ಎನ್‌ಸಿಯ ಓಮರ್ ಅಬ್ದುಲ್ಲಾ ಮತ್ತೆ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ
ನ್ಯಾಶನಲ್ ಕಾನ್ಫರೆನ್ಸ್‌ನ ನಾಯಕ ಓಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದನ್ನು ಇಂಡಿಯಾ ಮೈತ್ರಿ ಕೂಟವು ಸ್ಪಷ್ಟಪಡಿಸಿದೆ.
ಶೇಖ್ ಅಬ್ದುಲ್ಲಾ, ಅವರ ಮಗ ಫಾರೂಕ್ ಅಬ್ದುಲ್ಲಾ ಹಾಗೂ ಮೊಮ್ಮಗ ಓಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದರು. ಈಗ ಅಲ್ಲಿ ಇಂಡಿಯಾ ಮೈತ್ರಿ ಕೂಟವು ಬಹುಮತ ಸಾಧಿಸಿದೆ; ಅದರಲ್ಲಿ ಎನ್‌ಸಿ ಬಹುತೇಕ ಸ್ಥಾನಗಳನ್ನು ಗೆದ್ದಿದೆ. ಈಗ ಓಮರ್ ಅಬ್ದುಲ್ಲಾರು ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಆಗುತ್ತಿದ್ದಾರೆ. ರಾಜ್ಯ ಸ್ಥಾನಮಾನ ಮರಳಿ ಪಡೆಯುವುದು ಅವರ ಹೋರಾಟವಾಗಿದೆ. ಇಂಡಿಯಾ ಮೈತ್ರಿ ಕೂಟವು 90ರಲ್ಲಿ 52 ಸ್ಥಾನಗಳಲ್ಲಿ ಗೆದ್ದು ಬಹುಮತ ಸಾಧಿಸಿದೆ.


















