HomeFresh Newsಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಕುತ್ಯಾರು/ಪಡುಬಿದ್ರಿ: ಇಲ್ಲಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಆಸೆಟ್‌ನ ಉಪಾಧ್ಯಕ್ಷರಾದ ಶ್ರೀ ವಿವೇಕ್ ಆಚಾರ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವ ಕುರಿತು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅಸೆಟ್ ನ ಅಧ್ಯಕ್ಷರಾದ ಶ್ರೀ ಬಿ. ಸೂರ್ಯಕುಮಾರ್ ಹಳೆಯಂಗಡಿ, ಸಂಸ್ಥೆಯ ಕಾರ್ಯದರ್ಶಿ ಶ್ರೀ ಗುರುರಾಜ್ ಆಚಾರ್ಯ, ಸದಸ್ಯರುಗಳಾದ ಶ್ರೀ ಜನಾರ್ಧನ ಆಚಾರ್ಯ ಬಜಕೂಡ್ಲು ಹಾಗೂ ಶ್ರೀ ಸುಂದರ ಆಚಾರ್ಯ ಮರೋಳಿ ಉಪಸ್ಥಿತರಿದ್ದು ಶುಭಕೋರಿದರು. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ, ಶಿಕ್ಷಕವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಣ್ಣುಮನ ಸೆಳೆದ ಮಕ್ಕಳ ಛದ್ಮವೇಷ ಸ್ಪರ್ಧೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಲೆಯ ಪ್ಲೇ ಕ್ಲಾಸ್, ಎಲ್.ಕೆ.ಜಿ, ಯು.ಕೆ.ಜಿ ಹಾಗೂ 1 ಮತ್ತು 2ನೇ ತರಗತಿಯ ಪುಟಾಣಿ ಮಕ್ಕಳಿಗಾಗಿ ವಿವಿಧ ಸ್ವಾತಂತ್ರ್ಯ ಹೋರಾಟಗಾರರ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪುಟಾಣಿ ಮಕ್ಕಳು ವಿವಿಧ ದೇಶಪ್ರೇಮಿ ನಾಯಕರ ವೇಷಭೂಷಣಗಳಲ್ಲಿ ಮಿಂಚಿ ಎಲ್ಲರ ಗಮನ ಸೆಳೆದರು. ತದನಂತರ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments