HomeFresh Newsಮಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 818 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ   

ಮಂಗಳೂರು: ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ: 818 ತುಳು ಭಾಷಾ ವಿದ್ಯಾರ್ಥಿಗಳು ತೇರ್ಗಡೆ   

    ಮಂಗಳೂರು: ಈ ಬಾರಿಯ ಎಸ್.ಎಲ್. ಸಿ. ಪರೀಕ್ಷೆಯಲ್ಲಿ 818ವಿದ್ಯಾರ್ಥಿಗಳು ತುಳು ಭಾಷಾ ವಿಷಯದಲ್ಲಿ ತೇರ್ಗಡೆಯಾಗಿರುತ್ತಾರೆ. ದಕ್ಷಿಣ  ಕನ್ನಡ ಜಿಲ್ಲೆ ಹಾಗೂ ಉಡುಪಿಯ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ತುಳು ಭಾಷೆಯನ್ನು ಆಯ್ದಕೊಂಡು 847 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 818 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 317 ವಿದ್ಯಾರ್ಥಿಗಳು 100 ಕ್ಕೆ 100 ಅಂಕವನ್ನು ಪಡೆದಿರುತ್ತಾರೆ, ತುಳು ಪಠ್ಯವನ್ನು ಆಯ್ದುಕೊಂಡ ವಿದ್ಯಾರ್ಥಿಗಳಿಗೆ  ಹಾಗೂ ಶಿಕ್ಷಕರಿಗೆ ಕರ್ನಾಟಕ ತುಳು ಸಾಹಿತ್ಯ  ಅಕಾಡೆಮಿಯ  ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರು ಅಭಿನಂದನೆ ಸಲ್ಲಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments