HomeFresh Newsಪಡುಬಿದ್ರಿ: ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

ಪಡುಬಿದ್ರಿ: ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶಕ್ಕೆ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ಪಲಿಮಾರಿನ ನಡಿಯೂರು ಕೊಪ್ಪಲ ರಸ್ತೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳುಗಾರಿಕೆಯ ಬಗ್ಗೆ ಮಾಹಿತಿ ಪಡೆದ ಪಡುಬಿದ್ರಿ ಎಸ್ಸೈ ಪ್ರಸನ್ನ ಎಂ.ಎಸ್. ಸಿಬ್ಬಂದಿಗಳೊಂದಿಗೆ ನಂದಿಕೂರು ಪಲಿಮಾರು ರಸ್ತೆಯಾಗಿ ಪೊಲೀಸ್ ವಾಹನದಲ್ಲಿ ಸಂಚರಿಸುತ್ತಿದ್ದಾಗ ಅವರಾಲು ಮಟ್ಟು ಕಡೆಯಿಂದ ಕುಂಜ್ಞಾಲಿ ತೋಟ ಸಣ್ಣ ಸೇತುವೆ ಬಳಿ ಕೆ.ಎಲ್. 60-ಎ.9937ನೋಂದಾನಿ ಸಂಖ್ಯೆಯ ಟಿಪ್ಪರೊಂದು ಪೊಲೀಸ್ ವಾಹನ ನೋಡಿ ಪಕ್ಕದ ಕಚ್ಚಾ ರಸ್ತೆಗೆ ಟಿಪ್ಪರ್ ತಿರುಗಿಸಿ ವಾಯುವೇಗದಿಂದ ಮುಂದೋಡಿದ್ದು ಪೊಲೀಸ್ ವಾಹನ ಅದರ ಬೆನ್ನತ್ತಿದಾಗ ಟಿಪ್ಪರ್ ಮಣ್ಣ ರಸ್ತೆಯಲ್ಲಿ ಹೂತು ಹೋಗಿ ನಿಂತಿದ್ದು ಚಾಲಕ ಓಡಿ ಪರಾರಿಯಾಗಿದ್ದಾನೆ. ಟಿಪ್ಪರ್ ಸಹಿತ ಮರಳನ್ನು ವಶ ಪಡಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ಮರಳು ಸಾಗಾಟಕ್ಕೆ ಬೇಕಾದ ದಾಖಲೆಗಳಾಗಲಿ. ವಾಹನದ ದಾಖಲೆಗಳಾಗಲಿ ಇಲ್ಲದ ವಾಹನದಲ್ಲಿ ಮರಳನ್ನು ಕದ್ದು ತುಂಬಿಸಿಕೊಂಡು ಸಾಗಿಸುತ್ತಿರುವುದಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments