ಮೂಡುಬಿದಿರೆ : ನಿಡ್ಡೋಡಿಯ ಮನೆಯೊಂದರಲ್ಲಿ ನಾಲ್ಕು ಮಂದಿ ಯುವಕರೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅವರ ತಂಡವು ದಾಳಿ ನಡೆಸಿ ಸಂಭಾವ್ಯ ಗ್ಯಾಂಗ್ ರೇಪ್ ನಿಂದ ಬಾಲಕಿಯರನ್ನು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. ಈ ಪ್ರಕರಣದ ಆರೋಪಿಗಳಾಗಿರುವ ನಿಡ್ಡೋಡಿಯ ಮಹೇಶ, ಕಟೀಲು
Month: October 2025
ಹೆಬ್ರಿ,ಅ,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು ಜೀವನ ನಿರ್ವಹಣೆಗೆ ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸಿಕೊಂಡಿದ್ದರು.
ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು.
ಪಡುಬಿದ್ರಿ:ಯುವ ವಾಹಿನಿ ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31ಹಾಗೂ ಫೆಬ್ರವರಿ 01ನೇ ತಾರೀಕು ಅಂತರ್ ರಾಷ್ಟ್ರೀಯ ಮಟ್ಟದ ಬಿಲ್ಲವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅದರ ಪೂರ್ವಬಾವಿಯಾಗಿ ಅದರ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವರ ಸಂಘದ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು,ಅ.12; ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಅವರು ಯಕ್ಷಗಾನದಲ್ಲಿ ಹೊಸಬೆಳಕು ಮೂಡಿಸಿದ ಮೇರು ವ್ಯಕ್ತಿತ್ವ ವನ್ನು ಹೊಂದಿದ್ದರು ಎಂದು ಯಕ್ಷಗಾನ ವಿದ್ವಾಂಸ ಡಾ.ಪ್ರಭಾಕರ ಜೋಶಿ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘದ ಸಹಯೋಗದೊಂದಿಗೆ ಮಂಗಳೂರಿನ ತುಳು ಭವನದಲ್ಲಿ ರವಿವಾರ ಹಮ್ಮಿಕೊಂಡ ಮಹಿಳಾ ಭಾಗವತೆ
ಹಾಸನ: ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾದ ಹೆಲಿಕಾಪ್ಟರ್ ಪ್ರವಾಸದಲ್ಲಿ ನಗರ ಸ್ವಚ್ಛತೆಗೆ ದಿನರಾತ್ರಿ ಶ್ರಮಿಸುತ್ತಿರುವ ಮಹಾನಗರ ಪಾಲಿಕೆ ಪೌರ ಕಾರ್ಮಿಕರನ್ನು ಸಂಸದ ಶ್ರೇಯಸ್ ಪಟೇಲ್ ಗೌರವಿಸಿದ್ದಾರೆ. ನಗರದ ಹೊಳಪಿಗಾಗಿ ಶ್ರಮಿಸುವ ಈ “ಮೌನ ಯೋಧರ” ಸೇವೆಗೆ ಕೃತಜ್ಞತೆಯ ಸೂಚಕವಾಗಿ, ಸಂಸದರು ನಾಲ್ವರು ಪೌರ
ಕಾಪು:ಜಗತ್ತಿನ ಶ್ರೇಷ್ಟ ತಾಂತ್ರಿಕ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಉಪಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಅವರು ಪತ್ನಿಯೊಂದಿಗೆ ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ
ಸಂಪಾಜೆ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕಾರ್ಮಿಕರ ಕನಿಷ್ಠ ವೇತನ ಸಲಹಾ ಸಮಿತಿ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ರವರಿಗೆ ಅಭಿನಂದನಾ ಸಮಾರಂಭ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ.ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್
ನೆಹರೂ ಮೆಮೋರಿಯಲ್ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾ ಸಭೆ ಅ.10ನೇ ಶುಕ್ರವಾರದಂದು ನಡೆಯಿತು. ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ರಕ್ಷಕ ಶಿಕ್ಷಕ ಸಂಘ ಬಹಳ ಮುಖ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ
ಹೆಜಮಾಡಿ:ಏಳನೇ ಕಾವು ತಾಲೂಕು ಸಾಹಿತ್ಯ ಸಮ್ಮೇಳನವು ನ. 15 ರಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ನಡೆಯಲಿದ್ದು,ಆ ಪ್ರಯುಕ್ತ ಇಂದು ಹೆಜಮಾಡಿಯ ಬಿಲ್ಲವ ಸಂಘದಲ್ಲಿ ಪೂರ್ವಭಾವಿ ಸಭೆಯು ನಡೆಯಿತು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅವರು ಮಾತನಾಡಿ ಸಾಹಿತ್ಯ ಸಮ್ಮೇಳನ ಯಶಸ್ವಿ ಗೊಳಿಸೋಣ ಹಾಗೂಸಾಮಾಜಿಕ ನ್ಯಾಯ, ಪ್ರತಿಭಾ ನ್ಯಾಯ,




























