HomeFresh Newsವಿಟ್ಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪ -...

ವಿಟ್ಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ವಿಚಾರದಲ್ಲಿ ಹಣ ಬೇಡಿಕೆ ಒಡ್ಡಿದ ಆರೋಪ – ವಿಟ್ಲ ಎಸೈ ಕೌಶಿಕ್ ಕರ್ತವ್ಯದಿಂದ ಅಮಾನತು

ದಿನಾಂಕ 08.05.2025 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಸದ್ರಿ ಸ್ಥಳಕ್ಕೆ ಕೌಶಿಕ್ ಬಿ ಸಿ, ಪಿ ಎಸ್ ಐ, ವಿಟ್ಲ ಪೊಲೀಸ್ ಠಾಣೆ ರವರು ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗದಿದ್ದು, ಸ್ಥಳದಲ್ಲಿ ಮೋಟಾರು ಸೈಕಲ್ ಕಂಡುಬಂದಿರುತ್ತದೆ.

ಪಿ ಎಸ್ ಐ ಕೌಶಿಕ್ ಬಿ ಸಿ ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಸದ್ರಿ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿರುತ್ತಾರೆ. ಬಳಿಕ ಸದ್ರಿ ಬೈಕ್‌ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿರುತ್ತದೆ. ಸದ್ರಿ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಯ ಮೇಲೆ ದಿನಾಂಕ 12.05.2025 ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments