HomeFresh Newsಬಂಟ್ವಾಳ: ಸಂಗಬೆಟ್ಟು ಬಾಕಿಮಾರು ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ: ಸಂಗಬೆಟ್ಟು ಬಾಕಿಮಾರು ಅಂಗನವಾಡಿ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಬಾಕಿಮಾರು ಅಂಗನವಾಡಿ ಕಟ್ಟದ ಶಿಲಾನ್ಯಾಸ ಕಾರ್ಯಕ್ರಮವು ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಭಾಕರ ಐಗಳ್ ರವರ ಉಪಸ್ಥಿತಿಯಲ್ಲಿ ಇತ್ತೀಚಿಗೆ ಜರಗಿತು. ಶಿಲಾನ್ಯಾಸವನ್ನು ನಿವೃತ್ತ ಶಿಕ್ಷಕರಾದ ದಾಮೋದರ್ ರಾವ್ ಸಂಗಬೆಟ್ಟು ನೆರೆವೇರಿಸಿದರು.
ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಸಿದ್ದಕಟ್ಟೆಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಗ್ರಾಮ ಪಂಚಾಯತ್ ಸದಸ್ಯರಾದ ಸುನೀಲ್ ಶೆಟ್ಟಿಗಾರ್, ಉದಯ ಪೂಜಾರಿ, ದಾಮೋದರ್ ಪೂಜಾರಿ, ವಿದ್ಯಾ ಪ್ರಭು, ಹೇಮಾಲತ, ಶಕುಂತಲಾ, ಶಾಂತ, ಪ್ರೇಮ, ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ನೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮ ನಾಯ್ಕ್, ಕಾರ್ಯದರ್ಶಿ ರೋಹಿಣಿ ಶೆಟ್ಟಿ ಗಣ್ಯರಾದ ಮಾದವ ಶೆಟ್ಟಿಗಾರ್, ಪದ್ಮನಾಭ ಶೆಟ್ಟಿಗಾರ್,ಚಂದಪ್ಪ ಪೂಜಾರಿ, ನೋಣಯ ಶೆಟ್ಟಿಗಾರ್, ನಾರಾಯಣ ಪುಜಾರಿ ಸಂಗಬೆಟ್ಟು, ಗುತ್ತಿಗೆದಾರ ಉಮೇಶ್ ಗೌಡ ಹಾಗೂ ಅಂಗನವಾಡಿ ಕಾರ್ಯಕರ್ತೆ ಶಾರದ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments