HomeFresh Newsಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ

ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ.

ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಲ್ಲಿ ಸಂಚರಿಸುತ್ತಿದ್ದ
ಸ್ಕೂಟರ್ ಗೆ ಜೀಪ್ ಢಿಕ್ಕಿ ಹೊಡೆದ ಬಳಿಕ ಕಂದಕಕ್ಕೆ ಉರುಳಿದೆ. ಈ ಘಟನೆಯಿಂದ ರಾ.ಹೆ.ಯಲ್ಲಿ ಕೆಲವು ಘಂಟೆಗಳ ಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಾಸ ಉಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments