HomeFresh Newsಮೂಡುಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಮೂಡುಬಿದಿರೆ: ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ಸಮಾರಂಭವನ್ನು ಕಾಲೇಜಿನ ಆವರಣದಲ್ಲಿ ನಡೆಯಿತು.

ಕಾಲೇಜಿನ ಟ್ರಸ್ಟಿ ಮೆಹಬೂಬ್ ಬಾಷಾ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಪವಿತ್ರ ದಿನವು ನಮ್ಮ ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಏಕತೆಯ ಮಹತ್ವವನ್ನು ನೆನಪಿಸುವುದಾಗಿ ಹೇಳಿದರು. ಈ ವರ್ಷವೂ ಭಾರತವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗಲಿ, ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಕನಸುಗಳು, ಹೊಸ ಆಶಯಗಳು ಮತ್ತು ಹೊಸ ಅವಕಾಶಗಳು ಮೂಡಿಬರಲಿ ಎಂದರು.

ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಲ್ಲಿ ಓರ್ವರಾದ ಸುಭಾಶ್ ಝಾ ಅವರು ನಮ್ಮ ಸಂವಿಧಾನವನ್ನು ಮಾರ್ಗದರ್ಶಿಸುವಲ್ಲಿ ಮುನ್ನುಡಿಯ ಐದು ಮಹತ್ವದ ಪದಗಳು — ಸಮಾಜವಾದಿ, ಪ್ರಜಾಸತ್ತಾತ್ಮಕ, ಧರ್ಮನಿರಪೇಕ್ಷ ಮತ್ತು ಗಣರಾಜ್ಯ — ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳು ಭಾರತವನ್ನು ಉತ್ತಮ ದೇಶವನ್ನಾಗಿ ರೂಪಿಸಲು ನೆರವಾಗುತ್ತವೆ. ಭಾರತವನ್ನು ಭೂಮಿಯ ಮೇಲಿನ ಅತ್ಯುತ್ತಮ ರಾಷ್ಟ್ರವನ್ನಾಗಿ ಮಾಡುವ ಹೊಣೆ ನಮ್ಮದೇ ಆಗಿದೆ. ಇದನ್ನು ಸಾಧಿಸಲು ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು. ಇದುವೇ ನಿಮ್ಮ ಧ್ಯೇಯವಾಗಿರಬೇಕು ಎಂದರು

ಕಾಲೇಜಿನ ಟ್ರಸ್ಟಿ ಹಾಗೂ ಪ್ರಾಂಶುಪಾಲರಾದ ಡಾ. ಎಸ್ . ಎನ್. ವೆಂಕಟೇಶ್ ನಾಯಕ್ ರವರು ಮಾತನಾಡಿ,ಇಂದು ನಾವು ಕೇವಲ ಗಣರಾಜ್ಯೋತ್ಸವವನ್ನು ಮಾತ್ರ ಆಚರಿಸುತ್ತಿಲ್ಲ, ನಮ್ಮ ಸಂವಿಧಾನದ ಆತ್ಮವನ್ನೂ ಆಚರಿಸುತ್ತಿದ್ದೇವೆ. ಸಮಾಜದ ಹಿತಕ್ಕಾಗಿ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶಿಕ್ಷಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂಬ ಸಂದೇಶವನ್ನು ಅವರು ನೀಡಿದನು.

ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಗಳಾದ ಚಂದ್ರಶೇಖರ ರಾಜೇಅರಸ್, ಯೋಗೇಶ್ ಬೆಡೇಕರ್, ಡಾ.ಶರತ್ ಗೋರೆ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಅರುಣ್ ಡಿಸಿಲ್ವಾ ಉಪಸ್ಥಿತರಿದ್ದರು .

ವಿವಿಧ ಸ್ಪರ್ಧೆಗಳು ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದ ವಿದ್ಯಾರ್ಥಿಗಳಿಗಾಗಿ ಇಂದು ಬಹುಮಾನ ವಿತರಿಸಲಾಯಿತು.

ವಿದ್ಯಾರ್ಥಿನಿ ಸಮರ್ಥಿನಿ ಸ್ವಾಗತಿಸಿದರು. ರಿಯಾ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ರಾಧಿಕಾ ನಿರೂಪಿಸಿದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments