Home 2025 December

ಕಲ್ಲಬೆಟ್ಟುವಿನಲ್ಲಿ ಪೋಲಿಯೋ ಲಸಿಕಾ ಅಭಿಯಾನ

ಮೂಡುಬಿದಿರೆ : ಪೋಲಿಯೋ ದಿನದ ಅಂಗವಾಗಿ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಶಾಲೆ ಮತ್ತು “ನಮ್ಮ ಕ್ಲಿನಿಕ್”ನಲ್ಲಿ ಐದು ವಷ೯ದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಲಾಯಿತು.ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್ ಅವರು ಎರಡೂ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾಯ೯ಕ್ರಮಕ್ಕೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.ಕಲ್ಲಬೆಟ್ಟುವಿನ

ಕಾಪು:18 ಲಕ್ಷ ರೂ. ವೆಚ್ಚದ ಕಾಲು ಸಂಕ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಾಳ ತುಂಗೇರ್ ಬೈಲು ಬಳಿ ಕಾಲು ಸಂಕ ನಿರ್ಮಾಣಕ್ಕೆ 18 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ,

ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ: ಆರೋಗ್ಯ ಸೇವೆಗಳ ಆಯುಕ್ತಾಲಯದಿಂದ ಮಾರ್ಗಸೂಚಿ ಬಿಡುಗಡೆ

ಹವಾಮಾನ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಸೀಸನಲ್ ಫ್ಲೂ(ಶೀತಜ್ವರ) ಹೆಚ್ಚಳ ಆಗುತ್ತಿದ್ದು, ಡಿಸೆಂಬರ್, ಜನವರಿಯಿಂದ ಮಾರ್ಚ್ ತನಕ ಸೀಸನಲ್ ಫ್ಲೂ ಹೆಚ್ಚಳದ ಭೀತಿ ಇದೆ. ಹೀಗಾಗಿ ಆರೋಗ್ಯ ಸೇವೆಗಳ ಆಯುಕ್ತಾಲಯವು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಕಾಡಲಿದ್ದು, ಕೆಲವೊಮ್ಮೆ 3 ವಾರಗಳ ವರೆಗೂ ಮುಂದುವರಿಯುತ್ತದೆ. ಹೀಗಾಗಿ

ಕೊಲ್ಲೂರು ದೇವಳದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಪ್ರಕರಣ: ರಾಜಸ್ಥಾನ ಮೂಲದ ಆರೋಪಿ ಬಂಧನ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಠಿಸಿ ಭಕ್ತರಿಂದ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್(21) ಬಂಧಿತ ಆರೋಪಿ. ಈತ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೊಲುವ ನಕಲಿ ವೆಬ್ ಸೈಟ್ ಸೃಷ್ಠಿಸಿ

ಕೋಟೇಶ್ವರದಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ

ಕುಂದಾಪುರ: ಕೋಟೇಶ್ವರ ಪಂಚಾಯತ್ ಗೆ ಸೇರಿದ ಎಸ್.ಎಲ್.ಆರ್.ಎಂ. ಒಣ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಯಾದ ಘಟನೆ ರವಿವಾರ ನಸುಕಿನ ವೇಳೆ ಕೋಟೇಶ್ವರದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಹಿಂಬದಿಯಲ್ಲಿ (ಹಳೆ ಗ್ರಾಪಂ ಕಟ್ಟಡ) ಕಳೆದ ನಾಲ್ಕೈದು ವರ್ಷಗಳಿಂದ ಎಸ್.ಎಲ್.ಆರ್.ಎಂ. ಘಟಕ ಕಾರ್ಯಾಚರಿಸುತ್ತಿದ್ದು

ಎಲ್ ಕೆಜಿ, ಪಿಯುಸಿ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ: ಮಧು ಬಂಗಾರಪ್ಪ

ಅಪೌಷ್ಟಿಕತೆ ಹೋಗಲಾಡಿಸಿ ಮಕ್ಕಳ ಕಲಿಕೆಗೆ ನೆರವಾಗಲು ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕ ಹಾಗೂ ಪದವಿಪೂರ್ವ (ಪಿಯುಸಿ) ವಿದ್ಯಾರ್ಥಿಗಳಿಗೂ ವಿಸ್ತರಿಸಲಾಗುವುದು’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸರ್ಕಾರಿ

ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ

ಬೆಂಗಳೂರು, ಡಿ.20- ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳು ಕಡಬ

ಸರಸ್ವತೀ ವಿದ್ಯಾಲಯ ಸಮೂಹ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಡಿಸೆಂಬರ್ ೧೬ರಂದು ಹನುಮಾನ್ ನಗರದ ಮೈದಾನದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಂಸ್ಥೆಯ ನಿಕಟಪೂರ್ವ ಸಂಚಾಲಕರು, ಪ್ರಸ್ತುತ ವಿವೇಕಾನಂದ ವಿದ್ಯಾವರ್ಧಕ ಸಂಘದ ಪುತ್ತೂರು (ರಿ.) ಇದರ ಸಹಕಾರ್ಯನಿರ್ವಹಣಾಧಿಕಾರಿಯಾಗಿರುವ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಕ್ರೀಡಾಕೂಟ ಯಶಸ್ವಿಯಾಗಿ

ಕ್ಯಾನ್‌ಕೋಸ್ ಗೀವ್‌ಅವೇ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

ಮೂಲ್ಕಿಯ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್ ಸೋಶಿಯಲ್ ಮೀಡಿಯಾದಲ್ಲಿ ಆಯೋಜಿಸಿದ ಸ್ಪರ್ಧೆ ಕ್ಯಾನ್‌ಕೋಸ್ ಗೀವ್‌ಅವೇಯಲ್ಲಿ ಸುರೇಶ್ ಪೂಜಾರಿ ಬೈಲೂರುರವರು ವಿಜೇತರಾದರು. ಬಹುಮಾನವನ್ನು ಮೂಲ್ಕಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹರ್ಷರಾಜ್ ಶೆಟ್ಟಿ ಜಿ.ಎಂ ಹಾಗೂ ಮೂಲ್ಕಿ ನಾಲ್ಕು ಪಟ್ಣ ಮೊಗವೀರ ಸಭಾ ಅಧ್ಯಕ್ಷರಾದ ಚಂದ್ರಕಾಂತ ಶ್ರಿಯಾನ್ ವಿತರಿಸಿದರು.ಈ ಸಂದರ್ಭದಲ್ಲಿ

ಮೆಸ್ಕಾಂ ಕಾಪು ವಿಭಾಗದ ವತಿಯಿಂದ ಕಾಪು ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ

ಕಾಪು ಪುರಸಭೆ, ಕಾಪುಗ್ರಾಮ ಪಂಚಾಯತ್ ಬೆಳಪು/ಮಜೂರು/ಶಿರ್ವ/ಕಟಪಾಡಿ/ಕೋಟೆಬಡಾ/ಕುತ್ಯಾರು/ಎಲ್ಲೂರು, ಕುರ್ಕಾಲು/ಮುದರಂಗಡಿ/ಇನ್ನಂಜೆ ತೆಂಕ ಎರ್ಮಾಳು/ಹೆಜಮಾಡಿ/ಪಲಿಮಾರು/ಪಡುಬಿದ್ರಿ ನೇತೃತ್ವದಲ್ಲಿ ದಿನಾಂಕ 20.12.2025 ರಂದು ಮೆಸ್ಕಾಂ ಕಾಪು ವಿಭಾಗದ ವತಿಯಿಂದ ಕಾಪು ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ. ದಿನಾಂಕ 20.12.2025 ರಂದು ಸಮಯ ಬೆಳಿಗ್ಗೆ