HomeFresh Newsಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಉಡುಪಿಯಲ್ಲಿ 5ನೇ ನೂತನ ಶಾಖೆಯು ಉದ್ಘಾಟನೆ

ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಉಡುಪಿಯಲ್ಲಿ 5ನೇ ನೂತನ ಶಾಖೆಯು ಉದ್ಘಾಟನೆ

ಮುಲ್ಕಿ: ಹಳಿಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಲಿ. ಇದರ 5ನೇ ಶಾಖೆಯ ಉದ್ಘಾಟನಾ ಸಮಾರಂಭವು ಅಕ್ಟೋಬರ್ 25ರಂದು ಭಾನುವಾರ ನಡೆಯಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಉಡುಪಿಯ ಸನಿಲ್ ಪ್ಲಾಜಾದಲ್ಲಿ ಕಾರ್ಯಾರಂಭ ಮಾಡಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಸಮಾರಂಭ ನಡೆಯಲಿದ್ದು, ಸಹಕಾರ ಕ್ಷೇತ್ರದ ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಮಾರಂಭವನ್ನು ಶ್ರೀ ಎಂ. ದುಗ್ಗಣ್ಣ ಸಾವಂತರು ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ಪ್ರಮುಖರು, ಬ್ಯಾಂಕಿಂಗ್ ವಲಯದ ಪ್ರತಿನಿಧಿಗಳು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿರಲಿದ್ದಾರೆ. ಸೊಸೈಟಿಯು ಗ್ರಾಹಕರಿಗೆ ವಿವಿಧ ರೀತಿಯ ಠೇವಣಿ ಯೋಜನೆಗಳು, ಸಾಲ ಸೌಲಭ್ಯಗಳು ಹಾಗೂ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುತ್ತಿದೆ.


ಠೇವಣಿ ಯೋಜನೆಗಳಲ್ಲಿ ಉಳಿತಾಯ ಖಾತೆ, ನಿರಖು ಠೇವಣಿ, ದೈನಂದಿನ ಠೇವಣಿ ಹಾಗೂ ಮಾಸಿಕ ಮರುಕಳಿಸುವ ಠೇವಣಿ ಸೌಲಭ್ಯಗಳು ಸೇರಿವೆ. ಹಿರಿಯ ನಾಗರಿಕರು ಸೇರಿದಂತೆ ವಿವಿಧ ವರ್ಗದ ಗ್ರಾಹಕರಿಗೆ ಆಕರ್ಷಕ ಬಡ್ಡಿದರಗಳ ಠೇವಣಿ ಯೋಜನೆಗಳನ್ನು ಪರಿಚಯಿಸಲಾಗಿದೆ. ಯುಪಿಐ ಪಾವತಿ ಮತ್ತು ಸ್ಕ್ಯಾನ್ ಆ್ಯಂಡ್ ಪೇ ಸೌಲಭ್ಯಗಳನ್ನೂ ಒದಗಿಸಲಾಗುತ್ತಿದೆ.
ಹೊಸ ಶಾಖೆಯ ಆರಂಭದಿಂದ ಸ್ಥಳೀಯ ಜನರಿಗೆ ಸಹಕಾರ ಬ್ಯಾಂಕಿಂಗ್ ಸೇವೆಗಳು ಮತ್ತಷ್ಟು ಹತ್ತಿರವಾಗಲಿದ್ದು, ಗ್ರಾಹಕರಿಗೆ ಸುಲಭವಾಗಿ ಹಣಕಾಸು ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

swarna sep
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments