HomeFresh Newsಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆ ಗೆಲುವು

ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆ ಗೆಲುವು

 ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments