HomeUncategorizedಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್ ಎಲ್ ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ‌ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100 ಫಲಿತಾಂಶವನ್ನು ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವೃದ್ಧಿ ಎ ಕೊಂಡೆ ಅತಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.ಇವರು ಶ್ರೀ ಅಶೋಕ್ ಬಿ ಕೊಂಡೆ ಮತ್ತು ಶ್ರೀಮತಿ ಮಧುರ ದಂಪತಿಗಳ ಪುತ್ರಿ.


ದ್ವಿತೀಯ ಸ್ಥಾನಿಯಾದ ಮಾನ್ಯ ಆರ್ ಶೆಟ್ಟಿ ಶ್ರೀ ರವೀಂದ್ರ ದರ್ಬೆ ಮತ್ತು‌‌ ಶ್ರೀಮತಿ ಹರಿಣಿ ದಂಪತಿಗಳ ಪುತ್ರಿ. ತೃತೀಯ ಸ್ಥಾನವನ್ನು ಪಡೆದುಕೊಂಡಿರುವ ಪ್ರೇಕ್ಷಾ ಶ್ರೀ‌ ಕೆ. ಆನಂದ ಕುಲಾಲ್ ಮತ್ತು‌ ಶ್ರೀಮತಿ‌ ಸುಶೀಲ ಎ ದಂಪತಿಗಳ‌ ಪುತ್ರಿ.ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ , ಶಾಲೆಯ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments