72ನೇ ಸೀನಿಯರ್ ಪುರುಷರ ಮತ್ತು ಮಹಿಳೆಯರ ನ್ಯಾಷನಲ್ ವಾಲಿಬಾಲ್ ಚಾಂಪಿಯನ್ಶಿಪ್ : ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ

ಕರ್ನಾಟಕ ರಾಜ್ಯ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆ ಬೆಂಗಳೂರಿನಲ್ಲಿ ನಡೆಯಲಿದೆ. ಅಕ್ಟೋಬರ್ 18 ರಂದು ಭಾರತೀಯ ವಾಲಿಬಾಲ್ ಫೆಡರೇಶನ್ (ವಿಎಫ್‌ಐ) ಕಳುಹಿಸಿರುವ ಸುತ್ತೋಲೆಯ ಪ್ರಕಾರ, ಪುರುಷರು ಮತ್ತು ಮಹಿಳೆಯರ 72 ನೇ ಸೀನಿಯರ್ ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಜನವರಿ 04, ರಿಂದ 11, 2026 ರವರೆಗೆ ನಡೆಯಲಿದೆ.
ಚಾಂಪಿಯನ್‌ಶಿಪ್‌ಗೆ ಸಿದ್ಧತೆಯಾಗಿ, ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ​​(ಕೆವಿಎ) ಕರ್ನಾಟಕ ರಾಜ್ಯ ಪುರುಷ ಮತ್ತು ಮಹಿಳಾ ತಂಡಗಳನ್ನು ರಚಿಸಲು ಆಯ್ಕೆ ಪ್ರಕ್ರಿಯೆ ದಿನಾಂಕ: 08 ಡಿಸೆಂಬರ್ 2025 ರಂದು ಬೆಳಗ್ಗೆ 9:00 ಗಂಟೆಗೆ ಭಾರತೀಯ ಕ್ರೀಡಾ ಪ್ರಾಧಿಕಾರ (SAI), NSSC, ಬೆಂಗಳೂರಿನಲ್ಲಿ ನಡೆಯುತ್ತದೆ


ಅರ್ಹತೆ: ಕರ್ನಾಟಕದ ವಾಲಿಬಾಲ್ ಆಟಗಾರರು ಮಾತ್ರ ಭಾಗವಹಿಸಲು ಅವಕಾಶವಿದೆ.
ಎಲ್ಲಾ ಅರ್ಹ ಆಟಗಾರರು ಸಮಯಕ್ಕೆ ಸರಿಯಾಗಿ ಕರ್ನಾಟಕ ರಾಜ್ಯ ವಾಲಿಬಾಲ್ ಎಸೋಸಿಯೇಷನ್ ಇದರ ಅಧ್ಯಕ್ಷರಾದ ಹರ್ಷ ಮತ್ತು ಪ್ರಧಾನ ಕಾರ್ಯದರ್ಶಿ ಎಲ್.ಪಿ. ಆಂಥೋನಿ ಜೋಸೆಫ್ ಅವರಿಗೆ ವರದಿ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾದ ಪುರುಷರ ಮತ್ತು ಮಹಿಳೆಯರ ಆಟಗಾರರಿಗೆ ಉತ್ತಮ ತರಬೇತುದಾರರಿಂದ ಊಟ ಮತ್ತು ವಸತಿಯೊಂದಿಗೆ 20 ದಿವಸದ ತರಬೇತಿ ಶಿಬಿರವನ್ನು ನೀಡಲಾಗುವುದೆಂದು ಕರ್ನಾಟಕ ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಇದರ ಕಾರ್ಯಕಾರಿ ಸಮಿತಿ ಸದಸ್ಯರಾದ ಸಾಲ್ಮರ ಶರೀಫ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ..

Related Posts

Leave a Reply

Your email address will not be published.