HomeFresh Newsಉಪ್ಪಿನಂಗಡಿ: ಕೆ ಎಸ್‌ ಆರ್‌ ಟಿಸಿ ಐರಾವತ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ದುರಂತ

ಉಪ್ಪಿನಂಗಡಿ: ಕೆ ಎಸ್‌ ಆರ್‌ ಟಿಸಿ ಐರಾವತ ಬಸ್‌ನಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ದುರಂತ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್‌ಗೆ ಬೆಂಕಿ ಹಿಡಿದ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದು, ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ.

ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇಟ್ಬಾಲ್, ಸ್ಥಳೀಯರಾದ ಜಾಯಿ, ಸ್ನೇಕ್ ಝಕಾರಿಯಾ,ಸಿದ್ದೀಕ್ ಕೊಪ್ಪಳ ಸೇರಿದಂತೆ ಅಟೋ ಚಾಲಕರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬಸ್ಸಿನ ಹಿಂಬದಿಗೆ ಹಾನಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments