Home 2026 January (Page 2)

ಅಜಿತ್‌ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಸಾವು

ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಜಿತ್ ಪವಾರ್ ಸೇರಿದಂತೆ ಪಿಎಸ್ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರು ಆಯ್ಕೆ

ಪಾವಂಜೆ : ಓಂ ಕ್ರಿಕೆಟರ್ಸ ಪಾವಂಜೆ ಇದರ ವಾರ್ಷಿಕ ಮಹಾಸಭೆಯು ಸುಕೇಶ್ ಪಾವಂಜೆ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಘಟನೆಯ ನೂತನ ಅಧ್ಯಕ್ಷರಾಗಿ ಗಣೇಶ್ ದೇವಾಡಿಗರವರನ್ನು ಆಯ್ಕೆ ಮಾಡಲಾಯಿತು. ಸಂಸ್ಥೆಯ ಉಪಾಧ್ಯಕ್ಷರಾಗಿ ಪ್ರಮೋದ್, ಕಾರ್ಯದರ್ಶಿಯಾಗಿ ವರುಣ್, ಕೋಶಾಧಿಕಾರಿಯಾಗಿ ಸುನಿಲ್ ಕುಮಾರ್, ತಂಡದ ಕಪ್ತಾನರಾಗಿ ಕಾರ್ತಿಕ್, ಉಪ ಕಪ್ತಾನರಾಗಿ ಪ್ರವೀಣ್

ಉಡುಪಿ: ನೇತ್ರ ಜ್ಯೋತಿ ಕಾಲೇಜಿನಲ್ಲಿ ಸಂಭ್ರಮದ 77ನೆ ಗಣರಾಜ್ಯೋತ್ಸವ

ಉಡುಪಿ: ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ 77ನೆಯ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿದ ಸಾಯಿ ರಾಧಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಮನೋಹರ್ ಎಸ್. ಶೆಟ್ಟಿಯವರು ಮಾತನಾಡಿ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅನೇಕ

ಶ್ರೀ ಬಾಲಾಂಜನೇಯ ದೇವರ ಹಾಡಿನ ವಿಡಿಯೋ ಶೀಘ್ರದಲ್ಲಿ ಬಿಡುಗಡೆ

ಶ್ರೀ ಬಾಲಾಂಜನೇಯ ದೇವರ ವಿಡಿಯೋ ಸಹಿತ ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಹಾಡಿನ ರೆಕಾರ್ಡಿಂಗ್ ಕಾರ್ಯವು 27-01-2026 ಮಧ್ಯಾಹ್ನ ಕ್ಯಾಡ್ ಸ್ಟೂಡಿಯೋದಲ್ಲಿ ನಡೆಯಿತು. ಈ ಸಂದರ್ಭ ಗಾಯಕರಾದ ರವೀಂದ್ರ ಪ್ರಭು ಇವರೊಂದಿಗೆ ಗೀತೆ ರಚನೆಕಾರ ಯಶವಂತ ಬೋಳೂರು ಹಾಗು ದೇವಸ್ಥಾನದ ಅಧ್ಯಕ್ಷರಾದ ರಂಜನ್ ಕಾಂಚನ್ ಉಪಸ್ಥಿತರಿದ್ದರು.

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು

ಮೂಡುಬಿದಿರೆ : 60 ಅಡಿ ಆಳದ ಬಾವಿಗೆ ಬಿದ್ದ ಹಸುವೊಂದನ್ನು ಮೂಡುಬಿದಿರೆಯ ಅಗ್ನಿಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಮಿಜಾರಿನಲ್ಲಿ ಸೋಮವಾರ ನಡೆದಿದೆ. ಬಡಗಮಿಜಾರಿನ ನಿವಾಸಿ ಜಯರಾಮ್ ಗೌಡ ಎಂಬುವವರಿಗೆ ಸೇರಿದ ಸುಮಾರು ೬೦ ಅಡಿ ಆಳ ಹಾಗೂ ೫ ಅಡಿ ಅಗಲದ ಬಾವಿಗೆ ಹಸು ಆಕಸ್ಮಿಕವಾಗಿ ಬಿದ್ದಿತ್ತು.

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ 77ನೇ ಗಣರಾಜ್ಯೋತ್ಸವ

ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 77ನೇ ವರ್ಷದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಜನವರಿ 26ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಕುರುಂಜಿಭಾಗ್ ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಧ್ವಜರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ

ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಮೂಡುಬಿದಿರೆ ಪುರಸಭೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಾಧಿಕಾರಿ ಇಂದು ಎಂ., ಪುರಸಭಾ ಕಂದಾಯ ಅಧಿಕಾರಿ ಜ್ಯೋತಿ, ಸುಧೀಶ್ ಹೆಗ್ಡೆ, ಸಮುದಾಯ ಸಂಘಟಕ ಪ್ರಸನ್ನ, ಬಿಲ್ ಕಲೆಕ್ಟರ್ ವಿಜಯಪ್ರಕಾಶ್ ಹಾಗೂ ಪೌರಕಾಮಿ೯ಕರು ಭಾಗವಹಿಸಿದ್ದರು.

2 ಕೋಟಿ ರೂಪಾಯಿ ವೆಚ್ಚದ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಪಡುಬಿದ್ರಿ: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಬಿದ್ರಿ ಬೀಜ್ ಬಳಿ ಸಮುದ್ರ ಕೊರೆತ ದೀರ್ಘಕಾಲಿಕ ಪ್ರತಿಬಂಧಕ ಸಂರಕ್ಷಣಾ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 2 ಕೋಟಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ

ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಭಾರತಿ ಎಸ್ ರೈರವರು ಸಲ್ಲಿಸಿದ “ರಿಇನ್ವೆಂಟಿಂಗ್ ಕರ್ಣ: ಅನ್ ಎಕ್ಸಪ್ಲೋರೇಷನ್ ಆಫ್ ಸೆಲೆಕ್ಟ್ ರಿಟೆಲ್ಲಿಂಗ್ಸ್ ಆಫ್ ದ ಮಹಾಭಾರತ”(REINVENTING KARNA: AN EXPLORATION OF SELECT RETELLINGS OF THE MAHABHARATA) ಎಂಬ ಮಹಾ ಪ್ರಬಂಧಕ್ಕೆ ಮಂಗಳೂರಿನ ಶ್ರೀನಿವಾಸ

ಕಾಪು ಪುರಸಭೆ ವ್ಯಾಪ್ತಿಯ 15 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ವಾರ್ಡಿನ ಮಾತಾ ರೆಸಿಡೆನ್ಸಿ ಬಳಿಯ ಅಲ್ಪಸಂಖ್ಯಾತರ ಕಾಲೋನಿ ರಸ್ತೆ ಅಭಿವೃದ್ಧಿಗೆ 15 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 26-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ,