HomeFresh Newsಪಡುಪಣಂಬೂರು : ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ ವತಿಯಿಂದ ಸ್ವಾತಂತ್ರೋತ್ಸವ

ಪಡುಪಣಂಬೂರು : ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ ವತಿಯಿಂದ ಸ್ವಾತಂತ್ರೋತ್ಸವ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ  ಗೌರವಾಧ್ಯಕ್ಷರಾದ ಗುರುರಾಜ್ ಎಸ್ ಪೂಜಾರಿಯವರು ವಹಿಸಿದ್ದರು.

ಧ್ವಜಾರೋಹಣವನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಸುಮ ಚಂದ್ರಶೇಖರ್ ರವರು ನೆರವೇರಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಪೋಷಕರಾದ ಗಣೇಶ್ ಜಿ ಬಂಗೇರ, ಅಮ್ಜದ್, ಅಬ್ದುಲ್ ಕರೀಂ, ಸದಾಶಿವ ಕುಂದರ್, ಸಂಜೀವ ಕರ್ಕೇರ, ಫೇಮಸ್ ಯೂತ್ ಕ್ಲಬ್ಬಿನ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು, ಕಾರ್ಯದರ್ಶಿ ಹಿಮಕರ್ ಕೋಟ್ಯಾನ್, ಮಹಿಳಾ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್ ರವರು ಉಪಸ್ಥಿತರಿದ್ದರು

ಕಾರ್ಯಕ್ರಮವನ್ನು ಮಹಮ್ಮದ್ ಶರೀಫ್ ರವರು ನಿರೂಪಿಸಿದರು.

add - Anchan ayurvedic
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments