್ದೇಶದ ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಆಧರಿಸಿ ಈ ಗೌರವ ನೀಡಲಾಗಿದೆ. ಇದು ಅವರಿಗೆ ಲಭಿಸುತ್ತಿರುವ ಐದನೇ ಗೌರವ ಡಾಕ್ಟರೇಟ್.

ಮಂಗಳೂರು: ಎಲ್ಲರ ಕನಸು ನನಸಾಗಿಸುವ ಡ್ರೀಮ್ ಡೀಲ್ ಗ್ರೂಪ್

ಸಾಮಾನ್ಯ ಜನರ ಕನಸುಗಳಿಗೆ ರೂಪ ಕೊಡುವ ಮಹತ್ವಾಕಾಂಕ್ಷೆಯೊಂದಿಗೆ ಡ್ರೀಮ್ ಡೀಲ್ ಗ್ರೂಪ್ ದೇಶದಾದ್ಯಂತ ತನ್ನ ವಿಸ್ತರಣೆಯನ್ನು ಮುಂದುವರೆಸಿದೆ. *ಕೇವಲ ತಿಂಗಳಿಗೆ 1,೦೦೦ ರೂಪಾಯಿ ಮಾತ್ರ ಉಳಿತಾಯ ಮಾಡಿ* ಲಕ್ಷಾಂತರ ರೂಪಾಯಿ ಬೆಲೆಯ ಮನೆ, ಕಾರು, ವಿದೇಶಿ ಪಯಣ, ಚಿನ್ನದ ಆಭರಣಗಳನ್ನು ಗೆಲ್ಲುವ ಅವಕಾಶವನ್ನು ನೀಡಿದೆ. ೨೦ ಕಂತುಗಳಲ್ಲಿ ಭಾಗವಹಿಸುವ ಅವಕಾಶವಿದೆ. ಪ್ರತಿ

ಪ್ರವಾಹ ಪೀಡಿತ ಪ್ರದೇಶದ ಶಾಶ್ವತ ಪರಿಹಾರಕ್ಕೆ ಕ್ರಮ: ಶಾಸಕ ಕಾಮತ್

ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ,

ಸುಳ್ಯ: ಅಡ್ಕಾರ್‌ನಲ್ಲಿ ಕಾರು ಅಪಘಾತ

ಸುಳ್ಯ: ಸುಳ್ಯದ ಅಡ್ಕಾರ್‌ನಲ್ಲಿ ಡಸ್ಟರ್ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ. ಕಾರು ಕೇರಳ ರಾಜ್ಯದ ನೋಂದಣಿ ಹೊಂದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.