HomeFresh Newsಕಾರ್ಕಳ: ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿ ಆತ್ಮಹತ್ಯೆ

ಕಾರ್ಕಳ: ಉದ್ಯಮಿಯೋರ್ವ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಉಡುಪಿ ಜಿಲ್ಲೆಯ ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಬೆಳಕಿಗೆ ಬಂದಿದೆ.

ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಶೂಟ್ ಮಾಡಿಕೊಂಡವರು. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಅಲ್ಲಿಂದ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇವರು ಕಾರ್ಕಳ ಪುರಸಭೆ ಸದಸ್ಯ ಸುಭೀತ್ ಎನ್.ಆರ್. ಅವರ ಸಹೋದರ. ಆರ್ಥಿಕ ಮುಗ್ಗಟ್ಟು ಮತ್ತು ಆರೋಗ್ಯ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಕಾರ್ಕಳ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments