HomeFresh Newsದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ...

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಯೋಜನಾಧಿಕಾರಿರವರು ಮಾತನಾಡುತ್ತ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಕ್ಕಳ ಶಿಕ್ಷಣಕ್ಕೆ ಪೂರಕವಾಗಿ ಯೋಜನೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ, ಮೂಲಸೌಕರ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಜಯಾನಂದ ಪಟ್ಟೆ, ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷರಾದ ಎ ವಿ ತೀರ್ಥರಾಮ, ಗುತ್ತಿಗಾರು ಜನ ಜಾಗೃತಿ ವಲಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟಗಳ ವಲಯ ಅಧ್ಯಕ್ಷರಾದ ಯೋಗೀಶ್ ದೇವ, ತಾಲೂಕು ಜನಜಾಗೃತಿ ಸದಸ್ಯರಾದ ಬಾಬು ಗೌಡ ಅಚ್ರಪ್ಪಾಡಿ, ಶಾಲಾ ಮುಖ್ಯ ಗುರುಗಳಾದ ಶ್ರೀಧರ, ಮಾವಿನಕಟ್ಟೆ ಒಕ್ಕೂಟದ ಅಧ್ಯಕ್ಷರಾದ ಭಾನುಪ್ರಕಾಶ್ ರವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಉಷಾಲತಾರವರು, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ಮಕ್ಕಳ ಪೋಷಕರು, ಶಿಕ್ಷಕರು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದರು.ಈ ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ ಸ್ವಾಗತಿಸಿ, ಶಾಲಾ ಮುಖ್ಯ ಗುರುಗಳಾದ ಶ್ರೀಧರರವರು ಧನ್ಯವಾದವಿತ್ತರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments