ಬರಗಾಲದಿಂದಾಗಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಆದರೆ ಕೆಂದ್ರ ಸರಕಾರವು ತಾರತಮ್ಯ ನೀತಿ ಅನುಸರಿಸುತ್ತ ಪರಿಹಾರ ನೀಡುತ್ತಿಲ್ಲ ಎಂದು ರಾಜ್ಯ ಸರಕಾರದ ಪರವಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ಅವರು ಈ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೊಟ್ಟಿ ನಡೆಸಿ ಮಾಹಿತಿ ನೀಡಿದರು. ಬರಗಾಲದಲ್ಲಿ ಎನ್‌ಡಿಆರ್‌ಎಫ್/ಎಸ್‌ಡಿಆರ್‌ಎಫ್ ಎಷ್ಟು ಪರಿಹಾರ ನೀಡಬೇಕು ಎಂದು ಕ್ರಮ ನಿಯಮ ಇದೆ. ಮೋದಿಯವರ ಸರಕಾರವು ಯಾವುದೇ ನಿಯಮವನ್ನು ಅನುಸರಿಸುತ್ತಿಲ್ಲ. ಸಂವಿಧಾನದ ರೀತ್ಯಾ ಎನ್‌ಡಿಆರ್‌ಎಫ್‌ನಿಂದ ಪರಿಹಾರ ಕೊಡಿಸಲು ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆರ್ಟಿಕಲ್ 32ರ ಅಡಿ ಅನಿವಾರ್ಯವಾಗಿ ನಾವು ಕೇಂದ್ರ ಸರಕಾರದ ವಿರುದ್ಧ ಈ ಕೋರ್ಟು ಯುದ್ಧ ನಡೆಸಬೇಕಾಗಿ ಬಂದಿದೆ ಎಂದು ಅವರು ತಿಳಿಸಿದರು.
