HomeFresh Newsಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು .

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ನರೇಂದ್ರ ಕುಮಾರ್ ಕೋಟ ಶಿಕ್ಷಕರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಕರ್ಷಕ ಪ್ರೇರಕ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕ, ಭಾವನಾತ್ಮಕವಾಗಿ ರಂಜಿಸಿ ಮಾಹಿತಿ ನೀಡಿದರು. ಅನೇಕ ಮಹಾನ್ ವ್ಯಕ್ತಿಗಳ ಜೀವನ ನಿದರ್ಶನವನ್ನು ನೀಡಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿಯನ್ನು ಹೇಗೆ ಗಳಿಸಬೇಕು ಎನ್ನುವ ಸೂಕ್ತವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿ ಶ್ರೀಮತಿ ಮಮತಾ,ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಝಮ್ರಾನ್ ನಿರೂಪಿಸಿದರೆ, ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿ ಹಾಗೂ ಅತಿಥಿಗಳ ಪರಿಚಯ ವಿದ್ಯಾರ್ಥಿನಿ ಜಯಶ್ರೀ ನಡೆಸಿ, ವಿದ್ಯಾರ್ಥಿನಿ ಪ್ರಿಯದರ್ಶಿನಿ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments