ಪುತ್ತೂರು: ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ. ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್ ವರ್ಕ್‌ಶಾಪ್
Month: November 2025
ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025
ಸಹಕಾರ ಕ್ಷೇತ್ರದಲ್ಲಿ ನೀಡಿದ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ ಮಂಗಳೂರಿನ ಉರ್ವ ಸ್ಟೋರ್‌ನ ತುಳುಭವನ ಸಿರಿ ಚಾವಡಿಯಲ್ಲಿ 16 ನವೆಂಬರ್ 2025 ರಂದು ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಮಾರಂಭದಲ್ಲಿ ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರಿಗೆ 2025 ರ ಪ್ರತಿಷ್ಠಿತ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿಯನ್ನು ನೀಡಿ
ಮಂಗಳೂರು: ತುಳು ಭಾಷೆ ಮತ್ತು ತುಳುನಾಡಿನೊಂದಿಗೆ ಕಿಟೆಲ್ ಅವರ ಒಡನಾಟದ ಬಗ್ಗೆ ಹೊಸ ಬೆಳಕು ಚೆಲ್ಲುವ ವಿಚಾರ ಮಂಥನ ಕಾರ್ಯಕ್ರಮ ನ.22ರ ಶನಿವಾರದಂದು ಬೆಳಿಗ್ಗೆ 10:00 ಗಂಟೆಗೆ ಮಂಗಳೂರಿನ ಊರ್ವ ಸ್ಟೋರ್ ನಲ್ಲಿರುವ ತುಳು ಭವನದಲ್ಲಿ ನಡೆಯಲಿದೆ. ಕರ್ನಾಟಕದಲ್ಲಿ ಸುದೀರ್ಘ ಕಾಲ ಅಧ್ಯಯನ ಹಾಗೂ ಕ್ಷೇತ್ರಕಾರ್ಯ ಮಾಡಿ ಕನ್ನಡದ ನಿಘಂಟು ರೂಪಿಸಿದ ರೆವೆರೆಂಡ್ ಫರ್ಡಿನೆಂಡ್
ಕ್ರೀಡೆ ಎಂಬುದು ಆರೋಗ್ಯಕ್ಕೆ ಪೂರಕ. ಕ್ರೀಡೆಯಿಂದ ದೈಹಿಕ ಕ್ಷಮತೆಯೊಂದಿಗೆ ನಾವು ಆರೋಗ್ಯವಾಗಿ ಕ್ರಿಯಾಶೀಲವಾಗಿ ಇರಲು ಸಾಧ್ಯ ಎಂದು ರಾಷ್ಟ್ರ ಮಟ್ಟದ ಕ್ರೀಡಾಪಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಪುತ್ತೂರು ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಪೊಡಿಯ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನವೆಂಬರ್ 19ರಂದು ನಡೆದ ವಾರ್ಷಿಕ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಅವಳಿ ಪ್ರಶಸ್ತಿ ಪಡೆದಿದೆ. ಆಳ್ವಾಸ್ ಹುಡುಗರ ವಿಭಾಗದಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು.
ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಕಾಂಪಿಟೀಷನ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮೂಡುಬಿದಿರೆ ಕೋಡೆಬಾಗಿಲಿನ ಯುವಕ ಅನ್ಸಾರ್ ಎಂಬಾತ ಎರಡು ಚಿನ್ನದ ಪದಕಗಳೊಂದಿಗೆ ಜೂನಿಯರ್ ಮಿಸ್ಟರ್ ವರ್ಲ್ಡ್ ವಿಭಾಗದಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.ದುಬೈನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಭಾರತ
ಓರ್ವ ವಿದ್ಯಾರ್ಥಿನಿ ಸಾವು : ಮತ್ತೊರ್ವ ವಿದ್ಯಾರ್ಥಿನಿ ಗಂಭೀರ ಬೆಳ್ತಂಗಡಿ : ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು. ಸ್ಕೂಟರ್‌ನ
ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ. ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ




























