ಕಾಪು ಕೊಪ್ಪಲಂಗಡಿ ಬಳಿ ಭೀಕರ ಅಪಘಾತ : ಇಬ್ಬರ ಸ್ಥಿತಿ ಗಂಭೀರ

ಇಂದು ನಸುಕಿನ ವೇಳೆ ಅತೀ ವೇಗವಾಗಿ ಬಂದ ಕಾರೊಂದು ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರು ತೀವೃ ಜಖಂ ಗೊಂಡಿದ್ದು ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾದರೆ ಮತ್ತಿಬ್ಬರಿಗೆ ತೀವೃ ಸ್ವರೂಪದ ಗಾಯಗಳಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದ ಕಾರು ಕಾಪುವಿನ ಕೊಪ್ಪಲಂಗಡಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಬಹುತೇಕ ನಜ್ಜುಗುಜಾಗಿದ್ದು, ಅದರಲ್ಲಿ ಸಿಲುಕಿಕೊಂಡ ಇಬ್ಬರ ಸ್ಥಿತಿ ಗಂಭೀರವಾಗಿದ್ದರೆ ಉಳಿದಿಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂಬುದಾಗಿ ಪ್ರತ್ಯಕ್ಷಧರ್ಶಿಗಳು ತಿಳಿಸಿದ್ದಾರೆ. ಇವರು ಯಾರು ಎಲ್ಲಿಂದ ಬಂದಿದ್ದಾರೆ ಎಲ್ಲಿಗೆ ಹೋಗುವವರು ಯಾವುದೇ ಮಾಹಿತಿ ಲಭ್ಯವಾಗಿಲ್ಲ ಸ್ಥಳಕ್ಕೆ ಹೆಜಮಾಡಿ ಟೋಲ್ ಸಿಬ್ಬಂದಿಗಳು ಸಹಿತ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
