Yearly Archives: 2025

ದೇರಳಕಟ್ಟೆ: ಮಂಗಳೂರು ವಿವಿ ಎಮ್‌ಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗಾಗಿ ಕಣಚೂರು ಆಸ್ಪತ್ರೆಯಲ್ಲಿ ಮನೋವಿಜ್ಞಾನ ಶಿಬಿರ

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ದಕ್ಷಿಣ ಕೆನರಾದ ಕ್ಯಾಥೋಲಿಕ್ ಸಂಘ ಮತ್ತು ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎಮ್‌ಎಸ್‌ಡಬ್ಲ್ಯುನ ಕೈಗಾರಿಕಾ ಮನೋವಿಜ್ಞಾನ ವಿದ್ಯಾರ್ಥಿಗಳಿಗಾಗಿ...

ರೋಹನ್ ಮೊಂತೆರೋ, ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್

ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಮಾ. 29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ...

ನೀರು ಬರದಿದ್ದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ನಾವೇ ಬರುತ್ತೇವೆ – ಸಂತೋಷ್ ಬಜಾಲ್

ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ...

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಭೇಟಿ:‘ಪ್ರಸಾದ್’ ಯೋಜನೆಯಡಿಯಲ್ಲಿ ದ.ಕ. ದ ಹಲವು ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಮನವಿ

ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ...

ಸಂಸದ ಕ್ಯಾ. ಚೌಟ ಅವರಿಂದ ಶಾಸಕ ಪೂಂಜ ಜತೆಗೂಡಿ ಹೆದ್ದಾರಿ ಸಚಿವ ಗಡ್ಕರಿ ಭೇಟಿ

ನವದೆಹಲಿ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ -ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಜತೆಗೆ ಇಂದು ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿರುವ ಕ್ಯಾ. ಚೌಟ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿರುವ ಪ್ರಮುಖ ದೇವಸ್ಥಾನಗಳನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ಈ ಎರಡು ಸ್ಪರ್‌ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಇಲ್ಲಿಗೆ ಬರುವ ಯಾತ್ರಾರ್ಥಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ವಿನಂತಿಸಿದ್ದಾರೆ. ರಾ.ಹೆ -75 ಹಾಗೂ ರಾ.ಹೆ 275ನ್ನು ಸಂಪರ್ಕಿಸುವ ಪೆರಿಯಶಾಂತಿ-ಪೈಚಾರು ರಸ್ತೆಯನ್ನು ಸ್ಪರ್‌ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು. ಸದ್ಯ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವಾಗ ಬೆಂಗಳೂರು ಕಡೆಯ ಯಾತ್ರಾರ್ಥಿಗಳು ಶಿರಾಡಿ ಘಾಟಿ ಮೂಲಕ ರಾ.ಹೆ-75 ಹಾಗೂ ಕೇರಳ ಕಡೆಯಿಂದ ಬರುವವರು ರಾ.ಹೆ- 275 ಹೆದ್ದಾರಿಯನ್ನು ದಾಟಿ ಬರಬೇಕು. ಹೀಗಿರುವಾಗ, ರಾ.ಹೆ-75 & ರಾ.ಹೆ 275 ಲಿಂಕ್‌ ಮಾಡುವ ಪೆರಿಯಶಾಂತಿ-ಪೈಚಾರು ರಸ್ತೆಯನ್ನು ಸ್ಪರ್‌ ರಸ್ತೆಯಾಗಿ ಮೇಲ್ದರ್ಜೆಗೇರಿಸುವುದರಿಂದ ಭಕ್ತರು-ಪ್ರವಾಸಿಗರಿಗೆ ಕುಕ್ಕೆ-ಧರ್ಮಸ್ಥಳಕ್ಕೆ ಬರುವುದಕ್ಕೆ ನೇರ ಸಂಪರ್ಕ ರಸ್ತೆಯಾಗಲಿದೆ ಎಂದು ಕ್ಯಾ. ಚೌಟ ಸಚಿವ ಗಡ್ಕರಿಗೆ ಮನವರಿಕೆ ಮಾಡಿದ್ದಾರೆ. ಇನ್ನೊಂದೆಡೆ ರಾ.ಹೆ-73 ಹಾಗೂ ರಾ.ಹೆ 169 ಹೆದ್ದಾರಿಯನ್ನು ಸಂಪರ್ಕಿಸುವಲ್ಲಿ ಬೆಳ್ತಂಗಡಿಯ ಗುರುವಾಯನಕೆರೆ-ಬಜಗೋಳಿ ರಸ್ತೆಯನ್ನು ಸ್ಪರ್‌ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕು. ಈ ಹೊಸ ರಸ್ತೆ ನಿರ್ಮಿಸುವುದರಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಬಂದು ಹೋಗುವ ಯಾತ್ರಾರ್ಥಿಗಳಿಗೆ ಪ್ರಯಾಣ ಅವಧಿ ಕಡಿಮೆಗೊಳಿಸುವ ಜತೆಗೆ ಪ್ರವಾಸೋದ್ಯಮದ ಅಭಿವೃದ್ಧಿಗೂ ಹೆಚ್ಚಿನ ಉತ್ತೇಜನ ದೊರೆಯಲಿದೆ. ಜತೆಗೆ, ಈ ಮಾರ್ಗದಲ್ಲಿ ಹಾಲಿ ಇರುವ ಹೆದ್ದಾರಿಗಳಲ್ಲಿನ ವಾಹನಗಳ ದಟ್ಟನೆ ಕಡಿಮೆ ಮಾಡುವುದಕ್ಕೂ ಸಹಕಾರಿಯಾಗಲಿದೆ. ಈ ಹಿನ್ನಲೆಯಲ್ಲಿ ಗುರುವಾಯನಕೆರೆ-ಬಜಗೋಳಿ ಸ್ಪರ್‌ ರಸ್ತೆ ನಿರ್ಮಾಣ ಯೋಜನೆಯ ಬಗ್ಗೆಯೂ ಪರಿಶೀಲನೆ ನಡೆಸಿ ಮಂಜೂರಾತಿ ನೀಡುವಂತೆ ಕ್ಯಾ. ಚೌಟ ಅವರು ಇದೇ ವೇಳೆ ಸಚಿವ ಗಡ್ಕರಿ ಅವರಲ್ಲಿ ಕೋರಿದ್ದಾರೆ. ಈ ಎರಡು ಸ್ಪರ್‌ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ಟೆಂಪಲ್‌ ಟೂರಿಸಂ ಪ್ರೋತ್ಸಾಹಕ್ಕೆ ಹೆಚ್ಚಿನ ಅನುಕೂಲವಾಗುವ ಮೂಲಕ ಜಿಲ್ಲೆಯ ಮೂಲಸೌಕರ್ಯ ಸೌಲಭ್ಯಗಳು ಕೂಡ ಮತ್ತಷ್ಟು ಅಭಿವೃದ್ಧಿಯಾಗಲಿದೆ. ಹೀಗಿರುವಾಗ, ಈ ಪರ್ಯಾಯ ರಸ್ತೆಗಳನ್ನು ಅಭಿವೃದ್ಧಿಪಡಿಸುವುದರಿಂದ ಸ್ಥಳೀಯ ಆರ್ಥಿಕತೆಗೆ ಬೂಸ್ಟ್‌ ದೊರೆಯುವುದಲ್ಲದೆ ಪರಿಸರದ ಮೇಲಾಗುವ ಪ್ರತಿಕೂಲ ಪರಿಣಾಮಗಳನ್ನು ಕೂಡ ಕಡಿಮೆಗೊಳಿಸಬಹುದು ಎಂದು ಕ್ಯಾ. ಚೌಟ ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಎರಡು ಪ್ರಮುಖ ಸ್ಪರ್‌ ರಸ್ತೆಗಳಿಗೆ ಸಂಬಂಧಿಸಿದ ಮನವಿಯಲ್ಲಿ ಆಲಿಸಿರುವ ಸಚಿವ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಪರ್ಯಾಯ ರಸ್ತೆಗಳ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಎರಡು ಮೂಲಸೌರ್ಯ ಅಭಿವೃದ್ಧಿ ಯೋಜನೆಗಳು ನಮ್ಮ ಭಾಗದ ರಸ್ತೆ ಸಂಪರ್ಕ ಉತ್ತಮಪಡಿಸುವ ಜತೆಗೆ ದೇವಸ್ಥಾನಗಳಿಗೆ ದರ್ಶನಕ್ಕೆ ಬರುವ ಭಕ್ತರಿಗೂ ಸುಖಕರ ಪ್ರಯಾಣ ಒದಗಿಸುವುದಕ್ಕೆ ಸಹಕಾರಿಯಾಗಲಿದೆ. ಆ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿಕ ಭಾರತದ ಪರಿಕಲ್ಪನೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ಹೇಳಿದ್ದಾರೆ.

ಕಂಬಳದಲ್ಲಿ ಮುಗಿಯದ ಗೊಂದಲ:ಮುಂದಿನ ಕಂಬಳಗಳನ್ನಾದರೂ ಗೊಂದಲ ರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿ ಬೇಡಿಕೆ

ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ...

ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿ ವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಕೋಟ್ಯಾನ್

ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ...

ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ

ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ...

ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ ಡಾ. ಸಂದೀಪ್ ಶೆಟ್ಟಿ

ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ...

ಮೂಡುಬಿದಿರೆ: ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವಷ೯ಗಳ ನಂತರ ಬಂಧಿಸಿದ ಪೊಲೀಸರು

ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999...

Most Read