Home 2025 September (Page 3)

ಹೃದಯಾಘಾತಕ್ಕೆ ವಿವಾಹಿತೆ ಬಲಿ

ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.

ಬೆಂಗಳೂರು:ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವ ನಿಧನ

ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿನಿಧನರಾದರು.ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.ಧಾರವಾಡದ ಕರ್ನಾಟಕ

ಬೈಂದೂರು : ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025 ಸಪ್ತ ಸಂಭ್ರಮ

ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025-ಸಪ್ತ ಸಂಭ್ರಮ ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರ ನಾಗೂರಿನಲ್ಲಿ ಸಂಭ್ರಮದಲ್ಲಿ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಟ್ರಸ್ಟಿ, ಉದ್ಯಮಿ ತ್ರಾಸಿ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಇಂದಿನ ಯುವ ಜನತೆ ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಬೇಕು.

ಬೈಂದೂರು : ತಾಲೂಕು ಆಡಳಿತ ಸೌಧ ವಿಶ್ವಕರ್ಮ ಜಯಂತಿ

ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ‌ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,  ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕ ಹೃದಯಾಘಾತಕ್ಕೆ ಬಲಿ

ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಡುಬಿದಿರೆ: ಕ್ರಾಸ್‌ಕಂಟ್ರಿ – ಆಳ್ವಾಸ್ ಸತತ 21ನೇ ವರ್ಷಗಳಿಂದ ಚಾಂಪಿಯನ್

ಮೂಡುಬಿದಿರೆ: ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ.

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ಆರೋಪದಲ್ಲಿ ಮೂವರ ಬಂಧನ

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಟ್ಲದ ಮಂಗಳಪದವು ನಿವಾಸಿ ಸನತ್ ಕುಮಾರ್, (23) , ವಿಟ್ಲ ಕಸಬಾ ಗ್ರಾಮದ ರಾಝಿಕ್ (23)ಮತ್ತು ಮಂಗಳಪದವು ನಿವಾಸಿ ಚೇತನ್ (23) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ

ಕನ್ನಡ ಜಾಗೃತಿ ಸಮಿತಿ ದ.ಕ. ಜಿಲ್ಲಾ ಸದಸ್ಯರಾಗಿ ರಾಜೇಶ್ ಕಡಲಕೆರೆ ಆಯ್ಕೆ

ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ವಿಶೇಷ ವಿಜ್ಞಾನ ಉಪನ್ಯಾಸ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 11 ಗುರುವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಸ್ಟ್ರೋ ಫಿಸಿಕ್ಸ್ (IIA) ಇಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿ ಯಾಗಿರುವ

ಮರ್ದಾಳ: ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿಸೆ.9ರಂದು ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6 ಗಂಟೆಯಾದರೂ ಮನೆಗೆ ಬಾರದೇ ಇದ್ದುದರಿಂದ ಲಿಂಗಪ್ಪ ಗೌಡ ಅವರು