HomeFresh Newsಹಿರಿಯ ರಂಗಭೂಮಿ ಕಲಾವಿದ ವಿ.ಜಿ. ಪಾಲ್ ವಿಧಿವಶ

ಹಿರಿಯ ರಂಗಭೂಮಿ ಕಲಾವಿದ ವಿ.ಜಿ. ಪಾಲ್ ವಿಧಿವಶ

ಹಿರಿಯ ರಂಗಭೂಮಿ ಕಲಾವಿದ, ರಂಗಕರ್ಮಿ, ಸಂಘಟಕ ವಿ.ಜಿ. ಪಾಲ್‌ ವೇಣುಗೋಪಾಲ್‌ ಟಿ. ಕೋಟ್ಯಾನ್‌ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ಬೊಕ್ಕಪಟ್ಣ ಶಾಲೆಯಲ್ಲಿ ಶಿಕ್ಷಣ, ಬಳಿಕ ಐಟಿಐ ಶಿಕ್ಷಣ ಪಡೆದ ಅವರು ಸ್ವಲ್ಪ ಕಾಲ ಮುಂಬಯಿಯಲ್ಲಿ, ಬಳಿಕ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗಿಯಾಗಿದ್ದರು.

1961ರಲ್ಲಿ “ಕಲ್ಜಿಗದ ಕುರುಕ್ಷೇತ್ರ’ ತುಳುನಾಟಕದ ಮೂಲಕ ಮೊದಲ ರಂಗಪ್ರವೇಶ ಮಾಡಿದರು. ಸುಮಾರು 2 ಸಾವಿರ ಸಾಮಾಜಿಕ, ಐತಿಹಾಸಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ. 50 ಧ್ವನಿ ಸುರುಳಿಗಳಿಗೆ ಕಂಠದಾನ ಮಾಡಿದ್ದಾರೆ. ಪೂ ಪನ್ನೀರ್‌ ತುಳು ವೀಡಿಯೋ ಚಿತ್ರ, ಹಲವು ಕಿರುತೆರೆ ಚಿತ್ರಗಳಲ್ಲಿ ಅಭಿನಯಿಸಿದ್ದು ಕೇಂದ್ರ ಸರಕಾರದ ಕರಾವಳಿ ಮತ್ತು ತೆರೆಗಳು ಸಾಕ್ಷ್ಯಚಿತ್ರಗಳಲ್ಲೂ ಪಾತ್ರ ಮಾಡಿದ್ದಾರೆ. ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

ನಾಟಕ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ದ.ಕ. ರಾಜ್ಯೋತ್ಸವ ಪ್ರಶಸ್ತಿ, ರಂಗ ಚಾವಡಿ ಪ್ರಶಸ್ತಿ, ಮೊಗವೀರಸಾಧನಾ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ.

ವಿಜಿ ಪಾಲ್ ನಿಧನಕ್ಕೆ ರಂಗಭೂಮಿ ಕಲಾವಿದರು ಸೇರಿದಂತೆ ಅವರ ಅಭಿಮಾನಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments